Monday, April 27, 2026

ರಾಜಕೀಯ

ರಾಜಕೀಯಸುದ್ದಿ

ಬಳ್ಳಾರಿ ಭದ್ರಕೋಟೆಯಲ್ಲಿ 14 ವರ್ಷಗಳ ನಂತರ ಕಾಂಗ್ರೆಸ್ ಬಾವುಟ – ಕಹಳೆ ನ್ಯೂಸ್

ಬಳ್ಳಾರಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದೂರಾಲೋಚನೆ ಮತ್ತು ಸಚಿವ ಡಿ.ಕೆ.ಶಿವಕುಮಾರ್ ಅವರ ರಣವ್ಯೂಹ ಬಿಜೆಪಿಯವರನ್ನು ಚಿತ್ರಾನ್ನ ಮಾಡಿದ್ದು, ಬಳ್ಳಾರಿಯ ಭದ್ರಕೋಟೆಯನ್ನು 14 ವರ್ಷಗಳ ನಂತರ ಭೇದಿಸಿ ನಂತರ ಮತ್ತೊಮ್ಮೆ ಕಾಂಗ್ರೆಸ್ ಬಾವುಟ ಹಾರಿದೆ. ಐದು ಕ್ಷೇತ್ರಗಳ ಉಪಚುನಾವಣೆ ಪೈಕಿ ಬಳ್ಳಾರಿ ಮತ್ತು ಮಂಡ್ಯ ಮೂರೂ ಪಕ್ಷಗಳಿಗೂ ಪ್ರತಿಷ್ಠೆಯ ಪ್ರಶ್ನೆಯಾಗಿತ್ತು. ಮಂಡ್ಯ ಲೋಕಸಭೆ ಮತ್ತು ರಾಮನಗರ ವಿಧಾನಸಭೆ ಚುನಾವಣೆಯ ಫಲಿತಾಂಶ ಕನ್ನಡಿಯಷ್ಟು ಸ್ಪಷ್ಟವಾಗಿತ್ತು. ಜಮಖಂಡಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುವುದು...
ರಾಜಕೀಯಸುದ್ದಿ

ಮೈತ್ರಿ ಕೂಟದ ಮಾಸ್ಟರ್ ಪ್ಲಾನ್ ಸಕ್ಸೆಸ್: ರಾಮನಗರ ಕ್ಷೇತ್ರದಿಂದ ವಿಜಯದ ಮಾಲೆ ತೊಟ್ಟ ಅನಿತಾ ಕುಮಾರಸ್ವಾಮಿ – ಕಹಳೆ ನ್ಯೂಸ್

ರಾಮನಗರ: ಮೈತ್ರಿ ಕೂಟದ ಮಾಸ್ಟರ್ ಪ್ಲಾನ್ ಸಕ್ಸೆಸ್ ಆಗಿದೆ ಯಾಕೆಂದ್ರೆ ನಾಲ್ಕು ಕ್ಷೇತ್ರಗಳಲ್ಲಿ ವಿಜಯದ ಹಾದಿಯನ್ನು ಮೈತ್ರಿ ಕೂಟ ತಲುಪುತ್ತಿದೆ. ರಾಮನಗರ ಕ್ಷೇತ್ರದಿಂದ ಅನಿತಾ ಅವರಿಗೆ ಪ್ರಮುಖ ಸ್ಪರ್ಧಿಯಾಗಿದ್ದು ವಿಜಯದ ಮಾಲೆಯನ್ನು ತೊಟ್ಟಿದ್ದಾರೆ. ಬಿಜೆಪಿಯಿಂದ ಸ್ಪರ್ಧಿಸಿದ್ದ ಎಲ್ ಚಂದ್ರಶೇಖರ್ ಅವರು, ಮತದಾನ ಇನ್ನೇನು ಎರಡೇ ದಿನಗಳಿರುವಾಗ ಭಾರತೀಯ ಜನತಾ ಪಕ್ಷಕ್ಕೆ ಕೈಕೊಟ್ಟು ಕಾಂಗ್ರೆಸ್ ಸೇರಿದ್ದಾರೆ. ಹೀಗಾಗಿ, ರಾಮನಗರದಲ್ಲಿ ಕಾಟಾಚಾರಕ್ಕೆ ಮತದಾನ ನಡೆದಿತ್ತು. ಸರಿಯಾಗಿ 8 ಗಂಟೆಗೆ ಮತಎಣಿಕೆ ಆರಂಭವಾಗಿದ್ದು, ಅಚ್ಚರಿಯ...
ರಾಜಕೀಯಸುದ್ದಿ

ಬಿಜೆಪಿ ದೇಶದಲ್ಲಿ ಸರ್ವಾಧಿಕಾರಿಯಂತೆ ಆಡಳಿತ ನಡೆಸುತ್ತಿದೆ: ಮಲ್ಲಿಕಾರ್ಜುನ ಖರ್ಗೆ ಆರೋಪ – ಕಹಳೆ ನ್ಯೂಸ್

ಮುಂಬೈ : 'ಹಿಟ್ಲರ್ ಜರ್ಮನಿಯಲ್ಲಿ ಏನು ಮಾಡಿದರೂ ಅದೇ ರೀತಿ ಭಾರತವನ್ನು ಮಾಡಲು ಪ್ರಧಾನಿ ನರೇಂದ್ರ ಮೋದಿ ಹೊರಟಿದ್ದಾರೆ' ಎಂದು ಲೋಕಸಭೆ ಕಾಂಗ್ರೆಸ್ ನಾಯಕ, ಮಹಾರಾಷ್ಟ್ರದ ಕಾಂಗ್ರೆಸ್‌ ಉಸ್ತುವಾರಿ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ಮುಂಬೈ ಕಾಂಗ್ರೆಸ್ ಬಾಂದ್ರಾದಲ್ಲಿ ಭಾನುವಾರ 'ಸಂವಿಧಾನ ಬಚಾವೋ ಪರಿಷದ್' ಎಂಬ ಕಾರ್ಯಕ್ರಮ ಆಯೋಜಿಸಿತ್ತು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. 'ಬಿಜೆಪಿ ದೇಶದಲ್ಲಿ ಸರ್ವಾಧಿಕಾರಿಯಂತೆ...
ರಾಜಕೀಯಸುದ್ದಿ

ನಂ 6 ಬಳಿಕ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ: ಡಾ ಜಿ ಪರಮೇಶ್ವರ್ – ಕಹಳೆ ನ್ಯೂಸ್

ಬಹುಕಾಲದಿಂದ ನೆನೆಗುದಿಗೆ ಬಿದ್ದಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮಹೂರ್ತ ಕೂಡಿ ಬಂದಂತಿದೆ. ನವೆಂಬರ್ 3 ರಂದು ನಡೆದ ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ ನವೆಂಬರ್ 6 ರಂದು ಹೊರ ಬೀಳಲಿದ್ದು, ಬಳಿಕ ಸಂಪುಟ ವಿಸ್ತರಣೆ ನಡೆಯುವ ಸಾಧ್ಯತೆಯಿದೆ. ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುವ ವೇಳೆ ಈ ವಿಚಾರ ಸ್ಪಷ್ಟಪಡಿಸಿದ್ದು, ಉಪ ಚುನಾವಣೆ ಫಲಿತಾಂಶದ ಬಳಿಕ...
ರಾಜಕೀಯಸುದ್ದಿ

ಚಂದ್ರಶೇಖರ್ ನಿವೃತ್ತಿಗೆ ಹಣ ಬಲವೇ ಕಾರಣ: ಯಡಿಯೂರಪ್ಪ – ಕಹಳೆ ನ್ಯೂಸ್

ರಾಮನಗರ: ಬಿಜೆಪಿ ಅಭ್ಯರ್ಥಿ ಚಂದ್ರಶೇಖರ್ ದಿಢೀರ್ ಚುನಾವಣಾ ಕಣದಿಂದ ನಿವೃತ್ತಿಯಾಗಿ ಜೆಡಿಎಸ್ ಅಭ್ಯರ್ಥಿಗೆ ಬೆಂಬಲ ಸೂಚಿಸುವಲ್ಲಿ ಸಚಿವ ಡಿ.ಕೆ.ಶಿವಕುಮಾರ್ ಮತ್ತು ಸಂಸದ ಡಿ.ಕೆ.ಸುರೇಶ್ ಅವರ ಹಣದ ಬಲವೇ ಕಾರಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ. ಜೊತೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ತಮ್ಮ ಪತ್ನಿ ಸೋಲುವ ಭಯದಿಂದ ಕುತಂತ್ರ ರಾಜಕಾರಣ ಮಾಡಿದ್ದಾರೆ ಎಂದೂ ದೂರಿದ್ದಾರೆ. ಶಿಕಾರಿಪುರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ.ಸಹೋದರರು ಹಣದ ಆಸೆ ತೋರಿಸಿ ಚಂದ್ರಶೇಖರ್ ಅವರನ್ನು...
ರಾಜಕೀಯ

ಶಿಕ್ಷಕರ ವರ್ಗಾವಣೆ ದಂಧೆಯಲ್ಲಿ ತೊಡಗಿಸಿಕೊಂಡ ಸಿಎಂ ಕುಮಾರಸ್ವಾಮಿಯವರಿಂದ ಕನ್ನಡಕ್ಕೆ ದ್ರೋಹ ಶಾಸಕ ಹರೀಶ್ ಪೂಂಜಾ ಆರೋಪ – ಕಹಳೆ ನ್ಯೂಸ್

ಬೆಳ್ತಂಗಡಿ, ನ 01 : ಮುಖ್ಯಮಂತ್ರಿ ಕುಮಾರಸ್ವಾಮಿ ಕರ್ನಾಟಕದ ಜನರಿಗೆ , ಕನ್ನಡಕ್ಕೆ ದ್ರೋಹ ಮಾಡ್ತಿದ್ದಾರೆ ಎಂದ ಶಾಸಕ ಹರೀಶ್ ಪೂಂಜಾ ಕಿಡಿಕಾರಿದ್ದಾರೆ. ತಾಲೂಕಿನ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು, ಕನ್ನಡದ ಬಗ್ಗೆ ಹೇಳಿಕೆ ನೀಡುವ ಸಿಎಂ ಗೆ ನಿಜವಾಗಿ ಮೇಲೆ ಸ್ವಾಭಿಮಾನ ಇಲ್ಲ ಎಂದು ಮುಖ್ಯಮಂತ್ರಿ ಮೇಲೆ ಹರಿಹಾಯ್ದಿದ್ದಾರೆ. ಸರ್ಕಾರವೂ ಶಿಕ್ಷಕರ ವರ್ಗಾವಣೆ ದಂಧೆಯಲ್ಲಿ ತೊಡಗಿಸಿಕೊಂಡಿದ್ದು ಸರ್ಕಾರಿ ಶಾಲೆಯ ಬಡ ಮಕ್ಕಳ ವಿದ್ಯಾಬ್ಯಾಸಕ್ಕೆ ತೊಂದರೆ ಮಾಡುತ್ತಿದೆ. ಕನ್ನಡದ...
ರಾಜಕೀಯಸುದ್ದಿ

ಬಿಜೆಪಿ ಅಭ್ಯರ್ಥಿ ಚಂದ್ರಶೇಖರ್ ಕಾಂಗ್ರೆಸ್ ಸೇರ್ಪಡೆ: ಆಕ್ರೋಶ ವ್ಯಕ್ತಪಡಿಸಿದ ಶ್ರೀನಿವಾಸ ಪೂಜಾರಿ – ಕಹಳೆ ನ್ಯೂಸ್

ಉಡುಪಿ: ರಾಮನಗರ ಬಿಜೆಪಿ ಅಭ್ಯರ್ಥಿ ಚಂದ್ರಶೇಖರ್ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗುರುವಾರ ಉಡುಪಿಯಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಅವರು, ರಾಮನಗರ ಬಿಜೆಪಿ ಅಭ್ಯರ್ಥಿ ಕಣದಿಂದ ಹಿಂದೆ ಸರಿದಿದ್ದಾರೆ ಎಂಬ ಮಾಹಿತಿ ಇದೆ. ಇದು ಬಹಳ ಆತಂಕಕಾರಿ ವಿಚಾರ. ಕುಮಾರಸ್ವಾಮಿ ಮತ್ತು ಡಿಕೆಶಿಗೆ ಒಂದು ಪ್ರಶ್ನೆ ಕೇಳುತ್ತೇನೆ‌. ಪ್ರಜಾಪ್ರಭುತ್ವ ಮಾದರಿಯಲ್ಲಿ ಚುನಾವಣೆ ಎದುರಿಸುವ ಧೈರ್ಯ ಇಲ್ಲವೇ? ಅಭ್ಯರ್ಥಿಯನ್ನೇ ಸೆಳೆದಿರುವುದು ಪ್ರಜಾಪ್ರಭುತ್ವಕ್ಕೆ...
ರಾಜಕೀಯಸುದ್ದಿ

ರೆಡ್ಡಿಯನ್ನು ಜೈಲಿನಿಂದ ಬಿಡಿಸಿಕೊಂಡು ಬಂದಿದ್ದೇ ರಾಮುಲು ಸಾಧನೆ: ಸಿದ್ದರಾಮಯ್ಯ – ಕಹಳೆ ನ್ಯೂಸ್

ಬಳ್ಳಾರಿ: ಬಳ್ಳಾರಿಗೆ ಶ್ರೀರಾಮುಲು ಕೊಡುಗೆ ಏನೂ ಇಲ್ಲ. ರಾಮುಲುರದ್ದು ರೆಡ್ಡಿಯನ್ನು ಜೈಲಿನಿಂದ ಬಿಡಿಸಿಕೊಂಡು ಬಂದಿದಷ್ಟೇ ಸಾಧನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ. ಬಳ್ಳಾರಿ ಲೋಕಸಭಾ ಉಪಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಗ್ರಪ್ಪ ಪರ ಹಗರಿಬೊಮ್ಮನಹಳ್ಳಿಯಲ್ಲಿ ಪ್ರಚಾರ ನಡೆಸಿದ ಮಾಜಿ ಸಿಎಂ ಸಿದ್ದರಾಮಯ್ಯ ರಾಮುಲು ವಿರುದ್ಧ ಕಿಡಿಕಾರಿದರು. ರಾಜ್ಯದ 5 ಕ್ಷೇತ್ರಗಳಲ್ಲೂ ನಾನು ಪ್ರಚಾರ ಮಾಡಿದ್ದೇನೆ. ಎಲ್ಲ ಕಡೆಯೂ ಕಾಂಗ್ರೆಸ್ ಪರ ಅಲೆ ಇದೆ. ಬಿಜೆಪಿ ವಿರುದ್ಧವಾದ ಅಲೆ ಎಲ್ಲೆಡೆಯಿದೆ....
1 202 203 204 205 206 232
Page 204 of 232