ನರಿಕೊಂಬು ಗ್ರಾ.ಪಂ.ವ್ಯಾಪ್ತಿಯ ವಿವಿಧ ಭಾಗದಲ್ಲಿ ಸಂಚರಿಸಿ, ಪ್ರಮುಖ ಮನೆಗಳಿಗೆ ಬೇಟಿ ನೀಡಿ ಮತಯಾಚನೆ ನಡೆಸಿದ ಬಂಟ್ವಾಳ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ – ಕಹಳೆ ನ್ಯೂಸ್
ಬಂಟ್ವಾಳ: ನಿಮ್ಮ ನಿಮ್ಮ ಬೂತ್ ಗಳಲ್ಲಿ ಪ್ರತಿ ಮತವನ್ನು ಬಿಜೆಪಿ ಮತವಾಗಿ ಪರಿವರ್ತಿಸಿ ಬಂಟ್ವಾಳದಲ್ಲಿ ಕಾಂಗ್ರೆಸ್ ಮುಕ್ತ ಬಂಟ್ವಾಳವಾಗಿ ಮಾಡಲು ಕಾರ್ಯಕರ್ತರು ಕೆಲಸ ಮಾಡಿ ಎಂದು ಬಂಟ್ವಾಳ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಅವರು ತಿಳಿಸಿದರು. ಬಂಟ್ವಾಳ ಬಿಜೆಪಿ ಅಭ್ಯರ್ಥಿ ಅವರು ನರಿಕೊಂಬು ಗ್ರಾ.ಪಂ.ವ್ಯಾಪ್ತಿಯ ಶಂಭೂರು, ನರಿಕೊಂಬು ಗ್ರಾಮದ ವಿವಿಧ ಭಾಗದಲ್ಲಿ ಸಂಚರಿಸಿ, ಪ್ರಮುಖ ಮನೆಗಳಿಗೆ ಬೇಟಿ ನೀಡಿ ಮತಯಾಚನೆ ನಡೆಸಿದರು. ಕಾಂಗ್ರೇಸ್ ಗೆ ಅಧಿಕಾರ ನೀಡಿ ಯುವಕರನ್ನು ಜೈಲಿಗಟ್ಟಿ,...






