Monday, April 27, 2026

ರಾಜಕೀಯ

ರಾಜಕೀಯಸುದ್ದಿ

ಉಪ ಚುನಾವಣೆ ಮೈತ್ರಿಯಲ್ಲಿ ಯಾವುದೇ ಗೊಂದಲವಿಲ್ಲ: ದಿನೇಶ್‌ ಗುಂಡೂರಾವ್‌ – ಕಹಳೆ ನ್ಯೂಸ್

ಬೆಂಗಳೂರು : ಉಪ ಚುನಾವಣೆ ಮೈತ್ರಿಯಲ್ಲಿ ಯಾವುದೇ ಗೊಂದಲವಿಲ್ಲ. ರಾಮನಗರ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡುವುದೂ ನಿರ್ಧಾರವಾಗಿದೆ. ಇದನ್ನು ಧಿಕ್ಕರಿಸಿ ಯಾರಾದರೂ ಬಂಡಾಯವೆದ್ದರೆ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಎಚ್ಚರಿಕೆ ನೀಡಿದ್ದಾರೆ. ಈ ಚುನಾವಣೆಯನ್ನು ಜಂಟಿಯಾಗಿ ಎದುರಿಸಲಾಗುತ್ತಿದೆ. ಬಳ್ಳಾರಿ, ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿ ಆಯ್ಕೆಯಲ್ಲೂ ಗೊಂದಲವಿಲ್ಲ. ಶಿವಮೊಗ್ಗದಿಂದ ಜೆಡಿಎಸ್‌ನ ಮಧು ಬಂಗಾರಪ್ಪ ಸ್ಪರ್ಧಿಸುತ್ತಾರೊ ಇಲ್ಲವೊ ಎನ್ನುವುದು ಗೊತ್ತಿಲ್ಲ. ಆದರೆ, ಶಿವಮೊಗ್ಗದಲ್ಲಿ ಕಾಂಗ್ರೆಸ್‌ ಸಂಘಟನೆ ಶಕ್ತಿಯುತವಾಗಿದ್ದು ಸೂಕ್ತ ಅಭ್ಯರ್ಥಿಯನ್ನು...
ರಾಜಕೀಯಸುದ್ದಿ

ಪಕ್ಷದ ಕೆಲಸ ಮಾಡುವ ಸದುದ್ದೇಶಕ್ಕಾಗಿಯೇ ರಾಜೀನಾಮೆ: ಎನ್.ಮಹೇಶ್

ಬೆಂಗಳೂರು: ಮೈತ್ರಿ ಸರ್ಕಾರದಲ್ಲಿ  ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾಗಿದ್ದ ಎನ್.ಮಹೇಶ್ ಅವರು ಹಠಾತ್ತನೆ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಎಸ್‌ಪಿ ಪಕ್ಷದಿಂದ ಅವರು ಆರಿಸಿ ಬಂದಿದ್ದರು. ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ರವಾನಿಸಿದ್ದಾರೆ. ನಾಲ್ಕು ತಿಂಗಳಿಂದ ಸಚಿವನಾಗಿ ಕೆಲಸ ಮಾಡಿದ್ದೇನೆ, ಇದರ ನಡುವೆ ಪಕ್ಷದ ಕೆಲಸ, ಕ್ಷೇತ್ರದ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ ಹಾಗಾಗಿ ರಾಜೀನಾಮೆ ನೀಡಿದ್ದೇನೆ ಎಂದು ಹೇಳಿದ್ದಾರೆ. ಇತ್ತೀಚೆಗಷ್ಟೆ ಮಾಯಾವತಿ ಅವರು ಕಾಂಗ್ರೆಸ್ ಜೊತೆ ಮೈತ್ರಿಯನ್ನು ನಿರಾಕರಿಸಿದ್ದರು. ಅಲ್ಲದೆ ಕಾಂಗ್ರೆಸ್...
ರಾಜಕೀಯಸುದ್ದಿ

ಸಚಿವ ಎನ್ ಮಹೇಶ್ ರಾಜೀನಾಮೆ: ಮೈತ್ರಿಗೂ ಘಟನೆಗೂ ಸಂಬಂಧವಿಲ್ಲ: ಬಂಡೆಪ್ಪ ಕಾಶಂಪರ್ – ಕಹಳೆ ನ್ಯೂಸ್

ಚಿಕ್ಕಮಗಳೂರು: ಸಚಿವ ಎನ್ ಮಹೇಶ್ ರಾಜೀನಾಮೆ ಮೈತ್ರಿ ಸರ್ಕಾರಕ್ಕೆ ಇನ್ನೊಂದು ತಲೆನೋವಾಗಿದೆ. ಇದರ ಬೆನ್ನಲ್ಲೆ ಸಹಕಾರ ಸಚಿವ ಈ ಘಟನೆಯ ಕುರಿತು ಮಾತನಾಡಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಚಿವ ಬಂಡೆಪ್ಪ ಕಾಶಂಪರ್, ಮಹೇಶ್ ಯಾವ ಕಾರಣಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ಮಾಹಿತಿ ಇಲ್ಲ. ಹೈಕಮಾಂಡ್ ಆದೇಶದ ಮೇಲೆ ಅವರು ರಾಜೀನಾಮೆ ನಿರ್ಧಾರ ತೆಗೆದುಕೊಂಡಿರಬಹುದು. ದೇವೇಗೌಡ ಹಾಗೂ ಮಾಯವತಿಯವರು ಚರ್ಚಿಸಿ ಸರಿಪಡಿಸುತ್ತಾರೆ. ಮೈತ್ರಿಗೂ ಈ ಘಟನೆಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ....
ರಾಜಕೀಯಸುದ್ದಿ

ರೆಸ್ಟ್‍ನಲ್ಲೇ ಚುನಾವಣೆಗೆ ಬೆಂಬಲ ನೀಡುತ್ತೇನೆ: ಸಿದ್ದರಾಮಯ್ಯ – ಕಹಳೆ ನ್ಯೂಸ್

ಬೆಂಗಳೂರು: ವಿಧಾನಸಭೆ ಹಾಗೂ ಲೋಕಸಭೆ ಉಪಚುನಾವಣೆಯಲ್ಲಿ ವಿಶ್ರಾಂತಿ ಪಡೆಯಲು ಮಾಜಿ ಸಿಎಂ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ನಾನೊಬ್ಬ ರಾಷ್ಟ್ರಮಟ್ಟದ ರಾಜಕಾರಣಿ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ನಾನೇ ನೇತೃತ್ವ ವಹಿಸಿದ್ದೆ. ಕ್ರಿಕೆಟ್‍ನಲ್ಲಿ ದುರ್ಬಲ ತಂಡಗಳ ವಿರುದ್ಧ ನಾಯಕನಿಗೆ ವಿಶ್ರಾಂತಿ ನೀಡುವಂತೆ ನನಗೆ ವಿಶ್ರಾಂತಿಯ ಅಗತ್ಯವಿದೆ. ಈ ಬಾರಿ ನಾನು ಮನೆಯಲ್ಲೇ ಕುಳಿತು ಪ್ರಚಾರಕ್ಕೆ ಬೆಂಬಲ ನೀಡುತ್ತೇನೆ' ಎಂದು ಸಿದ್ದರಾಮಯ್ಯ ತಮ್ಮದೇ ದಾಟಿಯಲ್ಲಿ ಹೇಳಿದ್ದಾರೆ....
ರಾಜಕೀಯಸುದ್ದಿ

ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ಕರ್ನಾಟಕದಿಂದ ಸ್ಪರ್ಧಿಸುವುದಿಲ್ಲ : ಯಡಿಯೂರಪ್ಪ – ಕಹಳೆ ನ್ಯೂಸ್

ಬೆಂಗಳೂರು: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದಿಂದ ಸ್ಪರ್ಧೆ ಮಾಡುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮಾಜಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಪ್ರಧಾನಿ ಮೋದಿ ಕರ್ನಾಟಕದಿಂದ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿಯ ಕುರಿತು ಸ್ಪಷ್ಟನೆ ನೀಡಿದ ಅವರು ಇದೆಲ್ಲಾ ಸತ್ಯಕ್ಕೆ ದೂರವಾದದ್ದು, ಇದರಲ್ಲಿ ವಾಸ್ತವ ಇಲ್ಲ. ಮೋದಿಯವರು ಇಲ್ಲಿ ಸ್ಪರ್ಧೆ ಮಾಡುವ ಸುದ್ದಿ ಸುಳ್ಳು. ಇದು ಕೇವಲ ಊಹಾಪೋಹವಷ್ಟೇ ಎಂದು ಯಡಿಯೂರಪ್ಪ ಅವರು ತಿಳಿಸಿದರು. ಸೋಮವಾರ ಬಿಎಸ್​ವೈ ಅವರ...
ರಾಜಕೀಯಸುದ್ದಿ

ಕುಟುಂಬದವರನ್ನೇ ಕಣಕ್ಕಿಳಿಸುವುದು ಸರಿಯಲ್ಲ: ಜೆಡಿಎಸ್ ಮುಖಂಡರು – ಕಹಳೆ ನ್ಯೂಸ್

ಬೆಂಗಳೂರು: ಅಪ್ಪ-ಮಕ್ಕಳ ಪಕ್ಷ ಎಂಬ ಅಪವಾದದಿಂದ ಹೊರಬರಲು ವಿಧಾನಸಭಾ ಚುನಾವಣೆಗೆ ಮುನ್ನ ‘ನಮ್ಮ ಕುಟುಂಬದಿಂದ ಇಬ್ಬರೇ ಸ್ಪರ್ಧಿಗಳು’ ಎಂದು ಸಿಎಂ ಎಚ್.ಡಿ.ಕುಮಾರಸ್ವಾಮಿ ನೀಡಿದ್ದ ಹೇಳಿಕೆ ಈಗ ಅವರಿಗೆ ಮುಳುವಾಗುತ್ತಿದೆ. ರಾಮನಗರ, ಚನ್ನಪಟ್ಟಣ ಎರಡೂ ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಭರ್ಜರಿ ವಿಜಯ ಪತಾಕೆ ಹಾರಿಸಿದ್ದ ಕುಮಾರಸ್ವಾಮಿ, ಸಿಎಂ ಆಗಿ ಅಧಿಕಾರ ವಹಿಸಿಕೊಂಡಾಗ ರಾಮನಗರಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಚುನಾವಣೆ ಪ್ರಚಾರಕ್ಕೆ ತೆರಳದಿದ್ದರೂ ನನ್ನನ್ನು ಗೆಲ್ಲಿಸಿದ ಹಾಗೂ ಒಕ್ಕಲಿಗರ ಪ್ರಾಬಲ್ಯವೇ ಹೆಚ್ಚಿರುವ ಈ ಕ್ಷೇತ್ರವನ್ನು ಶತಾಯಗತಾಯ ಉಳಿಸಿಕೊಳ್ಳಲೇಬೇಕೆಂಬುದು...
ರಾಜಕೀಯಸುದ್ದಿ

ಮೈತ್ರಿ ಸರ್ಕಾರ ಪ್ರಜಾಪ್ರಭುತ್ವದ ಸುಧಾರಣೆಗೆ ಮಾರಕ: ಸಿ ಟಿ ರವಿ ಆಕ್ರೋಶ – ಕಹಳೆ ನ್ಯೂಸ್

ಮಂಗಳೂರು: ಬಿಜೆಪಿಯನ್ನ ಅಧಿಕಾರದಿಂದ ದೂರ ಇಡುವಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ತಾತ್ಕಾಲಿಕ ಯಶಸ್ಸು ಕಂಡಿದ್ದಾರೆ. ಆದ್ರೆ, ಬೇರೆ-ಬೇರೆ ರಾಜ್ಯಗಳಲ್ಲಿ ಬಡ್ಡಿ ಸಮೇತ ಚುಪ್ತ ಮಾಡಿದ್ದೇವೆ, ಮುಂದಿನ ದಿನಗಳಲ್ಲಿ ಬಿಬಿಎಂಪಿ ಹಾಗೂ ಕರ್ನಾಟಕ ಸೇರಿ ಬಡ್ಡಿ ಸಮೇತ ಚುಪ್ತ ಮಾಡ್ತೇವೆ ಎಂದು ಮೈತ್ರಿ ಸರ್ಕಾರದ ವಿರುದ್ಧ ಶಾಸಕ ಸಿ.ಟಿ ರವಿ ಕಿಡಿ ಕಾರಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವ್ರು, ಚುನಾವಣೆಯಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನ ಗೆದ್ದಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ಮೈತ್ರಿ...
ರಾಜಕೀಯಸುದ್ದಿ

ಮೇಲ್ಮನೆ ಚುನಾವಣೆ ಕಣದಿಂದ ಹಿಂದೆ ಸರಿಯಲು ಬಿಜೆಪಿ ಅಚ್ಚರಿಯ ನಿರ್ಧಾರ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದ ಸಮ್ಮಿಶ್ರ ಸರ್ಕಾರದ ಪತನಕ್ಕೆ ಕಾರಣವಾಗಲಿದೆ ಎಂದೇ ಬಿಂಬಿಸಲಾಗಿದ್ದು ರಾಜ್ಯ ರಾಜಕೀಯದ ಗೊಂದಲಗಳಿಗೆ ಕ್ಲೈಮಾಕ್ಸ್​ ಆಗಲಿದೆ ಎಂದು ಪ್ರಚಾರ ಪಡೆದುಕೊಂಡಿದ್ದ ವಿಧಾನ ಪರಿಷತ್​ ಉಪ ಚುನಾವಣೆಯ ಕಣಕ್ಕೆ ತನ್ನ ಅಭ್ಯರ್ಥಿಗಳನ್ನು ಇಳಿಸದಿರಲು ಬಿಜೆಪಿ ಅಚ್ಚರಿಯ ನಿರ್ಧಾರ ಕೈಗೊಂಡಿದೆ ಎಂದು ತಿಳಿದುಬಂದಿದೆ. ಬಿಜೆಪಿಯಿಂದ ಚನ್ನಪಟ್ಟಣ ಮಾಜಿ ಶಾಸಕ ಸಿ.ಪಿ ಯೋಗೀಶ್ವರ್​, ಬಿ.ಜೆ.ಪುಟ್ಟಸ್ವಾಮಿ, ಮಾಲೀಕಯ್ಯ ಗುತ್ತೇದಾರ್​​ ಅವರನ್ನು ಕಣಕ್ಕಿಳಿಸಲು ಈ ಹಿಂದೆ ನಿರ್ಧಾರ ಕೈಗೊಂಡಿತ್ತು. ಸಂಖ್ಯಾಬಲವಿಲ್ಲದಿದ್ದರೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿದ್ದ ಬಿಜೆಪಿಯ ನಡೆ...
1 204 205 206 207 208 232
Page 206 of 232