ಸತ್ಯಕ್ಕಾಗಿ ಹೋರಾಟ ಮಾಡುತ್ತಿದ್ದೀರಿ ಯಾರೂ ಹೆದರುವ ಅಗತ್ಯ ಇಲ್ಲ: ರಾಹುಲ್ ಗಾಂಧಿ ಟ್ವೀಟ್ – ಕಹಳೆ ನ್ಯೂಸ್
ನವದೆಹಲಿ: ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಕೌಂಟ್ಡೌನ್ ಶುರುವಾಗಿದೆ. ರಾಜಕೀಯ ಕಾರ್ಯಕರ್ತರ, ನಾಯಕರ ಎದೆಯಲ್ಲಿ ಢವ ಢವ ಮುಗಿಲುಮುಟ್ಟಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನ ಹುರಿದುಂಬಿಸಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಟ್ವೀಟ್ ಮಾಡಿ ಮನವಿ ಮಾಡಿಕೊಂಡಿದ್ದಾರೆ. ಟ್ವೀಟ್ ಮಾಡಿರುವ ಅವರು ‘ಆತ್ಮೀಯ ಕಾಂಗ್ರೆಸ್ ಕಾರ್ಯಕರ್ತರೇ, ಮುಂದಿನ 24 ಗಂಟೆಗಳು ನಮಗೆ ಬಹಳ ಮುಖ್ಯವಾಗಿದೆ. ಹೀಗಾಗಿ ಎಲ್ಲರೂ ಜಾಗರೂಕರಾಗಿರಿ. ಯಾರೂ ಹೆದರುವ ಅಗತ್ಯ ಇಲ್ಲ. ಸತ್ಯಕ್ಕಾಗಿ ಹೋರಾಟ ಮಾಡುತ್ತಿದ್ದೀರಿ. ಸುಳ್ಳು ಎಕ್ಸಿಟ್ ಪೋಲ್...







