Monday, April 27, 2026

ರಾಜಕೀಯ

ರಾಜಕೀಯಸುದ್ದಿ

ಲೋಕಸಭೆ ಚುನಾವಣೆಗೆ ಬಿಜೆಪಿ ಭರ್ಜರಿ ಸಿದ್ದತೆ: ನಾಳೆ ರಾಜ್ಯಕ್ಕೆ ಪ್ರಧಾನಿ ಮೋದಿ – ಕಹಳೆ ನ್ಯೂಸ್

ಹುಬ್ಬಳ್ಳಿ: ಲೋಕಸಭೆ ಚುನಾವಣೆಗೆ ಭರ್ಜರಿ ಸಿದ್ದತೆ ನಡೆಸಿರುವ ಬಿಜೆಪಿ, ನಾಳೆಯಿಂದ ಕರ್ನಾಟಕ ರಾಜ್ಯದ ಮೊದಲ ಲೋಕಸಭೆ ಚುನಾವಣೆ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಹುಬ್ಬಳ್ಳಿಯ ಗಬ್ಬೂರ್ ಬೈಪಾಸ್ ಬಳಿಯ ಕೆಎಲ್‍ಇ ಜಾಗದಲ್ಲಿ ನಾಳೆ ಪ್ರಧಾನಿ ಮೋದಿ ಅವರ ಕರ್ನಾಟಕ ರಾಜ್ಯದ ಮೊದಲ ಲೋಕಸಭೆ ಚುನಾವಣಾ ಪ್ರಚಾರ ರ್ಯಾಲಿಗೆ ಭರದ ಸಿದ್ದತೆಗಳು ನಡೆದಿವೆ. ಬೃಹತ್ ವೇದಿಕೆ, ಲಕ್ಷಕ್ಕೂ ಅಧಿಕ ಆಸನಗಳ ವ್ಯವಸ್ಥೆ ಮಾಡಲಾಗುತ್ತಿದೆ. ಉತ್ತರ ಕನ್ನಡ, ಹಾವೇರಿ, ಧಾರವಾಡ ಸೇರಿದಂತೆ...
ರಾಜಕೀಯಸುದ್ದಿ

ಕಾಂಗ್ರೆಸ್ ಜೊತೆ ಮೈತ್ರಿ ಆತ್ಮಹತ್ಯೆಗೆ ಸಮಾನ – ಕಹಳೆ ನ್ಯೂಸ್

ನವದೆಹಲಿ: ಕಾಂಗ್ರೆಸ್ ಜೊತೆ ಮೈತ್ರಿ ಆತ್ಮಹತ್ಯೆಗೆ ಸಮಾನ ಎಂದು ಡಾ.ಬಿ.ಆರ್ ಅಂಬೇಡ್ಕರ್ ಅವರ ಹೇಳಿಕೆಯನ್ನು ಪುನರುಚ್ಛರಿಸಿದ ಪ್ರಧಾನಿ ನರೇಂದ್ರ ಮೋದಿ , ಪ್ರತಿಪಕ್ಷಗಳ ಮಹಾಘಟಬಂಧನ್ ವಿರುದ್ಧ ಗುರುವಾರ ತೀವ್ರ ವಾಗ್ದಾಳಿ ನಡೆಸಿದರು. ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಕುರಿತು ಮಾತನಾಡಿದ ಪ್ರಧಾನಿ ಮೋದಿ, ನಾವು ಭ್ರಷ್ಟಾಚಾರ ಮುಕ್ತ ಆಡಳಿತ ನೀಡಿದ್ದೇವೆ. ಆದರೆ ಯುಪಿಎ ಅವಧಿಯಲ್ಲಿ ದಲ್ಲಾಳಿಗಳಿಲ್ಲದೆ ಯಾವುದೇ ಒಪ್ಪಂದ ಆಗೇ ಇಲ್ಲ. ರಾಫೆಲ್ ಯುದ್ಧ ವಿಮಾನ ಖರೀದಿಯಲ್ಲಿ...
ರಾಜಕೀಯಸುದ್ದಿ

ಆರೋಪ ಸಾಬೀತಾದರೆ ‘ರಾಜಕೀಯ’ದಿಂದಲೇ ನಿವೃತ್ತಿ: ಯಡಿಯೂರಪ್ಪ ಘೋಷಣೆ – ಕಹಳೆ ನ್ಯೂಸ್

ಬೆಂಗಳೂರು: ತಾವು ಜೆಡಿಎಸ್ ಪಕ್ಷದ ಶಾಸಕ ನಾಗನಗೌಡ ಕಂದಕೂರ್ ಅವರಿಗೆ ಆಮಿಷ ಒಡ್ಡಿರುವುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಆರೋಪ ಮಾಡಿರುವುದಕ್ಕೆ ಪತ್ರಿಕಾಗೋಷ್ಟಿಯಲ್ಲಿ ರೋಷಾವೇಷದ ಪ್ರತಿಕ್ರಿಯೆ ನೀಡಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಈ ಆರೋಪ ಸಾಬೀತಾದರೆ ರಾಜಕೀಯದಿಂದಲೇ ನಿವೃತ್ತಿಯಾಗುವುದಾಗಿ ಘೋಷಿಸಿದ್ದಾರೆ. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿಯವರು ವೃಥಾ ಆರೋಪ ಮಾಡುತ್ತಿದ್ದಾರೆ. ಒಂದು ವೇಳೆ ಅವರು ಮಾಡಿರುವ ಆರೋಪ ಸಾಬೀತಾದರೆ 24 ಗಂಟೆಗಳಲ್ಲಿ ಸಕ್ರಿಯ ರಾಜಕಾರಣದಿಂದಲೇ ನಿವೃತ್ತಿಯಾಗುವುದಾಗಿ ಸವಾಲು ಹಾಕಿದ್ದಾರೆ....
ರಾಜಕೀಯಸುದ್ದಿ

ನನಗೆ ಲೋಕಸಭೆಯಲ್ಲಿ ಇದು ಕೊನೆಯ ಭಾಷಣ ಆಗಬಹುದು: ಹೆಚ್.ಡಿ.ಡಿ – ಕಹಳೆ ನ್ಯೂಸ್

ನವದೆಹಲಿ: ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯ ಕುರಿತು ಚರ್ಚೆಯಲ್ಲಿ ಪಾಲ್ಗೊಂಡಿದ್ದ ದೇವೇಗೌಡರು ಭಾವುಕರಾಗಿ ಮಾತನಾಡಿ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂಬ ಸುಳಿವು ನೀಡಿದ್ದಾರೆ. ಕಳೆದ 57 ವರ್ಷಗಳಿಂದ ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ಸಕ್ರಿಯವಾಗಿರುವ ನನಗೆ ಲೋಕಸಭೆಯಲ್ಲಿ ಇದು ಕೊನೆಯ ಭಾಷಣ ಆಗಬಹುದು ಎಂದು ಜೆಡಿಎಸ್ ವರಿಷ್ಠ ಮತ್ತು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಹೇಳಿದ್ದಾರೆ. ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂಬುದನ್ನು ಪರೋಕ್ಷವಾಗಿ ತಿಳಿಸಿದ್ದಾರೆ....
ರಾಜಕೀಯಸುದ್ದಿ

ರಾಜ್ಯ ಸರ್ಕಾರದ ಬಜೆಟ್ ಗೊಂದಲ: ಗದ್ದಲದ ನಡುವೆ ಬಜೆಟ್ ಮುಂದೂಡಿಕೆ – ಕಹಳೆ ನ್ಯೂಸ್

ಅನೇಕ ಕುತೂಹಲದ ಆಗರವಾಗಿರುವ ರಾಜ್ಯ ಸರ್ಕಾರದ ಬಜೆಟ್ ಗೊಂದಲ,ಪ್ರತಿಭಟನೆ.ಗದ್ದಲಕ್ಕೆ ಬಲಿಯಾಗಿ ಬಜೆಟ್ ಮುಂದೂಡಿಕೆಯಾಗಿದೆ. ಬಿಜೆಪಿ ಶಾಸಕರು ಸದನದ ಬಾವಿಗಿಳಿದು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರೆ, ಅದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿದರು. ಈ ಗದ್ದಲವನ್ನು ಕೆಲಹೊತ್ತು ವೀಕ್ಷಿಸಿದ ವಿಧಾನಸಭೆ ಸ್ಪೀಕರ್ ರಮೇಶ್ ಕುಮಾರ್, ಸದನವನ್ನು ಶುಕ್ರವಾರ ಮಧ್ಯಾಹ್ನ 12.30 ಕ್ಕೆ ಮುಂದೂಡಿದರು. ಬಜೆಟ್ ಅಧಿವೇಶನದ ಮೊದಲ ದಿನವೂ ಬಿಜೆಪಿ ಶಾಸಕರು ಗದ್ದಲ...
ರಾಜಕೀಯಸುದ್ದಿ

ಎಷ್ಟೇ ಪ್ರಯತ್ನಿಸಿದರೂ ಸಮ್ಮಿಶ್ರ ಸರ್ಕಾರವನ್ನು ಅಲುಗಾಡಿಸಲು ಸಾಧ್ಯವಿಲ್ಲ: ಡಿ.ಕೆ.ಶಿ – ಕಹಳೆ ನ್ಯೂಸ್

ಬೆಂಗಳೂರು: ಬಿಜೆಪಿಯವರು ಎಷ್ಟೇ ಪ್ರಯತ್ನ ನಡೆಸಿದರೂ ಸಮ್ಮಿಶ್ರ ಸರ್ಕಾರವನ್ನು ಅಲುಗಾಡಿಸಲು ಸಾಧ್ಯವಿಲ್ಲ.  ಬಿಜೆಪಿಯ ಹುಸಿ ಭರವಸೆ ನಂಬಿಕೊಂಡು ಪಕ್ಷದೊಂದಿಗೆ ಕಣ್ಣಾಮುಚ್ಚಾಲೆ ಆಡುತ್ತಿರುವ ಕಾಂಗ್ರೆಸ್‌ನ ಅತೃಪ್ತ ಶಾಸಕರು ಮುಂದೆ ಪಶ್ಚಾತ್ತಾಪ ಪಡಬೇಕಾಗುತ್ತದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. ವಿಧಾನಸೌಧದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಸರ್ಕಾರ ಉರುಳಿಸಲು ಏನೆಲ್ಲಾ ಪ್ರಯತ್ನ ನಡೆಸುತ್ತಿದ್ದಾರೆ. ಎಷ್ಟೆಲ್ಲಾ ಆಟ ಆಡುತ್ತಿದ್ದಾರೆ ಎಂಬ ಬಗ್ಗೆ ಮಾಹಿತಿ ಇದೆ. ಬಿಜೆಪಿ ಎಷ್ಟೇ ಆಟವಾಡಿದರೂ ಸರ್ಕಾರವನ್ನು ಅಲುಗಾಡಲ್ಲ...
ರಾಜಕೀಯಸುದ್ದಿ

ವಿಧಾನಮಂಡಲ ಅಧಿವೇಶನ: ಭಾಷಣ ಮೊಟಕುಗೊಳಿಸಿ ಹೊರನಡೆದ ರಾಜ್ಯಪಾಲರು – ಕಹಳೆ ನ್ಯೂಸ್

ಬೆಂಗಳೂರು: ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು ರಾಜ್ಯಪಾಲರು ಭಾಷಣದ ಆರಂಭದಲ್ಲೇ ಬಿಜೆಪಿ ಶಾಸಕರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ ಕಾರಣ ರಾಜ್ಯಪಾಲರು ತಮ್ಮ ಭಾಷಣವನ್ನು ಮೊಟಕು ಗೊಳಿಸಿ ತೆರಳಿದ್ದಾರೆ. ರಾಜ್ಯಪಾಲ ವಜುಭಾಯಿ ವಾಲಾ ಭಾಷಣ ಓದಲು ಶುರುವಾಗುತ್ತಿದ್ದಂತೆ ಬಿಜೆಪಿ ಸದಸ್ಯರು ಜೋರಾಗಿ ಕೂಗುತ್ತಾ ಪ್ರತಿಭಟನೆ ಆರಂಭಿಸಿದರು. 22 ಪುಟಗಳ ರಾಜ್ಯಪಾಲರ ಭಾಷಣ ಕೇವಲ ಎರಡು ಪುಟಕ್ಕೆ ಮುಕ್ತಾಯವಾಯಿತು. ವಿಧಾನ ಮಂಡಲ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣಕ್ಕೆ ಯಾವುದೇ ಅಡ್ಡಿ ಪಡಿಸಲ್ಲ ಎಂದು ವಿರೋಧ ಪಕ್ಷದ...
ರಾಜಕೀಯಸುದ್ದಿ

ಮೋದಿಯವರು ದೇಶದಲ್ಲಿ ಅರಾಜಕತೆ ಸೃಷ್ಟಿಸುತ್ತಿದ್ದಾರೆ: ಸಿದ್ದರಾಮಯ್ಯ – ಕಹಳೆ ನ್ಯೂಸ್

ಪ್ರಧಾನಿ ನರೇಂದ್ರ ಮೋದಿಯವರು ದೇಶದಲ್ಲಿ ಅರಾಜಕತೆ ಸೃಷ್ಟಿಸುತ್ತಿದ್ದಾರೆ ಅಂತ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು. ಕೊಪ್ಪಳ ಜಿಲ್ಲೆಯ ಕುಷ್ಟಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಪ್ರಧಾನಿ ನರೇಂದ್ರ ಮೋದಿ ಅರಾಜಕತೆ ಸೃಷ್ಟಿ ಮಾಡುತ್ತಿದ್ದು, ಸಿಬಿಐ ಅನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಿದರು....
1 193 194 195 196 197 232
Page 195 of 232