ಸಮರ್ಥ ವಿಪಕ್ಷವಾಗಿ ಕೆಲಸ ಮಾಡಲು ಬಿಜೆಪಿ ವಿಫಲ: ಎಚ್.ವಿಶ್ವನಾಥ್ – ಕಹಳೆ ನ್ಯೂಸ್
ಚಿತ್ರದುರ್ಗ: ತನ್ನ ಸರ್ಕಾರ ರಚನೆ ಮಾಡಿಕೊಳ್ಳಲು ಬಿಜೆಪಿ ಆತುರದಲ್ಲಿದೆ. ಅತಿಶೀಘ್ರದಲ್ಲೇ ಮುಖ್ಯಮಂತ್ರಿಯಾಗಿ ಬಿಡಬೇಕೆಂಬ ಕಾತುರ ಆ ಪಕ್ಷದ ನಾಯಕರಲ್ಲಿದೆ. ಹೀಗಾಗಿ ರಾಜ್ಯದಲ್ಲಿ ಬಿಜೆಪಿ ಸಮರ್ಥ ವಿಪಕ್ಷವಾಗಿ ಕೆಲಸ ಮಾಡಲು ವಿಫಲವಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಿರಿಗೆರೆಯ ತರಳಬಾಳು ಬೃಹನ್ಮಠದ ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಚಿತ್ರದುರ್ಗಕ್ಕೆ ಆಗಮಿಸಿದ್ದ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. “ಸರ್ಕಾರ ರಚಿಸುವ...







