Tuesday, April 28, 2026

ರಾಜಕೀಯ

ರಾಜಕೀಯ

ನಾನು ಯಾಕೆ ರಾಜೀನಾಮೆ ಕೊಡಬೇಕು..? ಅಂದು ಯಡಿಯೂರಪ್ಪ ಕೊಟ್ಟಿದ್ರಾ?: ಕುಮಾರಸ್ವಾಮಿ – ಕಹಳೆ ನ್ಯೂಸ್

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ನಾನು ಯಾಕೆ ರಾಜೀನಾಮೆ ಕೊಡಬೇಕು. ಮುಖ್ಯಮಂತ್ರಿಯಾಗಿದ್ದ ಬಿಎಸ್ ಯಡಿಯೂರಪ್ಪ ರಾಜೀನಾಮೆ ಕೊಟ್ಟಿದ್ರಾ ಎಂದು ಕುಮಾರಸ್ವಾಮಿ ಮಾತಿನ ಛಾಟಿ ಎಸೆಯುವ ಮೂಲಕ ಸರ್ಕಾರವನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡಿದ್ದಾರೆ. ಈ ಮೂಲಕ ಅತೃಪ್ತ ಶಾಸಕರ ರಾಜೀನಾಮೆ ಪರ್ವದ ನಡುವೆಯೂ ಸರ್ಕಾರವನ್ನು ಉಳಿಸಿಕೊಳ್ಳುವ ಪ್ರಯತ್ನ ಮುಂದುವರಿದಂತಾಗಿದೆ. ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈ ಹಿಂದೆ ಬಿಎಸ್ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ 17 ಶಾಸಕರು ರಾಜೀನಾಮೆ ನೀಡಿದ್ರಲ್ಲ, ಆಗ ಅವರು ರಾಜೀನಾಮೆ...
ರಾಜಕೀಯ

ರಾಜೀನಾಮೆ ನೀಡಿದ ಶಾಸಕರಿಗೆ ಸೂಕ್ತ ಭದ್ರತೆ ನೀಡಲು ಸುಪ್ರೀಂ ಸೂಚನೆ – ಕಹಳೆ ನ್ಯೂಸ್

ಕರುನಾಡಿನ ರಾಜಕೀಯದ ಡ್ರಾಮ ತಂಡ ಮುಂಬೈ ತಲುಪಿದ್ದು ಗೊತ್ತೇ ಇದೆ. ಈಗ ಈ ಜಗಳ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ತಮ್ಮ ರಾಜೀನಾಮೆಯನ್ನು ಅಂಗೀಕರಿಸಲು ವಿಧಾನಸಭಾ ಸ್ಪೀಕರ್ ವಿಳಂಬ ಮಾಡುತ್ತಿದ್ದಾರೆಂದು ಆರೋಪಿಸಿ ಅತೃಪ್ತ ಶಾಸಕರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಇಂದು ಸುಪ್ರೀಂ ಕೋರ್ಟ್‍ನಲ್ಲಿ ಅರ್ಜಿ ವಿಚಾರಣೆ ನಡೆದಿದ್ದು ಕೆಲವೊಂದು ನಿರ್ದೇಶನಗಳನ್ನು ನೀಡಿ ವಿಚಾರಣೆಯನ್ನು ನಾಳೆಗೆ ಮುಂದೂಡಲಾಗಿದೆ. ರಾಜೀನಾಮೆ ನೀಡಿರುವ ಶಾಸಕರು ಇಂದು ಸಂಜೆ 6 ಗಂಟೆಯೊಳಗಾಗಿ ಸ್ಪೀಕರ್ ಅವರ ಮುಂದೆ ಹಾಜರಾಗಲು...
ರಾಜಕೀಯ

ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ನಡೆದ ಜಟಾಪಟಿ ಕುರಿತು ಸಿದ್ದರಾಮಯ್ಯ ಪ್ರತಿಕ್ರಿಯೆ – ಕಹಳೆ ನ್ಯೂಸ್

ಬೆಂಗಳೂರು: ಚಿಕ್ಕಬಳ್ಳಾಪುರ ಶಾಸಕ ಡಾ.ಕೆ.ಸುಧಾಕರ್ ರಾಜೀನಾಮೆ ಕೊಟ್ಟ ಬಳಿಕ, ವಿಧಾನಸೌಧದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ನಡೆದ ಜಟಾಪಟಿ ಕುರಿತು ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಸಮ್ಮಿಶ್ರ ಸರ್ಕಾರದ ಶಾಸಕರ ರಾಜೀನಾಮೆ ಕುರಿತಾಗಿ, ಬಿಜೆಪಿ ನಾಯಕರು ನಮ್ಮ ಪಾತ್ರವಿಲ್ಲ ಎಂದು ಹೇಳುತ್ತಿದ್ದರು. ಆದರೆ ಡಾ.ಕೆ. ಸುಧಾಕರ್ ವಿಚಾರದಲ್ಲಿ ಆಧಾರ ಸಮೇತ ಸಿಕ್ಕಿಬಿದ್ದಿದ್ದಾರೆ. ಸುಧಾಕರ್ ಕಾಂಗ್ರೆಸ್‍ನ ಶಾಸಕರು, ನಮ್ಮ ಶಾಸಕರ ರಕ್ಷಣೆ ಮಾಡಲು ಬಿಜೆಪಿ ಶಾಸಕರು ಯಾರು? ನಮ್ಮ ಶಾಸಕರ ಜತೆ...
ರಾಜಕೀಯ

ಮೈತ್ರಿ ಸರ್ಕಾರದ ಮುಂದಿನ ನಡೆ ಏನು..? – ಕಹಳೆ ನ್ಯೂಸ್

ಅತೃಪ್ತ ಶಾಸಕರ ಮನವೊಲಿಸಲು ಸಚಿವರಾದ ಡಿ.ಕೆ. ಶಿವಕುಮಾರ್, ಜಿ.ಟಿ. ದೇವೇಗೌಡರ ತಂಡ ನಿನ್ನೆ ಮುಂಬೈಗೆ ತೆರಳಿತ್ತು. ಮುಂಬೈ ಹೋಟೆಲ್ ಮುಂದೆ ಹೈಡ್ರಾಮ ಸೃಷ್ಟಿಯಾಗಿ ಡಿಕೆಶಿಯನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದಿದ್ದರು. ಇದೀಗ ಡಿಕೆಶಿ ಬರಿಗೈಯಲ್ಲಿ ಬೆಂಗಳೂರಿಗೆ ವಾಪಾಸಾಗಿದ್ದು, ಮೈತ್ರಿ ನಾಯಕರು ತಲೆಮೇಲೆ ಕೈಹೊತ್ತು ಕೂರುವಂತಾಗಿದೆ. ಅತೃಪ್ತ ಶಾಸಕರ ಭವಿಷ್ಯ ನಿರ್ಧಾರ ರಾಜ್ಯ ರಾಜಕಾರಣ ದೇಶದೆಲ್ಲೆಡೆ ಭಾರೀ ಕುತೂಹಲ ಮೂಡಿಸಿದ್ದು, ಈಗಾಗಲೇ ಸಮ್ಮಿಶ್ರ ಸರ್ಕಾರದ ಕಾಂಗ್ರೆಸ್- ಜೆಡಿಎಸ್ ಸಚಿವರು ಸಾಮೂಹಿಕ ರಾಜೀನಾಮೆ...
ರಾಜಕೀಯ

ಕಾಂಗ್ರೆಸ್‍ನ ಎಲ್ಲಾ ಶಾಸಕರೂ ನನ್ನ ಆಪ್ತರು – ಸಿದ್ದರಾಮಯ್ಯ – ಕಹಳೆ ನ್ಯೂಸ್

ರಾಜೀನಾಮೆ ನೀಡಿರುವ ಶಾಸಕರು ಮಾತ್ರವಲ್ಲ, ಕಾಂಗ್ರೆಸ್‍ನ ಎಲ್ಲ 78 ಶಾಸಕರೂ ನನಗೆ ಆಪ್ತರೇ. ಅವರು ನಮ್ಮ ಪಕ್ಷದ ಬಹಳಷ್ಟು ನಾಯಕರಿಗೂ ಆಪ್ತರಾಗಿದ್ದಾರೆ. ಮಾಧ್ಯಮಗಳು ಸೆಲೆಕ್ಟಿವ್ ಆಗಿ ಈ ಶಾಸಕರು ನನ್ನ ಆಪ್ತರು ಎಂದು ಹೇಳುತ್ತಿರುವುದು ಸರಿ ಅಲ್ಲ. ಇದರಿಂದ ನನ್ನ ಮನಸ್ಸಿಗೆ ನೋವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಕೆಲವೊಂದು ಶಾಸಕರು ಸಿದ್ದರಾಮಯ್ಯನವರ ಆಪ್ತ ವಲಯದಲ್ಲಿ ಕಾಣಿಸಿಕೊಂಡಿದ್ದರು. ಅವರನ್ನು ಇಟ್ಟುಕೊಂಡು ಸಿದ್ದರಾಮಯ್ಯ ಮೈತ್ರಿ ಸರ್ಕಾರವನ್ನು...
ರಾಜಕೀಯಸುದ್ದಿ

ಯಾರಿಗೆ ಹೇಳಿ ಮುಂಬೈಗೆ ಹೋದರು? ಇದೇನು ಒನ್‍ಮ್ಯಾನ್ ಶೋನಾ; ಡಿಕೆಶಿ ನಡೆಗೆ ಅಸಮಾಧಾನ ವ್ಯಕ್ತಪಡಿಸಿದ ಸಿದ್ದರಾಮಯ್ಯ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ರಾಜಕೀಯದ ಹೈಡ್ರಾಮ ಈಗ ರಾಜ್ಯದಿಂದ ಹೊರ ರಾಜ್ಯಕ್ಕೆ ಸ್ಥಳಾಂತರಗೊಂಡಿದೆ. ಮುಂಬೈಗೆ ತೆರಳಿರುವ ಅತೃಪ್ತ ಶಾಸಕರನ್ನು ಮರಳಿ ಕರೆತರಲು ಡಿಕೆಶಿ ಪಟ್ಟು ಹಿಡಿದಿದ್ದು ವಿಫಲರಾಗಿದ್ದಾರೆ, ಇದಕ್ಕೆ ಕುರಿತಂತೆ ಸಿದ್ದರಾಮಯ್ಯ ಅಸಮಾಧಾನವನ್ನು ಹೊರಹಾಕಿದ್ದಾರೆ. ಅತೃಪ್ತರ ಮನವೊಲಿಕೆಗೆ ಮುಂಬೈಗೆ ತೆರಳಿರುವ ಡಿಕೆಶಿ ವಿರುದ್ಧ ಮಹಾರಾಷ್ಟ್ರ ಸರ್ಕಾರ ನಡೆದುಕೊಂಡ ರೀತಿ ರಾಜ್ಯ ಕಾಂಗ್ರೆಸ್ ನಾಯಕರಿಗೆ ಮುಜುಗರ ಉಂಟು ಮಾಡಿದೆ. ಡಿಕೆ ಶಿವಕುಮಾರ್ ಯಾರನ್ನು ಕೇಳಿ ಮುಂಬೈಗೆ ಹೋದರು ಎಂದು ಆಪ್ತರ ಎದುರು ಅಸಮಾಧಾನ...
ರಾಜಕೀಯಸುದ್ದಿ

ಸಿಎಂಗೆ ಫುಲ್ ಟೆನ್ಷನ್, ಯಾರನ್ನೂಭೇಟಿಯಾಗಲಿಚ್ಚಿಸದ  ಕುಮಾರಸ್ವಾಮಿ..! – ಕಹಳೆ ನ್ಯೂಸ್

ಬೆಂಗಳೂರು ; ಕಾಂಗ್ರೆಸ್-ಜೆಡಿಎಸ್‍ನ ಅತೃಪ್ತ ಶಾಸಕರ ಬಿಗಿಪಟ್ಟಿನಿಂದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮೌನಕ್ಕೆ ಶರಣಾಗಿದ್ದಾರೆ. ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ನೇತೃತ್ವದ ನಿಯೋಗ ಮುಂಬೈನ ಖಾಸಗಿ ಹೊಟೇಲ್‍ನಲ್ಲಿ ಬೀಡು ಬಿಟ್ಟಿರುವ ಉಭಯ ಪಕ್ಷಗಳ ಶಾಸಕರನ್ನು ಮನವೊಲಿಸಿ ಕರೆತರುತ್ತಾರೆಂಬ ವಿಶ್ವಾಸವಿತ್ತು. ಆದರೆ, ಹೊಟೇಲ್‍ನಲ್ಲಿರುವ ಶಾಸಕರು ಡಿ.ಕೆ.ಶಿವಕುಮಾರ್ ಮತ್ತು ಜೆಡಿಎಸ್‍ನ ಸಚಿವರು, ಶಾಸಕರನ್ನು ಭೇಟಿ ಮಾಡಲು ನಿರಾಕರಿಸಿದ್ದಾರೆ. ಜತೆಗೆ ಹೊಟೇಲ್‍ಗೂ ಪ್ರವೇಶ ಮಾಡದಂತೆ ತಡೆದು ಹಿಂತಿರುಗುವಂತೆ ಪೊಲೀಸರು ತಾಕೀತು ಮಾಡಿದ್ದರು ಆದರೆ ಡಿಕೆಶಿ ಹೊಟೇಲ್ ಎದುರಲ್ಲೇ...
ರಾಜಕೀಯಸುದ್ದಿ

ಮೈತ್ರಿ ಕೂಟವನ್ನು ಅಪಾಯದಿಂದ ಪಾರು ಮಾಡುತ್ತಾ ಸ್ಪೀಕರ್ ಹೇಳಿಕೆ..? – ಕಹಳೆ ನ್ಯೂಸ್

ಬೆಂಗಳೂರು: ಖುದ್ದು ಭೇಟಿಯಾಗದ ಹೊರತು ಶಾಸಕರ ರಾಜೀನಾಮೆಯನ್ನು ಅಂಗೀಕರಿಸಲಾಗದು ಎಂದು ಸ್ಪೀಕರ್ ರಮೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ವಿಧಾನ ಸೌಧದಲ್ಲಿ ರಮೇಶ್ ಕುಮಾರ್ ನೀಡಿದ ಹೇಳಿಕೆ ಸದ್ಯ ಮೈತ್ರಿ ಕೂಟ ಅಪಾಯದಿಂದ ಪಾರಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಕಾಂಗ್ರೆಸ್ ಪಕ್ಷದ 9 ಮತ್ತು ಜೆಡಿಎಸ್ ಪಕ್ಷದ 3 ಶಾಸಕರು ನೀಡಿರುವ ರಾಜೀನಾಮೆಯನ್ನು ಸ್ವತಃ ತನ್ನನ್ನು ಭೇಟಿಯಾಗದ ಹೊರತು ಸ್ವೀಕರಿಸಲು ಸಾಧ್ಯವಿಲ್ಲ ಎಂದು ಸ್ಪೀಕರ್ ತಿಳಿಸಿದ್ದಾರೆ. ಶಾಸಕರು ತಮ್ಮ ರಾಜೀನಾಮೆಯ ಬಗ್ಗೆ ಯಾವುದೇ...
1 151 152 153 154 155 232
Page 153 of 232