Thursday, April 30, 2026

ರಾಜಕೀಯ

ರಾಜಕೀಯಸುದ್ದಿ

‘ನಾಪತ್ತೆಯಾಗಿದ್ದ ಶಾಸಕ ಆನಂದ್ ಸಿಂಗ್ ಪತ್ತೆ’ –ಕಹಳೆ ನ್ಯೂಸ್

ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಶಾಸಕ ಆನಂದ್ ಸಿಂಗ್‍ನ ಮೇಲೆ ಹೊಸಪೇಟೆ ನಗರ ಪೊಲೀಸ್ ಠಾಣೆಗೆ ಕಾಂಗ್ರೆಸ್ ಮುಖಂಡರು ದೂರು ನೀಡಿದ್ದು ಈಗ ಶಾಸಕ ಪತ್ತೆಯಾಗಿದ್ದಾರೆ. ಬಳ್ಳಾರಿ ಜಿಲ್ಲೆ ವಿಜಯನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ರಾಜೀನಾಮೆ ನೀಡಿದ ಬಳಿಕ ಕಾಂಗ್ರೆಸ್ ನಾಯಕರ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಆನಂದ್ ಸಿಂಗ್ ಅತೃಪ್ತ ಶಾಸಕರ ತಂಡವನ್ನು ಸೇರಿಕೊಂಡಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಅವರು ಹೊಸಪೇಟೆ ನಗರ ಪೊಲೀಸ್ ಠಾಣೆಗೆ ಹಾಜರಾಗಿ ತಾವು ನಾಪತ್ತೆಯಾಗಿಲ್ಲ...
ರಾಜಕೀಯ

ನಾಯಕ ಬಿ.ಎಸ್. ಯಡಿಯೂರಪ್ಪ ಅವರಿಗೆ ನೇರ ಸವಾಲು ಹಾಕಿದ ಹೆಚ್.ಡಿ.ಕುಮಾರಸ್ವಾಮಿ – ಕಹಳೆ ನ್ಯೂಸ್

ಬೆಂಗಳೂರು : ಅಧಿಕಾರ ಎನ್ನುವುದು ಯಾರಿಗೂ ಶಾಶ್ವತವಲ್ಲ, ನೀವೆಷ್ಟು ದಿನ ಈ ಆಡಳಿತ ಪಕ್ಷದಲ್ಲಿ ಕುಳಿತು ಅಧಿಕಾರ ನಡೆಸುತ್ತೀರಿ ಎಂಬುದನ್ನು ನಾನು ನೋಡುತ್ತೇನೆ ಎಂದು ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಪ್ರತಿಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ ಅವರಿಗೆ ನೇರ ಸವಾಲು ಹಾಕಿದ್ದಾರೆ. ವಿಶ್ವಾಸಮತಯಾಚನೆ ಪ್ರಾಥಮಿಕ ಪೀಠಿಕೆಯಲ್ಲಿ ಮಾತನಾಡಿದ ಸಿಎಂ, ಸರ್ಕಾರ ರಚಿಸಿ ಸಿಎಂ ಸ್ಥಾನದಲ್ಲಿ ಕೂರಲು ಯಡಿಯೂರಪ್ಪ ತುಂಬಾ ಆತುರರಾಗಿದ್ದಾರೆ. ನಾವು ವಿಶ್ವಾಸಮತ ಯಾಚಿಸಲು ಸಿದ್ದರಿದ್ದೇವೆ. ಮತಕ್ಕೆ ಹಾಕುವ ಮುನ್ನ ಕೆಲಸಂಗತಿಗಳನ್ನು ನಾಡಿನ...
ರಾಜಕೀಯ

ಕೇಂದ್ರ ರೈಲ್ವೇ ಸಚಿವರನ್ನು ಭೇಟಿಯಾಗಿ ಹಲವು ಬೇಡಿಕೆಯಿಟ್ಟ ಸಂಸದರು – ಕಹಳೆ ನ್ಯೂಸ್

ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಇವರ ನೇತೃತ್ವದಲ್ಲಿ ಮಂಗಳೂರು ರೈಲ್ವೇ ಯಾತ್ರಿ ಅಭಿವೃದ್ಧಿ ಸಮಿತಿಯವರು ಕೇಂದ್ರ ರಾಜ್ಯ ರೇಲ್ವೇ ಖಾತೆ ಸಚಿವ ಸುರೇಶ್ ಅಂಗಡಿ ಯವರನ್ನು ನವದೆಹಲಿಯಲ್ಲಿ ಭೇಟಿಯಾಗಿದ್ದಾರೆ. ಭೇಟಿಯಾಗಿ ಮಂಗಳೂರನ್ನು ದಕ್ಷಿಣ ರೈಲ್ವೇಯ ಪಾಲಕ್ಕಾಡ್ ವಿಭಾಗದಿಂದ ಬೇರ್ಪಡಿಸಿ ನೈರುತ್ಯ ರೈಲ್ವೇಗೆ ಸೇರಿಸುವಂತೆ 2004ರಲ್ಲಿ ರೈಲ್ವೇ ಬೋರ್ಡ್‍ನಿಂದ ಗೆಜೆಟ್ ನೋಟಿಫಿಕೇಶನ್ ಆಗಿರುತ್ತದೆ. ತೋಕೂರಿನಿಂದ ಮಂಗಳೂರು ಸೆಂಟ್ರಲ್ ನೇತ್ರಾವತಿವರೆಗೆ ಪಾಲಕ್ಕಾಡ್ ರೈಲ್ವೇ ವಿಭಾಗದಲ್ಲಿರುವ ಪ್ರದೇಶವನ್ನು ಬದಲಿಸುವಂತೆ ದಾಖಲೆಗಳನ್ನು ಸಲ್ಲಿಸಲಾಯಿತು....
ರಾಜಕೀಯ

ಮಿಥುನ್ ರೈ ಕೊಟ್ಟಿರುವ ಹೇಳಿಕೆ ದಕ್ಷಿಣ ಕನ್ನಡ ಜಿಲ್ಲೆಯ ಸಂಸ್ಕೃತಿ ಅಲ್ಲ : ಭರತ್ ಶೆಟ್ಟಿ ಆಕ್ರೋಶ – ಕಹಳೆ ನ್ಯೂಸ್

ಮಂಗಳೂರು: ಸುರತ್ಕಲ್ ಟೋಲ್ ಗೇಟ್ ಬಳಿ ಪ್ರತಿಭಟನೆ ಸಂದರ್ಭ ಕಾಂಗ್ರೆಸ್ ಯುವ ಮುಖಂಡ ಮಿಥುನ್ ರೈ ಸಂಸದ ನಳಿನ್ ಕುಮಾರ್ ಕಟೀಲ್ ವಿರುದ್ಧ ಬಳಸಿರುವ ಪದಗಳ ಬಗ್ಗೆ ಭಾರೀ ವಿರೋಧ ವ್ಯಕ್ತವಾಗಿದೆ. ಸಂಸದರ ವಿರುದ್ಧ ಮಿಥುನ್ ರೈ ಆಕ್ಷೇಪಾರ್ಹ ಪದ ಬಳಸಿದ ಕಾರಣ ಈ ಕೂಡಲೇ ಕ್ಷಮೆ ಯಾಚಿಸಬೇಕೆಂಬ ಒತ್ತಾಯವೂ ಕೇಳಿ ಬರುತ್ತಿದೆ. ಮಿಥುನ್ ರೈ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಮಂಗಳೂರು ಉತ್ತರ ಶಾಸಕ ಡಾ ಭರತ್ ಶೆಟ್ಟಿ, "ಸುರತ್ಕಲ್...
ರಾಜಕೀಯ

ಮೈತ್ರಿ ಪಾಳಯಕ್ಕೆ ಆಘಾತದ ಸುದ್ದಿ – ಕಹಳೆ ನ್ಯೂಸ್

ಬೆಂಗಳೂರು: ಸರ್ಕಾರ ವಿಶ್ವಾಸ ಮತ ಯಾಚನೆಗೆ ಸಜ್ಜಾಗಿದ್ದು, ಇಂದು ಅಗ್ನಿ ಪರೀಕ್ಷೆ ಎದುರಾಗಿದೆ. ಈ ವೇಳೆ ಮೈತ್ರಿ ಪಾಳಯಕ್ಕೆ ಆಘಾತದ ಸುದ್ದಿ ಸಿಕ್ಕಿದೆ. ಅನಾರೋಗ್ಯದಿಂದ ಆಸ್ಪತ್ರೆ ಸೇರಿರುವ ಬಳ್ಳಾರಿ ಗ್ರಾಮಾಂತರ ಶಾಸಕ ನಾಗೆಂದ್ರ ಹಾಗೂ ಕಾಗವಾಡ ಶಾಸಕ ಶ್ರೀಮಂತ ಪಾಟೀಲ್ ವಿಶ್ವಾಸಮತ ಯಾಚನೆ ವೇಳೆ ಗೈರಾಗುವ ಸಾಧ್ಯತೆ ಇದೆ. ಸದನಕ್ಕೆ ಹಾಜರಾಗುವಂತೆ ನಾಗೇಂದ್ರ ಅವರಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಮನವಿ ಮಾಡಿದ್ದು, ಇದುವರೆಗೂ ಕೂಡ ಅವರು ಯಾವುದೇ ನಿಲುವು...
ರಾಜಕೀಯ

ಸರ್ಕಾರ ಉಳಿಸಿಕೊಳ್ಳುವತ್ತ ಸಿಎಂ ಕೊನೆಯ ಪ್ರಯತ್ನ – ಕಹಳೆ ನ್ಯೂಸ್

ಬೆಂಗಳೂರು: ಪತನದ ಅಂಚಿನಲ್ಲಿರುವ ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಲು ಮುಖ್ಯಮಂತ್ರಿ ಕುಮಾರಸ್ವಾಮಿ ಕೊನೆಯ ಹಂತದ ಕಸರತ್ತು ನಡೆಸಿದ್ದಾರೆ. ಇದರ ಅಂಗವಾಗಿ ಕಾಂಗ್ರೆಸ್ ಬಂಡಾಯ ನಾಯಕರನ್ನು ಭೇಟಿಯಾಗಲು ಕೊನೆಯ ಪ್ರಯತ್ನ ಮಾಡಿದ್ದಾರೆ. ಹಿರಿಯ ಶಾಸಕ ರಾಮಲಿಂಗಾ ರೆಡ್ಡಿ  ರಾಜೀನಾಮೆ ವಾಪಸ್ ಪಡೆದುಕೊಳ್ಳುವುದಾಗಿ ಕಾಂಗ್ರೆಸ್ ಮುಖಂಡರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದರ ಜೊತೆಗೆ ಎಐಸಿಸಿ ಮುಖಂಡರು, ರೋಷನ್ ಬೇಗ್ ಅವರನ್ನು ರಾಜಿನಾಮೆ ವಾಪಸ್ ಪಡೆಯುವಂತೆ ಮನವೊಲಿಸಿದ್ದಾರೆ ಎಂದು ಹೇಳಲಾಗಿದೆ. ಬುಧವಾರ ರಾತ್ರಿ ಪ್ರಕೃತಿ ರೆಸಾರ್ಟ್‍ಗೆ ಭೇಟಿ ನೀಡಿದ,...
ರಾಜಕೀಯ

ಶಾಸಕರ ರಾಜೀನಾಮೆ ವಿಚಾರ: ನಾಳೆ ಬೆಳಗ್ಗೆ ೧೦:೩೦ಕ್ಕೆ ಸುಪ್ರೀಂ ತೀರ್ಪು – ಕಹಳೆ ನ್ಯೂಸ್

ಅತೃಪ್ತರ ರಾಜೀನಾಮೆ ಪ್ರಕರಣ ವಿಚಾರಣೆ ಸಂಬಂಧ ಇಂದು ಸುಪ್ರೀಂ ಕೋರ್ಟ್‍ನಲ್ಲಿ,೪ ಗಂಟೆಗಳ ಕಾಲವಾದ ಪ್ರತಿವಾದಗಳು ನಡೆದವು. ಇವೆಲ್ಲವನ್ನೂ ಆಲಿಸಿದ ಸುಪ್ರೀಂ ಕೋರ್ಟ್‍ನಲ್ಲಿ ತ್ರಿಸದಸ್ಯ ಸಾಂವಿಧಾನಿಕ ಪೀಠವು ನಾಳೆ ಬೆಳಗ್ಗೆ ೧೦:೩೦ಕ್ಕೆ ತೀರ್ಪು ನೀಡುವುದಾಗಿ ತಿಳಿಸಿದೆ. ಹಾಗೂ ನಾಳೆ ಬೆಳಿಗ್ಗವರೆಗೆ ತೀರ್ಪನ್ನು ಕೋರ್ಟ್ ಕಾಯ್ದಿರಿಸಿದ್ದು, ತೀರ್ಪು ಬರುವವರೆಗೆ ಯಥಾಸ್ಥಿತಿ ಕಾಯುವಂತೆ ಕೋರ್ಟ್ ಆದೇಶಿಸಿದೆ. ತಾವು ಸ್ವಇಚ್ಛೆಯಿಂದ ರಾಜೀನಾಮೆ ನೀಡಿದರೂ ಅದನ್ನು ಅಂಗೀಕರಿಸಲು ಸ್ಪೀಕರ್ ವಿಳಂಬ ಮಾಡುತ್ತಿದ್ದಾರೆ ಎಂದು ೧೫ ಅತೃಪ್ತ ಶಾಸಕರು...
ರಾಜಕೀಯ

ರಾಜ್ಯದ ಭವಿಷ್ಯ ನಿರ್ಧರಿಸಲಿದ್ಯಾ ಅತೃಪ್ತ ಶಾಸಕರ ಅರ್ಜಿ ವಿಚಾರಣೆ..? – ಕಹಳೆ ನ್ಯೂಸ್

ಬೆಂಗಳೂರು: ಶಾಸಕ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ಸ್ಪೀಕರ್ ಅಂಗೀಕರಿಸುತ್ತಿಲ್ಲ ಎಂದು ಕಾಂಗ್ರೆಸ್-ಜೆಡಿಎಸ್ ಅತೃಪ್ತ ಶಾಸಕರು ಸುಪ್ರೀಂಕೋರ್ಟ್‍ಗೆ ಸಲ್ಲಿಸಿರುವ ಅರ್ಜಿ ವಿಚಾರಣೆ ಇಂದು ನಡೆಯಲಿದ್ದು, ಸುಪ್ರೀಂ ತೀರ್ಪಿನ ಮೇಲೆ ದೋಸ್ತಿ ಸರ್ಕಾರದ ಭವಿಷ್ಯ ನಿಂತಿದೆ. ಮುಖ್ಯನ್ಯಾಯಮೂರ್ತಿ ರಂಜನ್ ಗೊಗೋಯ್ ಒಳಗೊಂಡ ಸುಪ್ರೀಂಕೋರ್ಟ್ ಪೀಠ, ಸ್ಪೀಕರ್ ಗೆ ನಿರ್ದೇಶನ ನೀಡುವ ಅಧಿಕಾರ ಸುಪ್ರೀಂಗೆ ಇದೆಯೋ? ಇಲ್ಲವೋ ಎಂಬುದನ್ನೂ ಸ್ಪಷ್ಟಪಡಿಸಲಿದೆ. ಈ ವಿಚಾರದಲ್ಲಿ ಸುಪ್ರೀಂಕೋರ್ಟ್ ಪರಮಾಧಿಕಾರ ಎತ್ತಿ ಹಿಡಿದು ರಾಜೀನಾಮೆ ಅಂಗೀಕರಿಸುವಂತೆ ಸ್ಪೀಕರ್ ಗೆ...
1 148 149 150 151 152 232
Page 150 of 232