ಶನಿವಾರ ಬಿಜೆಪಿ 2ನೇ ಟಿಕೆಟ್ ಪಟ್ಟಿ – ಬಿಎಸ್‌ವೈ
ಬೆಂಗಳೂರು : ಈ ಬಾರಿಯ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಬಿಜೆಪಿಯ ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಲಾಗುವುದು ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ 72 ಅಭ್ಯರ್ಥಿಗಳ ಮೊದಲ ಪಟ್ಟಿಬಿಡುಗಡೆ ಮಾಡಲಾಗಿದೆ. ಈ ಪೈಕಿ ಬಹುತೇಕ ಎಲ್ಲ ಕ್ಷೇತ್ರಗಳಲ್ಲೂ ಗೆಲುವು ಸಾಧಿಸಲಾಗುವುದು ಎಂದರು. ಎರಡನೇ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಲು ಉದ್ದೇಶಿಸಲಾಗಿದೆ. ಅದು ಸುಮಾರು 70ರಿಂದ 80 ಕ್ಷೇತ್ರಗಳ ಅಭ್ಯರ್ಥಿಗಳನ್ನು ಒಳ...







