ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಶಾಸಕರ ಸಂಖ್ಯಾ ಬಲವನ್ನು 104ರಿಂದ 106ಕ್ಕೆ ಹೆಚ್ಚಿಸಿಕೊಳ್ಳವ ಗುರಿ – ಕಹಳೆ ನ್ಯೂಸ್
ಬೆಂಗಳೂರು : ಲೋಕಸಭಾ ಚುನಾವಣೆ ಬಳಿಕ ರಾಜ್ಯದಲ್ಲಿನ ಆಡಳಿತಾರೂಢ ಪಕ್ಷಗಳಲ್ಲಿನ ಶಾಸಕರ ಅಸಮಾಧಾನ ಸ್ಫೋಟಗೊಂಡು ಪರ್ಯಾಯ ಸರ್ಕಾರ ರಚನೆಯ ಸನ್ನಿವೇಶ ನಿರ್ಮಾಣವಾಗಬಹುದು ಎಂಬ ನಿರೀಕ್ಷೆಯಲ್ಲಿರುವ ಪ್ರತಿಪಕ್ಷ ಬಿಜೆಪಿ ತನ್ನ ಸಂಖ್ಯಾಬಲ ಹೆಚ್ಚಿಸಿಕೊಳ್ಳುವ ದೃಷ್ಟಿಯಿಂದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ಮತ್ತು ಧಾರವಾಡ ಜಿಲ್ಲೆಯ ಕುಂದಗೋಳ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಶಕ್ತಿಮೀರಿ ಕೆಲಸ ಮಾಡಿ ಗೆಲುವು ಪಡೆದುಕೊಳ್ಳಬೇಕು. ಆ ಮೂಲಕ ವಿಧಾನಸಭೆಯಲ್ಲಿ ಪಕ್ಷದ ಶಾಸಕರ ಸಂಖ್ಯಾ...







