ವಿಕಸಿತ ಭಾರತಕ್ಕೆ ಮುನ್ನುಡಿ ಬರೆದ ಬಜೆಟ್ ; ಕೇಂದ್ರದ ಮಧ್ಯಂತರ ಬಜೆಟ್ ಸ್ವಾಗತಿಸಿದ ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬೃಜೇಶ್ ಚೌಟ – ಕಹಳೆ ನ್ಯೂಸ್
ನರೇಂದ್ರ ಮೋದಿಯವರ ವಿಕಸಿತ ಭಾರತದ ಪರಿಕಲ್ಪನೆಯನ್ನು ಮುಂದಿಟ್ಟುಕೊAಡು 2047 ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿಸುವ ನಿಟ್ಟಿನಲ್ಲಿ ವಿತ್ತ ಮಂತ್ರಿಗಳಾದ ಶ್ರೀಮತಿ ನಿರ್ಮಲಾ ಸೀತಾರಮನ್‌ರವರು ಮಂಡಿಸಿದ ದೂರದೃಷ್ಟಿಯ, ಪ್ರಗತಿಶೀಲ ಮತ್ತು ವಿತ್ತೀಯ ಶಿಸ್ತಿನ ಮಧ್ಯಂತರ ಬಜೆಟ್ 2024ನ್ನು ಅತ್ಯಂತ ಸಂತೋಷದಿAದ ಸ್ವಾಗತಿಸುತ್ತೇನೆ. ವಿಕಸಿತ ಭಾರತದ 4 ಸ್ತಂಭಗಳಾದ ಯುವಜನತೆ, ಬಡವರು, ಮಹಿಳೆಯರು ಮತ್ತು ರೈತರನ್ನು ಸಶಕ್ತಗೊಳಿಸುವ ಮೂಲಕ 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಭರವಸೆಯನ್ನು...







