Monday, April 27, 2026

ರಾಜಕೀಯ

ರಾಜಕೀಯಸುದ್ದಿ

ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷೆಯಾಗಿ `ಉಮಾಭಾರತಿ’ ನೇಮಕ – ಕಹಳೆ ನ್ಯೂಸ್

ನವದೆಹಲಿ: 2019ರ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಿದ ಬೆನ್ನಲ್ಲೇ ಕೇಂದ್ರ ಸಚಿವೆ ಉಮಾಭಾರತಿ ಅವರನ್ನು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷೆಯನ್ನಾಗಿ ನೇಮಕ ಮಾಡಲಾಗಿದೆ. ಕೇಂದ್ರ ಸಚಿವ ಉಮಾಭಾರತಿ ಅವರನ್ನು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷೆಯಾಗಿ ನೇಮಿಸಲಾಗಿದೆ ಎಂದು ಕೇಂದ್ರ ಸಚಿವ ಜಗತ್ ಪ್ರಕಾಶ್ ನಡ್ಡಾ ತಿಳಿಸಿದ್ದಾರೆ. ಉಮಾಭಾರತಿ ಅವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ಸ್ಪಷ್ಟವಾಗಿ ಹೇಳಿದ್ದರು. ಹಾಗಾಗಿ ಉಮಾಭಾರತಿ...
ರಾಜಕೀಯಸುದ್ದಿ

ಕುಂದಾಪುರ ಬಿಜೆಪಿ ಕಛೇರಿಯಲ್ಲಿ ಶಕ್ತಿ ಕೇಂದ್ರ ಪ್ರಮುಖರ ಸಭೆ – ಕಹಳೆ ನ್ಯೂಸ್

ಕುಂದಾಪುರ ಬಿಜೆಪಿ ಕಛೇರಿಯಲ್ಲಿ ಇಂದು ನಡೆದ ಶಕ್ತಿ ಕೇಂದ್ರ ಪ್ರಮುಖರ ಸಭೆ ನಡೆಯಿತು. ಸಭೆಯಲ್ಲಿ ಉಡುಪಿ ಚಿಕ್ಕಮಗಳೂರು ಸಂಸದೆಯಾದ ಶೋಭಾ ಕರಾಂದ್ಲಾಜೆಯವರು, ಮಂಡಲ ಅದ್ಯಕ್ಷರಾದ ಕಾಡೂರು ಸುರೇಶ್ ಶೆಟ್ಟಿ ಯವರು, ಪ್ರದಾನ ಕಾರ್ಯದರ್ಶಿ ಶಂಕರ್ ಅಂಕದಕಟ್ಟೆ, ಭಾಸ್ಕರ ಬಿಲ್ಲವ, ಯುವಮೋರ್ಚ ಅದ್ಯಕ್ಷರಾದ ಸತೀಶ್ ಪೂಜಾರಿ, ಮಹಿಳಾಮೋರ್ಚ ಅದ್ಯಕ್ಷರಾದ ಗುಣರತ್ನ ಹಾಗೂ ಪಕ್ಷದ ಎಲ್ಲಾ ಪದಾದಿಕಾರಿಗಳು, ಶಕ್ತಿಕೇಂದ್ರ ಕಾರ್ಯಕರ್ತರು, ಪ್ರಮಖರು, ಪುರಸಭಾ ಸದಸ್ಯರು ಕಾರ್ಯಕರ್ತರು ಉಪಸ್ಥಿತರಿದ್ದರು....
ರಾಜಕೀಯಸುದ್ದಿ

‘ಜೋಡೆತ್ತು’ ವಿರುದ್ಧ ‘ಗೋ ಬ್ಯಾಕ್’ ಅಭಿಯಾನ – ಕಹಳೆ ನ್ಯೂಸ್

ಮಂಡ್ಯ: ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಅವರನ್ನು ಬೆಂಬಲಿಸಿದ ನಟರಾದ ದರ್ಶನ್ ಮತ್ತು ಯಶ್ ಅವರ ವಿರುದ್ಧ ಜೆಡಿಎಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುಮಲತಾ ಅವರೊಂದಿಗೆ ನಾವಿದ್ದೇವೆ. ಒಂಟಿ ಎತ್ತಿನ ಗಾಡಿಯಲ್ಲ, ಜೋಡೆತ್ತುಗಳಾಗಿ ನಾವು ಮಂಡ್ಯದಲ್ಲಿ ಪ್ರಚಾರ ನಡೆಸಲಿದ್ದೇವೆ ಎಂದು ದರ್ಶನ್ ಅವರು ಹೇಳಿದ್ದರು. ದರ್ಶನ್ ಮತ್ತು ಯಶ್ 'ಜೋಡೆತ್ತು' ವಿರುದ್ಧ 'ಗೋ ಬ್ಯಾಕ್' ಅಭಿಯಾನ ಜೋರಾಗಿಯೇ ನಡೆದಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಜೆಡಿಎಸ್...
ರಾಜಕೀಯಸುದ್ದಿ

ಕಾಂಗ್ರೆಸ್ ಶಾಸಕ ಬಿ. ನಾಗೇಂದ್ರ ಸಹೋದರ ಬಿ. ವೆಂಕಟೇಶ್‍ ಪ್ರಸಾದ್ ಬಿಜೆಪಿಗೆ ಸೇರ್ಪಡೆ – ಕಹಳೆ ನ್ಯೂಸ್

ಬಳ್ಳಾರಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ. ನಾಗೇಂದ್ರ ಸಹೋದರ ಬಿ. ವೆಂಕಟೇಶ್‍ ಪ್ರಸಾದ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಆದ್ರೆ ವೆಂಕಟೇಶ್‍ ಪಕ್ಷ ಸೇರ್ಪಡೆ ವೇಳೆ ಪಕ್ಷದ ರಾಜ್ಯ ಘಟಕದ ಉಪಾಧ್ಯಕ್ಷ ಶ್ರೀರಾಮುಲು, ನಗರ ಶಾಸಕ ಸೋಮಶೇಖರ್ ರೆಡ್ಡಿ ಗೈರು ಹಾಜರಿ ಎದ್ದು ಕಾಣುತ್ತಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾ ಘಟಕದ ಅಧ್ಯಕ್ಷ ಪಿ. ಚನ್ನಬಸವನಗೌಡ ಪ್ರಸಾದ್ ಸೇರ್ಪಡೆ ಬಗ್ಗೆ ಯಾರಿಗೂ ಅಸಮಾಧಾನವಿಲ್ಲ ಅಂತಾ ಹೇಳಿದರು. ಇದೇ ವೇಳೆ ಮಾತನಾಡಿದ ಪ್ರಸಾದ್,...
ರಾಜಕೀಯಸುದ್ದಿ

ಪ್ರಮೋದ್ ಮಧ್ವರಾಜ್ ಜೆಡಿಎಸ್ ಸೇರ್ಪಡೆಗೆ ತೆರೆಮರೆಯ ಕಸರತ್ತು – ಕಹಳೆ ನ್ಯೂಸ್

ಉಡುಪಿ: ನಿನ್ನೆ ತನಕ ಕಾಂಗ್ರೆಸ್‍ನ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಪ್ರಮೋದ್, ದಿಢೀರ್ ಅಂತ ಮಾಜಿ ಪ್ರಧಾನಿ ದೇವೇಗೌಡ ಮತ್ತು ಸಿಎಂ ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ಮೂಲಕ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಪ್ರಮೋದ್ ಮಧ್ವರಾಜ್ ಜೆಡಿಎಸ್ ಸೇರ್ಪಡೆಗೆ ತೆರೆಮರೆಯಲ್ಲಿ ಪ್ರಯತ್ನಿಸುತ್ತಿದ್ದು, ಉಡುಪಿ ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದಲ್ಲಿ ಹೊಸ ಸಂಚಲನ ಸೃಷ್ಟಿಗೆ ಕಾರಣವಾಗಿದೆ. ಜೆಡಿಎಸ್‍ನಲ್ಲಿ ಅವಕಾಶ ಕೊಟ್ಟರೆ ಸ್ಪರ್ಧಿಸುವುದಾಗಿ ಜೆಡಿಎಸ್ ವರಿಷ್ಠರ ಬಳಿ ಪ್ರಮೋದ್ ಮಧ್ವರಾಜ್ ಮನವಿ...
ರಾಜಕೀಯಸುದ್ದಿ

ಸಿದ್ದರಾಮಯ್ಯ ಹೆಗಲಿಗೆ ಹೊಸ ಜವಾಬ್ದಾರಿ ನೀಡಿದ ರಾಹುಲ್ ಗಾಂಧಿ – ಕಹಳೆ ನ್ಯೂಸ್

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಭೇಟಿ ನೀಡಿದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮಾಜಿ ಸಿಎಂ ಸಿದ್ದರಾಮಯ್ಯಗೆ ಹೊಸ ಜವಾಬ್ದಾರಿ ನೀಡಿದ್ದಾರೆ. ಬೆಂಗಳೂರಿನ ಕಾರ್ಯಕ್ರಮ ಮುಗಿಸಿಕೊಂಡು ಹೊರಡುವ ಮುನ್ನ ವಿಮಾನ ನಿಲ್ದಾಣದಲ್ಲಿ ಸಿದ್ದರಾಮಯ್ಯನವರ ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ ಮೈತ್ರಿಯಲ್ಲಿ ಅಪಸ್ವರ ಬರದಂತೆ ನೋಡಿಕೊಳ್ಳಿ ಎಂದು ಹೇಳಿದ್ದಾರೆ ಎನ್ನಲಾಗಿದೆ. ತುಮಕೂರು ಲೋಕಸಭಾ ವಿಚಾರವಾಗಿ ಹೆಚ್ಚಿನ ಚರ್ಚೆ ಮಾಡೋದು ಬೇಡ, ಅಭ್ಯರ್ಥಿಗಳ ಘೋಷಣೆ ಬಳಿಕ ಅಸಮಾಧಾನಿತರನ್ನು ನೀವೇ ಸಂಭಾಳಿಸಬೇಕು. ಮೈತ್ರಿ ಅಭ್ಯರ್ಥಿಗಳ...
ರಾಜಕೀಯಸುದ್ದಿ

ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರರಾಗಿ ಬುಧವಾರ ನಾಮಪತ್ರ ಸಲ್ಲಿಕೆ: ಸುಮಲತಾ ಅಂಬರೀಶ್

ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸುವುದಾಗಿ ಸುಮಲತಾ ಅಂಬರೀಶ್ ಸೋಮವಾರ ತಮ್ಮ ನಿರ್ಧಾರವನ್ನು ಅಧಿಕೃತವಾಗಿ ಘೋಷಿಸಿದ್ದಾರೆ. ಇಂದು ನಗರದ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ನಿರ್ಧಾರ ಪ್ರಕಟಿಸಿದ ಸುಮಲತಾ ಅಂಬರೀಷ್, ಮಾರ್ಚ್ 20 ರಂದು ಬೆಳಗ್ಗೆ 10 ಗಂಟೆಗೆ ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದರು. ಈ ವೇಳೆ ಅವರು ಹೇಳಿದ್ದಿಷ್ಟು, 'ಅಂಬರೀಷ್ ತೀರಿಕೊಂಡಾಗ ಕತ್ತಲೆಯ ಮನಸ್ಥಿತಿಯಲ್ಲಿದೆ. ಜೀವನದಲ್ಲೇನಿದೆ ಎಂಬ ಭಾವನೆ ಕಾಡತೊಡಗಿತ್ತು. ಅಂತಹ ಸಂದರ್ಭದಲ್ಲಿ ನಿಮ್ಮೊಂದಿಗೆ ನಾವಿದ್ದೇವೆ ಎಂದು ಅಂಬರೀಷ್...
ರಾಜಕೀಯಸುದ್ದಿ

ಪರಿಕ್ಕರ್ ನಿಧನದ ಬೆನ್ನಲ್ಲೇ ಗೋವಾದಲ್ಲಿ ಕಾಂಗ್ರೆಸ್ ಸರ್ಕಾರ – ಕಹಳೆ ನ್ಯೂಸ್

ಪಣಜಿ : ಗೋವಾ ಸಿಎಂ ಮನೋಹರ್ ಪರಿಕ್ಕರ್ ನಿಧನದ ಬೆನ್ನಲ್ಲೇ ಕಾಂಗ್ರೆಸ್ ಗೋವಾದಲ್ಲಿ ಸರ್ಕಾರ ರಚನೆಗೆ ಮುಂದಾಗಿದ್ದು, ಈ ಸಂಬಂಧ ಗವರ್ನರ್ ಗೆ ಪತ್ರ ಬರೆದಿದೆ. ವಿರೋಧ ಪಕ್ಷದ ನಾಯಕ ಚಂದ್ರಕಾಂತ್ ಕವ್ಲೇಕರ್ ಈ ಸಂಬಂಧ ಗವರ್ನರ್‍ಗೆ ಪತ್ರ ಬರೆದಿದ್ದು, ಸರ್ಕಾರ ರಚಿಸಲು ಅಗತ್ಯವಿರುವ ಶಾಸಕರನ್ನು ಬಿಜೆಪಿ ಹೊಂದಿಲ್ಲ. ಹಾಗಾಗಿ ತಮಗೆ ಅವಕಾಶ ನೀಡಬೇಕು ಎಂದು ಕೋರಿದ್ದಾರೆ ಎಂದಿದ್ದಾರೆ. ಮನೋಹರ್ ಪರಿಕ್ಕರ್ ನಿಧನ ಹಾಗೂ ಇಬ್ಬರು ಶಾಸಕರು ರಾಜೀನಾಮೆ ನಂತರ...
1 187 188 189 190 191 232
Page 189 of 232