ಸಿಎಂ ಸಿದ್ಧರಾಮಯ್ಯ ಕುರ್ಚಿ ಉಳಿಸಿಕೊಳ್ಳಲು 300 ಜಾತಿ ಸೃಷ್ಠಿ: ಸಂಸದ ಬೊಮ್ಮಾಯಿ -ಕಹಳೆ ನ್ಯೂಸ್
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಕುರ್ಚಿ ಉಳಿಸಿಕೊಳ್ಳಲು ಮುನ್ನೂರಕ್ಕೂ ಹೆಚ್ಚು ಜಾತಿಗಳನ್ನು ಸೃಷ್ಠಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಾಮಾಜಿಕ ಶೈಕ್ಷಣಿಕ ಹೆಸರಿನಲ್ಲಿ ನಡೆಯುವ ಜಾತಿ ಸಮೀಕ್ಷೆ ಸಂವಿಧಾನ ಬಾಹಿರವಾಗಿದ್ದು, ರಾಜಕೀಯ ಪ್ರೇರಿತವಾಗಿದೆ. ಜಾತ್ಯಾತೀತ ಎಂದು ಹೇಳಿಕೊಳ್ಳುವ ಮುಖ್ಯಮಂತ್ರಿ ಜಾತಿ ಜಾತಿಗಳ ನಡುವೆ ಜಾತಿಗಳನ್ನು ಒಡೆದು ಜಾತೀವಾದಿ ಮುಖ್ಯಮಂತ್ರಿಯಾಗಿದ್ದಾರೆ. ಅವರು ಸುಮಾರು ಮುನ್ನೂರಕ್ಕೂ ಹೆಚ್ಚು ಜಾತಿಗಳನ್ನು ಸೃಷ್ಠಿ ಮಾಡಿದ್ದಾರೆ ಎಂದಿದ್ದಾರೆ. ಹಿಂದುಳಿದ...







