ಪ್ರಧಾನ ಮಂತ್ರಿಗಳ ಸಾಧನೆಯನ್ನು ಜನರಿಗೆ ತಿಳಿಸುವ ಕೆಲಸ ಆಗಬೇಕು-ಸಂಜೀವ ಮಠಂದೂರು : ಪಕ್ಷಕ್ಕೆ ಯಾರನ್ನೂ ಸೇರಿಸಿದರು ಪುತ್ತೂರು ಬಿಜೆಪಿ ಮುಕ್ತವಾಗಿ ಸ್ವಾಗತಿಸುತ್ತದೆ: ಸಾಜ ರಾಧಕೃಷ್ಣ ಆಳ್ವ – ಕಹಳೆ ನ್ಯೂಸ್
ವಿಟ್ಲ. ನರೇಂದ್ರ ಮೋದಿಯವರು ಪ್ರಧಾನಮಂತ್ರಿಯಾಗಿ 9ವರ್ಷ ಪೂರೈಸಿದ ಸಾಧನೆಯ ಸಂಭ್ರಮವನ್ನು ಜನರಿಗೆ ತಲುಪಿಸಲು ಕಾರ್ಯಕರ್ತರು ಕೆಲಸ ಮಾಡಬೇಕು ಎಂದು ಪುಣಚ ಮಹಾಶಕ್ತೀ ಕೇಂದ್ರದ ಸಭೆಯಲ್ಲಿ ಮಾಜಿ ಶಾಸಕರಾದ ಸಂಜೀವ ಮಠಂದೂರುರವರು ಹೇಳಿದರು.ಸಭೆಯ ಅಧ್ಯಕ್ಷತೆ ವಹಿಸಿದ್ದ ಗ್ರಾಮಾಂತರ ಮಂಡಲದ ಅಧ್ಯಕ್ಷರಾದ ಸಾಜ ರಾಧಕೃಷ್ಣ ಆಳ್ವರವರು ಮಾತನಾಡಿ ಪ್ರತಿ ಬೂತಿನಲ್ಲಿ ಪಕ್ಷವನ್ನು ಬಲಪಡಿಸುವ ಮೂಲಕ ಮುಂದಿನ ಚುನಾವಣೆಯಲ್ಲಿ ಗೆಲುವು ಸಾಧಿಸಲು ಸಂಘಟಿತ ಪ್ರಯತ್ನ ಮಾಡಬೇಕು ಎಂದು ಹೇಳಿದರು. ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ...







