Monday, April 27, 2026

ರಾಜಕೀಯ

ರಾಜಕೀಯಸುದ್ದಿ

ಮೋದಿ ಚುನಾವಣೆಯಲ್ಲಿ ಗೆದ್ದರೆ ಶಾಶ್ವತವಾಗಿ ಪ್ರಧಾನಿ ಆಗಲಿದ್ದಾರೆ: ಅರವಿಂದ ಕೇಜ್ರಿವಾಲ್‌ – ಕಹಳೆ ನ್ಯೂಸ್

ನವದೆಹಲಿ: ಒಂದು ವೇಳೆ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ನರೇಂದ್ರ ಮೋದಿ ಅವರು ಶಾಶ್ವತವಾಗಿ ಪ್ರಧಾನಿ ಆಗಲಿದ್ದಾರೆ. 2019ರ ಬಳಿಕ ದೇಶದಲ್ಲಿ ಚುನಾವಣೆಯೇ ಇರುವುದಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಭಾನುವಾರ ಹೇಳಿದ್ದಾರೆ. ಪುಸ್ತಕ ಬಿಡುಗಡೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಕೇಜ್ರಿವಾಲ್‌, ದೇಶದಲ್ಲಿ ಪ್ರಜಾಪ್ರಭುತ್ವ ಕೊನೆಗೊಳ್ಳುವ ಅಪಾಯ ಎದುರಾಗಿದೆ. ಮೋದಿ ಸರ್ಕಾರ ದೇಶವನ್ನು ನಡೆಸಲು ಜರ್ಮನಿಯ ಸರ್ವಾಧಿಕಾರಿ ಅಡಾಲ್ಫ್ ಹಿಟ್ಲರ್‌ ಅವರ ತಂತ್ರಗಳನ್ನು ಅನುಸರಿಸುತ್ತಿದೆ. ಇಂದು ಎಲ್ಲಾ...
ರಾಜಕೀಯಸುದ್ದಿ

ಪ್ರಿಯಾಂಕಾ ಹಾಗೂ ಮುಖ್ಯಮಂತ್ರಿ ಆದಿತ್ಯನಾಥ್ ನಡುವೆ ಟ್ವಿಟ್ಟರ್ ಸಮರ – ಕಹಳೆ ನ್ಯೂಸ್

ಲಕ್ನೋ: ಉತ್ತರ ಪ್ರದೇಶದ ಕಬ್ಬು ಬೆಳೆಗಾರರಿಗೆ 10 ಸಾವಿರ ಕೋಟಿ ರೂಪಾಯಿಬಾಕಿ ಇದೆ ಎಂದು ಆಪಾದಿಸಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಮಾಡಿದ ಟ್ವೀಟ್, ಉತ್ತರ ಪ್ರದೇಶದಲ್ಲಿ ಬಿರುಗಾಳಿ ಎಬ್ಬಿಸಿದೆ. ಜತೆಗೆ ಇದು ಪ್ರಿಯಾಂಕಾ ಹಾಗೂ ಮುಖ್ಯಮಂತ್ರಿ ಆದಿತ್ಯನಾಥ್ ನಡುವೆ ಟ್ವಿಟ್ಟರ್ ಸಮರಕ್ಕೂ ಕಾರಣವಾಗಿದೆ. 2012 ಮತ್ತು 2017ರಲ್ಲಿ ರಾಜ್ಯದ ರೈತರು ಹಸಿವಿನಿಂದ ಬಳಲುತ್ತಿದ್ದಾಗ ರೈತರ ಹಿತೈಷಿಗಳು ಎಲ್ಲಿದ್ದರು ಎಂದು ಆದಿತ್ಯನಾಥ್ ಪ್ರಶ್ನಿಸಿದ್ದಾರೆ. ತಮ್ಮ ಸರ್ಕಾರದ ಅವಧಿಯಲ್ಲಿ ಕಬ್ಬು...
ರಾಜಕೀಯಸುದ್ದಿ

ಸುಮಲತಾ ನನ್ನ ಬಳಿ ಬೆಂಬಲಿಸಿ ಎಂದು ಕೇಳಿದರು ಹೋಗಲ್ಲ: ಶಿವಣ್ಣ – ಕಹಳೆ ನ್ಯೂಸ್

ಮೈಸೂರು: ಸುಮಲತಾ ಪರ ಪ್ರಚಾರ ಮಾಡುತ್ತಿರಾ ಎನ್ನುವ ಪ್ರಶ್ನೆ ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ ಅವರಿಗೂ ಎದುರಾಯ್ತು. ಶಿವಣ್ಣ ಅವರದ್ದು ನೇರ ಉತ್ತರ, 'ಇಲ್ಲ ನಾನು ಪ್ರಚಾರ ಮಾಡಲ್ಲ'..! ಹೌದು ಶಿವಣ್ಣ ಸುಮಲತಾ ಪರ ಪ್ರಚಾರ ಮಾಡುವುದಿಲ್ಲ ಅಂದಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, 'ಸುಮಲತಾ ನನ್ನ ಬಳಿ ಬೆಂಬಲಿಸಿ ಎಂದು ಕೇಳಿದರು ಹೋಗಲ್ಲ. ರಾಜಕೀಯಕ್ಕೆ ಹೋಗಲು ತುಂಬಾ ಬುದ್ಧಿ ಬೇಕು. ನಾನು ಅಷ್ಟು ಬುದ್ಧಿವಂತ ಅಲ್ಲ. ಶಿವಮೊಗ್ಗಕ್ಕೂ ನಾನು ಪ್ರಚಾರಕ್ಕೆ ಹೋಗುವುದಿಲ್ಲ ಅಂತ...
ರಾಜಕೀಯಸುದ್ದಿ

ಬೈಲಹೊಂಗಲದ ಮಾಜಿ ಶಾಸಕ ಜಗದೀಶ್ ಮೆಟಗುಡ್ ಮರಳಿ ಬಿಜೆಪಿಗೆ – ಕಹಳೆ ನ್ಯೂಸ್

ಬೆಂಗಳೂರು: ಬೆಳಗಾವಿ ಜಿಲ್ಲೆಯ ಬೈಲಹೊಂಗಲದ ಮಾಜಿ ಶಾಸಕ ಜಗದೀಶ್ ಮೆಟಗುಡ್ ಇಂದು ಮರಳಿ ಬಿಜೆಪಿಗೆ ಸೇರ್ಪಡೆ ಆಗಿದ್ದಾರೆ. ಬೆಂಗಳೂರಿನಲ್ಲಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ಅಧಿಕೃತ ನಿವಾಸ ಡವಳಗಿರಿಯಲ್ಲಿ ಬಿಎಸ್.ವೈ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆ ಆಗಿದ್ದಾರೆ. ಕೆಲ ವರ್ಷಗಳ ಹಿಂದೆ ಬೈಲಹೊಂಗಲದ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸಿ ಸೋತಿದ್ದರು ನಂತರ ಯಡಿಯೂರಪ್ಪನವರು ಕೆ.ಜೆ.ಪಿ ಪಕ್ಷದಿಂದ ಮಾಜಿ ಶಾಸಕ ವಿಶ್ವನಾಥ ಪಾಟೀಲ್ ಅವರು ಶಾಸಕರಾಗಿ ಆಯ್ಕೆ ಆಗಿದ್ದರು. ನಂತರ ಬಿಜೆಪಿ ಬಂಡಾಯ...
ರಾಜಕೀಯಸುದ್ದಿ

‘ಕೈ’ ಭವಿಷ್ಯ ನುಡಿದ ಕರಾವಳಿಯ ಕಾಂಗ್ರೆಸ್ ಮುಖಂಡ – ಕಹಳೆ ನ್ಯೂಸ್

ಮಂಗಳೂರು: ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ದನ ಪೂಜಾರಿ ಹೊಸ ಶಾಕಿಂಗ್ ಹೇಳಿಕೆಯನ್ನು ನೀಡಿದ್ದಾರೆ. ಮಂಗಳೂರಿನ ಗೋಕರ್ಣಾಥೇಶ್ವರ ದೇವಾಲಯದಲ್ಲಿ ಮಾತನಾಡಿದ ಜನಾರ್ದನ ಪೂಜಾರಿ ಇನ್ನು ಎರಡು ಸಲವೂ ಮೋದಿಯೇ ಆಡಳಿತಕ್ಕೆ ಬರುತ್ತಾರೆ ಅಂದಿದ್ದಾರೆ. ಅಂತೆಯೇ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕೈ ಅಭ್ಯರ್ಥಿ ಸೋಲುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ....
ರಾಜಕೀಯಸುದ್ದಿ

ಕಾಂಗ್ರೆಸ್ ಹಿರಿಯ ನಾಯಕನ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ನಳಿನ್ ಕುಮಾರ್ ಕಟೀಲ್ ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್​ ಕುಮಾರ್ ಕಟೀಲ್​ ಅವರು ಇಂದು ಕಾಂಗ್ರೆಸ್​ ನಾಯಕ ಬಿ.ಜನಾರ್ದನ ಪೂಜಾರಿಯವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು. ನಳಿನ್ ಅವರು ತಮ್ಮ ಬೆಂಬಲಿಗರೊಂದಿಗೆ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಈ ವೇಳೆ ಅಲ್ಲಿ ಜನಾರ್ದನ ಪೂಜಾರಿ ಕೂಡ ಆಗಮಿಸಿದ್ದರು. ಇವರಿಬ್ಬರೂ ಮಾತುಕತೆ ನಡೆಸಿದ ಬಳಿಕ ನಳಿನ್​, ಜನಾರ್ದನ್​ ಪೂಜಾರಿಯವರ ಕಾಲಿಗೆರಗಿ ಆಶೀರ್ವಾದ ಪಡೆದಿದ್ದಾರೆ....
ರಾಜಕೀಯಸುದ್ದಿ

ತಂದೆ ಹಾಗೂ ಮಗಳು ಅನುಮಾನಾಸ್ಪದ ಸಾವು – ಕಹಳೆ ನ್ಯೂಸ್

ಬಂಟ್ವಾಳ: ತಂದೆ ಹಾಗೂ ಮಗಳು ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಬಂಟ್ವಾಳದಲ್ಲಿ ಬೆಳಕಿಗೆ ಬಂದಿದೆ. ಬಿ.ಸಿ.ರೋಡಿನ ವಸತಿ ಸಂಕೀರ್ಣವೊಂದರಲ್ಲಿ ಈ ಘಟನೆ ನಡೆದಿದೆ. ನಾಲ್ಕನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿ ಹಾಗೂ ಆಕೆಯ ತಂದೆ ವಸತಿ ಸಂಕೀರ್ಣದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. ಬಿ.ಸಿ.ರೋಡಿನ ವಿವೇಕ ನಗರದ ಖಾಸಗಿ ವಸತಿ ಸಂಕೀರ್ಣವೊಂದರ ಬಾಡಿಗೆ ಮನೆಯಲ್ಲಿ ಈ ಘಟನೆ ನಡೆದಿದ್ದು, ಮೃತ ಪಟ್ಟವರನ್ನು ಪ್ರಭಾಕರ (45) ಮತ್ತು ಪ್ರಮಣ್ಯ (12) ಎಂದು ಗುರುತಿಸಲಾಗಿದೆ. ನಿನ್ನೆ ಅಪ್ಪ...
ರಾಜಕೀಯಸುದ್ದಿ

ಲೋಕಸಭಾ ಚುನಾವಣಾ ಅಖಾಡಕ್ಕೆ `ಕನ್ಹಯ್ಯ ಕುಮಾರ್’ ಎಂಟ್ರಿ! – ಕಹಳೆ ನ್ಯೂಸ್

ಪಾಟ್ನಾ : ಜೆಎನ್‍ಯು ವಿದ್ಯಾರ್ಥಿ ಸಂಘಟನೆಯ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್ ಲೋಕಸಭಾ ಚುನಾವಣೆ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಹೌದು, ವಿದ್ಯಾರ್ಥಿ ಸಂಘಟನೆಯ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್ ಅವರು ಬಿಹಾರದ ಬೆಗುಸರೈ ಕ್ಷೇತ್ರದಿಂದ ಸಿಪಿಐ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ಈ ಮೂಲಕ ಕನ್ಹಯ್ಯ ಕುಮಾರ್ ಅವರು ಚುನಾವಣಾ ರಾಕೀಯಕ್ಕೆ ಅಧಿಕೃತ ಎಂಟ್ರಿ ಕೊಟ್ಟಿದ್ದಾರೆ.ಕನ್ಹಯ್ಯ ಕುಮಾರ್ ಅವರು ಬಿಹಾರದ ಪ್ರತಿಪಕ್ಷಗಳ ಹಾಗೂ ಮಹಾಘಟಬಂಧನ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಇಂಗಿತ ವ್ಯಕ್ತಪಡಿಸಿದ್ದರು. ಆದರೆ ಬೇಗುಸರೈ...
1 186 187 188 189 190 232
Page 188 of 232