Monday, April 27, 2026

ರಾಜಕೀಯ

ರಾಜಕೀಯಸುದ್ದಿ

ಬಿಜೆಪಿ ಟಿಕೆಟ್ ಹಂಚಿಕೆ ಚರ್ಚೆ: ರಾಷ್ಟ್ರ ರಾಜದಾನಿಗೆ ತೆರಳಲಿರುವ ಬಿ.ಎಸ್ ಯಡಿಯೂರಪ್ಪ – ಕಹಳೆ ನ್ಯೂಸ್

ನವದೆಹಲಿ: ನವದೆಹಲಿಯಲ್ಲಿ ಬಿಜೆಪಿ ಟಿಕೆಟ್ ಹಂಚಿಕೆ ಚರ್ಚೆ ನಡೆಯಲಿದೆ. ಕಳೆದ ರಾತ್ರಿಯೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರು ದೆಹಲಿಗೆ ತೆರಳಿದ್ದಾರೆ. ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಜೊತೆ ಮಾತುಕತೆ ನಡೆಸಲಿದ್ದಾರೆ. ಕ್ಷೇತ್ರಗಳ ವಿವರ, ಪ್ರಬಲ ಅಭ್ಯರ್ಥಿಗಳ ಪಟ್ಟಿ ಜೊತೆಗೆ ದೆಹಲಿಗೆ ತೆರಳಿರೋ ಬಿಸ್‌ವೈ ಹೆಚ್ಚು ಕ್ಷೇತ್ರ ಗೆಲ್ಲುವ ಲೆಕ್ಕಾಚಾರಗಳ ಬಗ್ಗೆ ಅಮಿತ್ ಶಾ ಜೊತೆ ಚರ್ಚೆ ಮಾಡಲಿದ್ದಾರೆ. ಅಭ್ಯರ್ಥಿಗಳ ಪಟ್ಟಿ ಬಹುತೇಕ ಅಂತಿಮ ಮಾಡ್ಕೊಂಡೇ ಬರೋ ಸಾಧ್ಯತೆ ಹೆಚ್ಚಿದೆ....
ರಾಜಕೀಯಸುದ್ದಿ

ಮೈತ್ರಿ ಸರ್ಕಾರದ ಭಿನ್ನಮತಕ್ಕೆ ಮೊದಲ ವಿಕೆಟ್ ಪತನ – ಕಹಳೆ ನ್ಯೂಸ್

ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಮಾತ್ರ ಬಾಕಿ ಇದ್ದು ಈ ಹಂತದಲ್ಲಿ ಕಾಂಗ್ರೆಸ್ ಭಿನ್ನಮತೀಯರ ಗುಂಪಿನಲ್ಲಿ ಪ್ರಮುಖವಾಗಿ ಕಾಣಿಸಿಕೊಂಡಿದ್ದ ಕಲಬುರ್ಗಿಯ ಚಿಂಚೋಳಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಉಮೇಶ್ ಜಾಧವ್ ರಾಜಿನಾಮೆ ನೀಡಿದ್ದಾರೆ. ಶಾಸಕ ಸ್ಥಾನಕ್ಕೆ ಉಮೇಶ್ ಜಾಧವ್ ರಾಜಿನಾಮೆ ನೀಡಿದ್ದು, ಮೈತ್ರಿ ಸರ್ಕಾರದ ಭಿನ್ನಮತಕ್ಕೆ ಮೊದಲ ವಿಕೆಟ್ ಪತನವಾಗಿದೆ. ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ರಾಜೀನಾಮೆ ಪತ್ರ ನೀಡಿದ್ದಾರೆ. ಮೂಲಗಳ ಪ್ರಕಾರ ಉಮೇಶ್ ಜಾಧವ್ ಅವರು ಲೋಕಸಭಾ ಚುನಾವಣೆಯಲ್ಲಿ ಕಲಬುರಗಿ...
ರಾಜಕೀಯಸುದ್ದಿ

ಉಗ್ರರನ್ನು ಸದೆಬಡಿದ ಘಟನೆ ಕುರಿತು ಹೆಚ್‍ಡಿಕೆ ಪ್ರತಿಕ್ರಿಯೆ – ಕಹಳೆ ನ್ಯೂಸ್

ಹಾಸನ: ಭಾರತೀಯ ಸೈನಿಕರು ಪಾಕಿಸ್ತಾನದ ಒಳಗೆ ನುಗ್ಗಿ ಉಗ್ರರನ್ನು ಸದೆಬಡಿದ ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಇದು ಭಾರತೀಯ ಸೈನಿಕರ ಸಾಹಸ. ಆದರೆ ಬಿಜೆಪಿಯವರು ತಾವೇ ಪಾಕಿಸ್ತಾನದ ಮೇಲೆ ಯುದ್ಧ ಮಾಡಿದಂತೆ ಸಂಭ್ರಮಿಸುತ್ತಿದ್ದಾರೆ. ಈ ದೇಶಕ್ಕೆ ರಕ್ಷಣೆ ಕೊಡುವವರು ನಾವೇ ಎಂಬಂತೆ ವರ್ತಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಚುನಾವಣೆ ಸಂದರ್ಭದಲ್ಲಿ ರೈತರ ನೆನಪಾಗಿದೆ ಎಂದು ವ್ಯಂಗ್ಯವಾಡಿದ ಕುಮಾರಸ್ವಾಮಿ, ಈಗ...
ರಾಜಕೀಯಸುದ್ದಿ

ಪ್ರಧಾನಿಯಂತೆ ಸುಳ್ಳು ಯೋಜನೆ ಘೋಷಣೆ ಮಾಡದೆ, ಕೆಲಸ ಮಾಡಿ ತೋರಿಸುತ್ತೇವೆ: ಹೆಚ್.ಡಿ.ಕೆ – ಕಹಳೆ ನ್ಯೂಸ್

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ತರಹ ಸುಳ್ಳು ಯೋಜನೆ ಘೋಷಣೆ ಮಾಡದೆ, ಕೆಲಸ ಮಾಡಿ ತೋರಿಸುತ್ತೇವೆ ಎಂದು ಸಿಎಂ ಹೆಚ್.ಡಿ. ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಮಹಾಲಕ್ಷ್ಮಿ ಲೇಔಟ್‌ನಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಬೆಂಗಳೂರು ನಗರ 2035 ರ ವೇಳೆಗೆ ಏಷ್ಯಾದಲ್ಲಿ ಅತಿಹೆಚ್ಚಿನ ಪ್ರಮಾಣದಲ್ಲಿ ಜಿಡಿಪಿ ನೀಡುವ ನಗರವಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಅವರ ತರಹ ಹುಸಿ ಆಶ್ವಾಸನೆಗಳನ್ನು ನೀಡುವುದಿಲ್ಲ. ನಮ್ಮ ಮೈತ್ರಿ ಸರ್ಕಾರ ಘೋಷಿತ ಯೋಜನೆಗಳನ್ನು ಜಾರಿಗೊಳಿಸಿ...
ರಾಜಕೀಯಸುದ್ದಿ

ಯಡಿಯೂರಪ್ಪ ಅವರಿಗೆ ನೈತಿಕತೆ ಇದ್ದರೆ ರಾಜೀನಾಮೆ ಕೊಡಬೇಕು: ದಿನೇಶ್ ಗುಂಡೂರಾವ್ – ಕಹಳೆ ನ್ಯೂಸ್

ಮಂಗಳೂರು: ಲೋಕಸಭಾ ಚುನಾವಣೆ ಸಂಬಂಧ ಕಾಂಗ್ರೆಸ್ ಮತ್ತು ಜೆಡಿಎಸ್ ಮಧ್ಯದ ಸೀಟು ಹಂಚಿಕೆ ಮೂರ್ನಾಲ್ಕು ದಿನದಲ್ಲಿ ಅಂತಿಮವಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಈ ಬಗ್ಗೆ ನಾಳೆ ಸಭೆ ಸೇರಲಾಗುವುದು. ರೇವಣ್ಣ, ವಿಶ್ವನಾಥ್, ಪರಮೇಶ್ವರ್ ಮತ್ತು ನಾನು ಸಭೆ ಸೇರಿ ಮೂರ್ನಾಲ್ಕು ದಿನದಲ್ಲಿ ಅಂತಿಮಗೊಳಿಸಲಾಗುವುದು ಎಂದರು. ಯಡಿಯೂರಪ್ಪ ಅವರಿಗೆ ನೈತಿಕತೆ ಇದ್ದರೆ ರಾಜೀನಾಮೆ ಕೊಡಬೇಕು. ಶಾಸಕರನ್ನು ಖರೀದಿ ಮಾಡುವುದು ಬಹಿರಂಗವಾಗಿದೆ....
ರಾಜಕೀಯಸುದ್ದಿ

ಕಾಂಗ್ರೆಸ್ ಶಾಸಕ ಡಾ. ಉಮೇಶ್ ಜಾಧವ್ ಬಿಜೆಪಿ ಸೇರ್ಪಡೆಗೆ ಗ್ರೀನ್ ಸಿಗ್ನಲ್ – ಕಹಳೆ ನ್ಯೂಸ್

ಕಾಂಗ್ರೆಸ್ ಶಾಸಕ ಡಾ. ಉಮೇಶ್ ಜಾಧವ್ ಅವರು ಬಿಜೆಪಿ ಸೇರ್ಪಡೆಗೆ ಬಂಜಾರ ಸಮುದಾಯದ ಮುಖಂಡರು ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನುವ ಶಂಕೆ ವ್ಯಕ್ತವಾಗಿದೆ. ಕಲಬುರ್ಗಿ ಜಿಲ್ಲೆಯ ಚಿಂಚೋಳಿ ಕ್ಷೇತ್ರದ ಅತೃಪ್ತ ಕಾಂಗ್ರೆಸ್ ಶಾಸಕ ಡಾ.ಉಮೇಶ್ ಜಾಧವ್ ಫೋಟೋ ಇರುವ ಬ್ಯಾನರ್ ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಫೋಟೋ ನಾಪತ್ತೆಯಾಗಿದೆ. ಇನ್ನು ಸ್ವಾಗತ ಬ್ಯಾನರ್ ನಲ್ಲಿ ಡಾ. ಉಮೇಶ್ ಜಾಧವ್ ಜೊತೆ ಬಿಜೆಪಿ ಮುಖಂಡರ ಫೋಟೋಗಳು ರಾರಾಜಿಸುತ್ತಿವೆ. ಬಿಜೆಪಿ...
ರಾಜಕೀಯ

Big Breaking : ನಾಳೆ 55 ಲಕ್ಷ ರೈತರ ಖಾತೆಗೆ ಕೇಂದ್ರದಿಂದ 2000 ರೂ ನಗದು – ಕಹಳೆ ನ್ಯೂಸ್

ನವದೆಹಲಿ (ಫೆ.23): ಸಣ್ಣ ಹಾಗೂ ಅತಿಸಣ್ಣ ರೈತರ ಬ್ಯಾಂಕ್‌ ಖಾತೆಗೆ 3 ಕಂತುಗಳಲ್ಲಿ ಪ್ರತಿ ವರ್ಷ 6 ಸಾವಿರ ರು. ನಗದು ಜಮೆ ಮಾಡುವ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ‘ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ’ (ಪ್ರಧಾನಿ-ಕಿಸಾನ್‌) ಯೋಜನೆಗೆ ಭಾನುವಾರ ಚಾಲನೆ ಸಿಗಲಿದೆ. ಉತ್ತರಪ್ರದೇಶದ ಗೋರಕ್‌ಪುರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮೌಸ್‌ ಬಟನ್‌ ಕ್ಲಿಕ್ಕಿಸುತ್ತಿದ್ದಂತೆ ಸುಮಾರು 55 ಲಕ್ಷ ರೈತರ ಖಾತೆಗೆ 2 ಸಾವಿರ ರು.ನ ಮೊದಲ...
ರಾಜಕೀಯಸುದ್ದಿ

ಸ್ವ ಪಕ್ಷದವರಿಂದಲೇ ‘ಗೋ ಬ್ಯಾಕ್ ಶೋಭಕ್ಕ’ ಚಳುವಳಿ – ಕಹಳೆ ನ್ಯೂಸ್

ಉಡುಪಿ ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದ ಸದಸ್ಯರಾದ ಶೋಭಾ ಕರಂದ್ಲಾಜೆ ಅವರ ವಿರುದ್ಧ ಸ್ವಪಕ್ಷೀಯ ಕಾರ್ಯಕರ್ತರೇ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸಂಸದೆ ವಿರುದ್ಧ ಸ್ವ ಪಕ್ಷದ ಕಾರ್ಯಕರ್ತರಿಂದಲೇ ಆಕ್ರೋಶ ವ್ಯಕ್ತವಾಗಿದ್ದು, 'ಗೋ ಬ್ಯಾಕ್ ಶೋಭಕ್ಕ' ಚಳವಳಿ ಆರಂಭಿಸಲಾಗಿದೆ. 'ಗೋ ಬ್ಯಾಕ್ ಶೋಭಕ್ಕ' ಎಂದು ಪಕ್ಷದ ಕಾರ್ಯಕರ್ತರು ಶೋಭಾ ಕರಂದ್ಲಾಜೆ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. 5 ವರ್ಷದಿಂದ ನಾಪತ್ತೆಯಾಗಿದ್ದ ಶೋಭಾ ಕರಂದ್ಲಾಜೆ ಈಗ ಮೋದಿ ಹೆಸರಲ್ಲಿ ಮತ್ತೆ ಗೆಲ್ಲಲು ಬಂದಿದ್ದಾರೆ ಎಂದು...
1 190 191 192 193 194 232
Page 192 of 232