ಗ್ರಾಮದ ಬಳಿಕ ವಿದೇಶಕ್ಕೆ ಹೆಚ್.ಡಿ.ಕೆ ಪ್ರಯಾಣ – ಕಹಳೆ ನ್ಯೂಸ್
ಗ್ರಾಮ ವಾಸದ ಬಳಿಕ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು ಅಮೇರಿಕಾಕ್ಕೆ ಪ್ರಯಾಣ ಬೆಳೆಸಿದ್ದಾರೆ. ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರ ಆಹ್ವಾನದ ಮೇರೆಗೆ ಜೂನ್ 30 ರಂದು ನ್ಯೂ ಜೆರ್ಸಿಯಲ್ಲಿ ಶ್ರೀ ಕಾಲಭೈರವೇಶ್ವರ ಸ್ವಾಮಿ ದೇವಾಲಯದ ಶಿಲಾನ್ಯಾಸವನ್ನ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ನೆರವೇರಿಸಲಿದ್ದಾರೆ. ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರು ನ್ಯೂಜೆರ್ಸಿಯಲ್ಲಿ ದೇವಾಲಯ ನಿರ್ಮಿಸುತ್ತಿದ್ದಾರೆ. ಆ ದೇವಾಲಯದ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ತಮ್ಮನ್ನು ಬರಲೇಬೇಕೆಂದು ಒತ್ತಾಯ ಮಾಡಿದ್ದಾರೆ....







