Monday, April 27, 2026

ರಾಜಕೀಯ

ರಾಜಕೀಯಸುದ್ದಿ

ನಟ ಪ್ರಕಾಶ್ ರೈ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಯಾವ ಕ್ಷೇತ್ರದಿಂದ ಗೊತ್ತಾ? – ಕಹಳೆ ನ್ಯೂಸ್

ಬೆಂಗಳೂರು: ದಕ್ಷಿಣ ಭಾರತದ ಹೆಸರಾಂತ ನಟ, ಪ್ರಕಾಶ್ ರೈ ಬೆಂಗಳೂರು ಸೆಂಟ್ರಲ್ ಕ್ಷೇತ್ರದಿಂದ ಮುಂಬರುವ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ. ಈ ಹಿಂದೆ ಟ್ವೀಟ್ ಮಾಡಿದ್ದ ಅವರು, ಲೋಕಸಭಾ ಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ. ಯಾವ ಕ್ಷೇತ್ರವೆಂಬುದನ್ನು ಕೆಲವು ದಿನಗಳ ಬಳಿಕ ಹೇಳುತ್ತೇನೆ ಎಂದು ಹೇಳಿದ್ದರು. ಈಗ ಮತ್ತೊಮ್ಮೆ ಈ ಬಗ್ಗೆ ಟ್ವೀಟ್ ಮಾಡಿರುವ ಅವರು ಸ್ಪರ್ಧೆಯನ್ನು ಖಚಿತಗೊಳಿಸಿದ್ದಾರೆ. ಬೆಂಗಳೂರು ಸೆಂಟ್ರಲ್ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದು ತಿಳಿಸಿದ್ದಾರೆ....
ರಾಜಕೀಯ

ಪುಟ್ಟರಂಗ ಶೆಟ್ಟಿಗೆ ಕೋಳಿವಾಡ ರಾಜೀನಾಮೆ ನೀಡಲು ಸೂಚನೆ – ಕಹಳೆ ನ್ಯೂಸ್

ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಪುಟ್ಟರಂಗ ಶೆಟ್ಟಿ ಅವರ ಸಿಬ್ಬಂದಿ ಬಳಿ ಭಾರಿ ಪ್ರಮಾಣದ ಹಣ ಪತ್ತೆಯಾದ ಹಿನ್ನಲೆಯಲ್ಲಿ ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಮಾಜಿ ಸ್ಪೀಕರ್ ಕೆ.ಬಿ. ಕೋಳಿವಾಡ ಹೇಳಿದ್ದಾರೆ. ವಿಧಾನಸೌಧದಲ್ಲಿ ಖಾಸಗಿ ಟೈಪಿಸ್ಟ್ ಆಗಿರುವ ಮೋಹನ್ ಎಂಬಾತನ ಬಳಿ 25.76 ಲಕ್ಷ ರೂಪಾಯಿ ಪತ್ತೆಯಾಗಿತ್ತು. ಈ ಹಣ ಸಚಿವ ಪುಟ್ಟರಂಗ ಶೆಟ್ಟಿ ಅವರಿಗೆ ಸೇರಿದ್ದು ಎಂಬ ಮಾತುಗಳು ಕೇಳಿ ಬಂದಿದ್ದು ಈ ಬಗ್ಗೆ...
ರಾಜಕೀಯಸುದ್ದಿ

ಕೂತೂಹಲಕ್ಕೆ ಹಾದಿಯಾದ ತ್ರಿವಳಿ ತಲಾಖ್ ನಿಷೇಧ ಮಸೂದೆ – ಕಹಳೆ ನ್ಯೂಸ್

ಲೋಕಸಭೆಯಲ್ಲಿ ಅಂಗೀಕಾರ ಪಡೆದಿರುವ ತ್ರಿವಳಿ ತಲಾಖ್ ನಿಷೇಧ ಮಸೂದೆ ರಾಜ್ಯಸಭೆಯಲ್ಲಿ ಅಂಗೀಕಾರವಾಗಲಿದೆಯೇ ಎಂಬುದು ಕುತೂಹಲ ಮೂಡಿಸಿದೆ. ರಾಜ್ಯಸಭೆಯಲ್ಲಿ ತ್ರಿವಳಿ ತಲಾಖ್ ವಿಧೇಯಕ ಮಂಡಿಸಲು ಆಡಳಿತರೂಢ ಬಿಜೆಪಿ ಮುಂದಾಗಿದೆ. ಆದರೆ, ಬಿ.ಜೆ.ಪಿ. ಸದಸ್ಯರ ಸಂಖ್ಯೆ ರಾಜ್ಯಸಭೆಯಲ್ಲಿ ಕಡಿಮೆ ಇದ್ದು ಯಾವ ತಿರುವನ್ನ ಪಡೆಯಲಿದೆ ಅನ್ನುವುದು ಕಾದು ನೋಡಬೇಕಾಗಿದೆ. ಈ ನಡುವೆ, ಬಿಜೆಪಿ ಮತ್ತು ಕಾಂಗ್ರೆಸ್ ತನ್ನ ಸದಸ್ಯರಿಗೆ ರಾಜ್ಯಸಭೆಯಲ್ಲಿ ಕಡ್ಡಾಯವಾಗಿ ಹಾಜರಿರುವಂತೆ ಸೂಚಿಸಿದೆ. ಈ ವಿಚಾರಕ್ಕೆ ಸಂಬಂಧಿಸಿ ಇವತ್ತು ಬಿಸಿ ಬಿಸಿ...
ರಾಜಕೀಯಸುದ್ದಿ

ಅಸಾಮಾಧಾನ ಹೊರಹಾಕಿದ ಮಾಜಿ ಸಿಎಂ ಸಿದ್ದರಾಮಯ್ಯ – ಕಹಳೆ ನ್ಯೂಸ್

ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರಕ್ಕೆ ಸಂಬಂಧಿಸಿ ಅನೇಕ ಚರ್ಚೆಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿತ್ತಿರೋದು ತಿಳಿದಿರೋ ವಿಚಾರ, ಆದ್ರೆ ಇದೀಗ ವಿಚಾರಕ್ಕೆ ಸಂಬಂದಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟರ್ ಮೂಲಕ ಮತ್ತೊಮ್ಮೆ ಬೇಸರ ಹೊರಹಾಕಿದ್ದಾರೆ. ನಾನು ಯಾರ ಪರವಾಗಿ ನಿಂತೆನೋ ಅವರೆ ನನ್ನ ಬೆಂಬಲಕ್ಕೆ ಬರಲಿಲ್ಲ ಅನ್ನೋದು ಸಿದ್ದರಾಮಯ್ಯನವರ ಮನದಲ್ಲಿರೋ ನೋವು. ಹೌದು, ಸರಣಿ ಟ್ವಿಟ್‍ಗಳನ್ನು ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಪ್ರತ್ಯೇಕ ಲಿಂಗಾಯತ ಧರ್ಮ ಮಾಡಿ ಎಂದು ಕೇಳಿದವರು ಯಾರು?...
ರಾಜಕೀಯಸುದ್ದಿ

ಖಾತೆ ಹಂಚಿಕೆ ವಿಚಾರ: ರಮೇಶ್ ಜಾರಕಿಹೊಳಿ ಮನವೊಲಿಸುವ ಜವಾಬ್ದಾರಿ ಸತೀಶ್ ಜಾರಕಿಹೊಳಿ ಹೆಗಲಿಗೆ – ಕಹಳೆ ನ್ಯೂಸ್

ಖಾತೆ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೇಸ್ ಪಾಳಯದಲ್ಲಿ ಮನಸ್ತಾಪ ಹೆಚ್ಚಾಗಿದ್ದು. ಇದೀಗ ಸಚಿವ ಸ್ಥಾನ ವಂಚಿತರಾಗಿ ಅಸಮಾಧಾನಗೊಂಡು ರಾಜೀನಾಮೆ ನೀಡುವುದಾಗಿ ಬೆದರಿಕೆ ಹಾಕಿರುವ ರಮೇಶ್ ಜಾರಕಿಹೊಳಿ ಅವರ ಮನವೊಲಿಸುವ ಜವಾಬ್ದಾರಿಯನ್ನು ಕಾಂಗ್ರೆಸ್ ಹೈಕಮಾಂಡ್ ಸತೀಶ್ ಜಾರಕಿಹೊಳಿ ಹೆಗಲಿಗೆ ನೀಡಿದೆ. ನಾನು ಸಚಿವನಾಗಿ ಅಧಿಕಾರ ವಹಿಸಿಕೊಂಡ ನಂತರ ಇದುವರೆಗೂ ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿಲ್ಲ, ಶೀಘ್ರವೇ ಅವರನ್ನು ಭೇಟಿ ಮಾಡಿ ರಾಜಿನಾಮೆ ನೀಡದಂತೆ ಮನವೊಲಿಸುವುದಾಗಿ ಸತೀಶ್ ತಿಳಿಸಿದ್ದಾರೆ. ರಮೇಶ್ ಸಚಿವರಾಗಿದ್ದ ವೇಳೆ...
ರಾಜಕೀಯಸುದ್ದಿ

ಸಂಸದೀಯ ಕಾರ್ಯದರ್ಶಿಗಳ ನೇಮಕ: ಹೆಚ್‌ಡಿಡಿ ಮುಂದೆ ಅಸಮಾಧಾನ ಹೊರಹಾಕಿದ ಸಿಎಂ – ಕಹಳೆ ನ್ಯೂಸ್

ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಸಂಸದೀಯ ಕಾರ್ಯದರ್ಶಿಗಳ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅಸಮಾಧಾನಗೊಂಡಿದ್ದಾರೆ. ಈ ಬಗ್ಗೆ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ ಮುಂದೆ ಕುಮಾರಸ್ವಾಮಿ ಅಸಮಾಧಾನ ಹೊರಹಾಕಿದ್ದಾರೆ ಎಂದು ತಿಳಿದುಬಂದಿದೆ.ಸಂಸದೀಯ ಕಾರ್ಯದರ್ಶಿಗಳ ನೇಮಕ ಮಾಡುವ ವಿಚಾರ ನನಗೆ ತಿಳಿಸಿರಲಿಲ್ಲ. ಸಮ್ಮಿಶ್ರ ಸರ್ಕಾರ ರಚನೆಯಾಗುವ ಸಂದರ್ಭದಲ್ಲಿ ಸಂಸದೀಯ ಕಾರ್ಯದರ್ಶಿಗಳ ನೇಮಕ ಚರ್ಚೆಯಾಗಿರಲಿಲ್ಲ. ಸಮನ್ವಯ ಸಮಿತಿ ಸಭೆಯಲ್ಲೂ ಈ ವಿಚಾರ ಚರ್ಚೆಗೆ ಬಂದಿಲ್ಲ ಎಂದು ಕುಮಾರಸ್ವಾಮಿ, ತಮ್ಮ ತಂದೆ ದೇವೇಗೌಡರ...
ರಾಜಕೀಯಸುದ್ದಿ

ಬಿಎಸ್‌ವೈ ವಿರುದ್ಧ ಡಿಸಿಎಂ ತಿರುಗೇಟು – ಕಹಳೆ ನ್ಯೂಸ್

ಬೆಂಗಳೂರು: ಸಂಪುಟ ಪುನರ್ ರಚನೆ ಸಂದರ್ಭದಲ್ಲಿ ಸಚಿವ ಸ್ಥಾನ ಹಂಚಿಕೆ ವೇಳೆ ಸ್ವಾಭಾವಿಕವಾಗಿ ಅಸಮಾಧಾನ ಇದ್ದೇ ಇರುತ್ತೆ ಎಂದು ಡಿಸಿಎಂ ಪರಮೇಶ್ವರ್ ವಿಶ್ವಾಸ ವ್ಯಕ್ತಪಡಿಸಿದರು. ಅವರು ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿ ಏರ್‌ಪೋರ್ಟ್ನಲ್ಲಿ ಮಾತನಾಡಿ, ಒಟ್ಟು 6 ಸಚಿವ ಸ್ಥಾನ ಖಾಲಿಯಿತ್ತು. ಅದರ ಜೊತೆಗೆ ಇಬ್ಬರ ಹೆಸರನ್ನು ಡ್ರಾಪ್ ಮಾಡಿ ಎಂಟು ಶಾಸಕರಿಗೆ ಸಚಿವ ಸ್ಥಾನ ನೀಡಲು ಸಮ್ಮತಿಸಿದ್ದಾರೆ. ಸಂಪುಟ ಪುನರ್ ರಚನೆ ಸಂದರ್ಭದಲ್ಲಿ ರಾಮಲಿಂಗ ರೆಡ್ಡ ಹಾಗೂ ಬಿಸಿ ಪಾಟೀಲ್‌ಗೆ...
ರಾಜಕೀಯಸುದ್ದಿ

ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ ರೈ ದೆಹಲಿ ಚಲೋ – ಕಹಳೆ ನ್ಯೂಸ್

ಬಂಟ್ವಾಳ: ಮಾಜಿ‌ ಸಚಿವ ಬಿ.ರಮಾನಾಥ ರೈ ಅವರು‌ ದಿಢೀರ್ ಅಗಿ ದೆಹಲಿಯತ್ತ ಸೋಮವಾರ ನಡೆದಿದ್ದಾರೆ.‌ ರೈ ಅವರ ದೆಹಲಿ ಚಲೋ ರಾಜಕೀಯ ವಲಯದಲ್ಲಿ ಸಾಕಷ್ಟು ಸಂಚಲನ ಮೂಡಿಸಿದೆ. ರಮಾನಾಥ ರೈ ಅವರು ರಾಜ್ಯ ರಾಜ್ಯ ರಾಜಕಾರಣದಿಂದ ರಾಷ್ಟ್ರ ರಾಜಕಾರಣದತ್ತ ಒಲವು ತೋರುತ್ತಿದ್ದಾರೆ ಎಂಬುದು ಇತ್ತೀಚಿನ ಅವರ ನಡವಳಿಕೆಗಳು ಸ್ಪಷ್ಟಪಡಿಸಿದೆ. ಅಲ್ಲದೆ ಪಕ್ಷ ಅವಕಾಶ ನೀಡಿದರೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿ ಮಾಡುವುದಾಗಿಯೂ ತಿಳಿಸಿದ್ದರು. ರೈಅವರ ಏಕಾಏಕಿ ದೆಹಲಿ ಪ್ರವಾಸ ಮಾತ್ರ ರಾಜ್ಯ...
1 198 199 200 201 202 232
Page 200 of 232