ಕರ್ನಾಟಕ ಪರೀಕ್ಷಾ ವಿಧಾನದಲ್ಲಿ ಭಾರೀ ಬದಲಾವಣೆ – ಕಹಳೆ ನ್ಯೂಸ್
ಚಾಮರಾಜನಗರ : ಪುಸ್ತಕ ಮುಚ್ಚಿಟ್ಟು ಬರೆಯುವ ಪರೀಕ್ಷೆಗಳು ಅವೈಜ್ಞಾನಿಕವಾಗಿದ್ದು, ರಾಜ್ಯದಲ್ಲಿ ಪುಸ್ತಕ ನೋಡಿಕೊಂಡು ಪರೀಕ್ಷೆ ಬರೆಯುವ ಪದ್ಧತಿ ತರಲು ಚಿಂತನೆ ನಡೆಸಿದ್ದೇನೆ. ಇದು ದೇಶದಲ್ಲೇ ಮೊದಲು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎನ್. ಮಹೇಶ್ ತಿಳಿಸಿದ್ದಾರೆ. ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಬಹುಜನ ವಿದ್ಯಾರ್ಥಿ ಸಂಘದ ವತಿಯಿಂದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದರು. ಮಕ್ಕಳೇನು ಕೈದಿಗಳಾ?: ಪೊಲೀಸ್ ಭದ್ರತೆ ಹಾಗೂ ಸಿಸಿ...







