Sunday, June 14, 2026

ರಾಜಕೀಯ

ಉಡುಪಿರಾಜಕೀಯಸುದ್ದಿ

ಉಡುಪಿ ಬಿಜೆಪಿ ಅಭ್ಯರ್ಥಿಯಾಗಿ ಯಶ್‌ಪಾಲ್ ನಾಮಪತ್ರ ಸಲ್ಲಿಕೆ; ಪಾದಯಾತ್ರೆಯಲ್ಲಿ ಸಾಗಿ ಬಂದ ಯಶ್‌ಪಾಲ್ – ಕಹಳೆ ನ್ಯೂಸ್

ಉಡುಪಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಎ. ಸುವರ್ಣ ಅವರು ನಾಮಪತ್ರ ಸಲ್ಲಿಕೆಯ ಕೊನೆಯ ದಿನವಾದ ನಿನ್ನೆ ಸಹಸ್ರ ಸಂಖ್ಯೆಯ ಕಾರ್ಯಕರ್ತರೊಂದಿಗೆ ಶಾಸಕ ಕೆ. ರಘುಪತಿ ಭಟ್ ಸಮೇತರಾಗಿ ಜಿಲ್ಲಾ ಬಿಜೆಪಿ ಕಚೇರಿಯಿಂದ ಪಾದಯಾತ್ರೆ ಮೂಲಕ ತಾಲೂಕು ಕಚೇರಿಗೆ ಕ್ರಮಿಸಿ ನಾಮಪತ್ರ ಸಲ್ಲಿಸಿದರು. ಬೆಳಗ್ಗೆ ಶ್ರೀ ಕೃಷ್ಣಮಠದಲ್ಲಿ ದೇವರ ದರ್ಶನ ಪಡೆದು, ಗೋಶಾಲೆಯಲ್ಲಿ ಗೋವುಗಳಿಗೆ ವಿಶೇಷ ಪೂಜೆ ಸಲ್ಲಿಸಿದರು. ಮಲ್ಪೆಯ ಅಯ್ಯಪ್ಪ ಸ್ವಾಮಿ ಮಂದಿರ, ಕಡಿಯಾಳಿ ಶ್ರೀ ಮಹಿಷಮರ್ದಿನಿ...
ಬಂಟ್ವಾಳರಾಜಕೀಯಸುದ್ದಿ

“ಮನೆ ಮಗನಾಗಿ ಪ್ರಮಾಣಿಕತೆಯಿಂದ, ಕರ್ತವ್ಯ ನಿರ್ವಹಿಸಿದ್ದೇನೆ”; ರಾಜೇಶ್ ನಾಯ್ಕ್ ಉಳಿಪಾಡಿಗುತ್ತು –ಕಹಳೆ ನ್ಯೂಸ್

ಬಂಟ್ವಾಳ: ನಿಮ್ಮ ಮನೆಯ ಮಗನಾಗಿ , ಕ್ಷೇತ್ರದ ಜನರ ಸೇವಕನಾಗಿ, ಅತ್ಯಂತ ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿದ್ದೇನೆ ಎಂದು ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ತಿಳಿಸಿದರು. ಬಂಟ್ವಾಳ ವಿಧಾನಸಭಾ ಕ್ಷೇತ್ರದ ವೀರಕಂಭ ಗ್ರಾಮದಲ್ಲಿ ಪ್ರಮುಖರ ಮನೆಗಳಿಗೆ ಬೇಟಿ ನೀಡಿ, ಮತಯಾಚನೆ ನಡೆಸುವ ಸಂದರ್ಭದಲ್ಲಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ಮೂರು ಬಾರಿ ಪಾದಯಾತ್ರೆ ನಡೆಸಿದ್ದೇನೆ, ಆ ಸಂದರ್ಭದಲ್ಲಿ ಗ್ರಾಮದ ಸಮಸ್ಯೆ ಗಳನ್ನು ಕಂಡಿದ್ದೇನೆ. ಆ ಬಳಿಕ ಅಂತಹ...
ದಕ್ಷಿಣ ಕನ್ನಡಬೆಳ್ತಂಗಡಿರಾಜಕೀಯಸುದ್ದಿ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಕ್ಕೆ JDSನಿಂದ ಅಚ್ಚರಿ ಆಯ್ಕೆ ; ಪತ್ರಕರ್ತ ಅಶ್ರಫ್ ಗೆ ‘ಬಿ ಫಾರ್ಮ್’ – ಕಹಳೆ ನ್ಯೂಸ್

ಬೆಳ್ತಂಗಡಿ: 2023 ರ ಕರ್ನಾಟಕ ವಿಧಾನ ಸಭೆಯ ಸಾರ್ವತ್ರಿಕ ಚುನಾವಣೆಯಲ್ಲಿ ಜನತಾದಳ ಜಾತ್ಯತೀತ ಪಕ್ಷದ ವತಿಯಿಂದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ತಾಲೂಕಿನ ಗ್ರಾಮೀಣ‌ ಪತ್ರಕರ್ತ ಅಶ್ರಫ್ ಆಲಿಕುಂಞಿ ಮುಂಡಾಜೆ ಅವರಿಗೆ ಮಾಜಿ ಮುಖ್ಯ ಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರು ಅವಕಾಶ ಒದಗಿಸಿಕೊಟ್ಟಿದ್ದಾರೆ‌. ಎ.20 ರಂದು ಪಕ್ಷದ ಹಿರಿಯರ ಸಮ್ಮುಖ ಅವರಿಗೆ ಅಧಿಕೃರ ‘ಬಿ ಫಾರ್ಮ್’ ಹಸ್ತಾಂತರಿಸಲಾಯಿತು. ಅಶ್ರಫ್ ಆಲಿಕುಂಞಿ ಮುಂಡಾಜೆ ಅವರು 1998 ರಿಂದ...
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಅಲಿ – ಬಾವಾ ಮುಖಾಮುಖಿ ; ಪರಸ್ಪರ ಅಭ್ಯರ್ಥಿಗಳ ಪರ ಮೊಳಗಿದ ಘೋಷಣೆ – ಕಹಳೆ ನ್ಯೂಸ್

ಮಂಗಳೂರು: ನಗರದ ಮಿನಿವಿಧಾನಸೌಧ ಬಳಿ ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಮುಖಾಮುಖಿಯಾಗಿ ಪರಸ್ಪರ ಅಭ್ಯರ್ಥಿಗಳ ಪರ ಘೋಷಣೆ ಮೊಳಗಿಸಿದ ಘಟನೆ ಗುರುವಾರ ನಡೆದಿದೆ. ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರಸ್ ಅಭ್ಯರ್ಥಿ ಇನಾಯತ್ ಅಲಿ ಅವರು ನಾಮಪತ್ರ ಸಲ್ಲಿಕೆಗೆ ಮಿನಿವಿಧಾನಸೌಧಕ್ಕೆ‌ಆಗಮಿಸಿದರು. ಇದೇ ವೇಳೆ ಜೆಡಿಎಸ್ ಪಕ್ಷದಿಂದ ಮೊಯ್ದಿನ್ ಬಾವಾ ನಾಮಪತ್ರ ಸಲ್ಲಿಕೆ ವಿಷಯ ತಿಳಿದು ಜೆಡಿಎಸ್ ಕಾರ್ಯಕರ್ತರು ಕೂಡ ಆಗಮಿಸಿದ್ದರು. ಪರಸ್ಪರ ಘೋಷಣೆ ಕೂಗಿದ ಘಟನೆ ನಡೆಯಿತು. ಮಾಜಿ ಶಾಸಕ ಮೊಯ್ದಿನ್...
ದಕ್ಷಿಣ ಕನ್ನಡಬಂಟ್ವಾಳರಾಜಕೀಯಸುದ್ದಿ

ಕಳೆದ 5 ವರ್ಷಗಳಲ್ಲಿ 2095 ಕೋ.ರೂ. ಅನುದಾನದಿಂದ ಬಂಟ್ವಾಳದ ಸಮಗ್ರ ಅಭಿವೃದ್ಧಿ ಕಾರ್ಯ : ಬಿಜೆಪಿ ಅಭ್ಯರ್ಥಿ, ಶಾಸಕ ರಾಜೇಶ್‌ ನಾೖಕ್‌ – ಕಹಳೆ ನ್ಯೂಸ್

ಬಂಟ್ವಾಳ: ಕಳೆದ 5 ವರ್ಷಗಳಲ್ಲಿ ಬಂಟ್ವಾಳ ಕ್ಷೇತ್ರದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಸುಮಾರು 2095 ಕೋ.ರೂ.ಗಳ ಅನುದಾನದ ಅಭಿವೃದ್ಧಿ ಕಾರ್ಯ ಅನುಷ್ಠಾನಗೊಳಿಸಲಾಗಿದ್ದು, ಬಂಟ್ವಾಳವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸಲು ಹಲವು ಯೋಜನೆಗಳ ಅನುಷ್ಠಾನಕ್ಕೆ ಕ್ಷೇತ್ರದ ಮತದಾರರು ಮತ್ತೂಮ್ಮೆ ಆಶೀರ್ವಾದ ಮಾಡಬೇಕು ಎಂದು ಬಂಟ್ವಾಳ ಬಿಜೆಪಿ ಅಭ್ಯರ್ಥಿ, ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಹೇಳಿದರು. ಅವರು ಬಂಟ್ವಾಳ ಕ್ಷೇತ್ರದ ಹಲವು ಗ್ರಾಮಗಳಲ್ಲಿ ಮನೆ ಮನೆ ಭೇಟಿಯ ಮೂಲಕ ಮತಯಾಚನೆ ನಡೆಸಿ ಕಾರ್ಯಕರ್ತರ ಸಭೆಯಲ್ಲಿ...
ಉಡುಪಿರಾಜಕೀಯಸುದ್ದಿ

ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಶ್‌ಪಾಲ್‌ ಎ. ಸುವರ್ಣ ನಾಮಪತ್ರ ಸಲ್ಲಿಕೆ, ಬೃಹತ್ ಪಾದಯಾತ್ರೆ ; ಶಾಸಕ ಕೆ. ರಘುಪತಿ ಭಟ್‌ ಸಾಥ್ – ಕಹಳೆ ನ್ಯೂಸ್

ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಶ್‌ಪಾಲ್‌ ಎ. ಸುವರ್ಣ ಅವರು ಗುರುವಾರ ಅಪಾರ ಸಂಖ್ಯೆಯ ಬಿಜೆಪಿ ಕಾರ್ಯಕರ್ತರೊಂದಿಗೆ ಪಾದಯಾತ್ರೆ ಮೂಲಕ ತಾಲೂಕು ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ಶ್ರೀ ಕೃಷ್ಣಮಠದಲ್ಲಿ ಪೂಜೆ ಸಲ್ಲಿಸಿ, ಗೋವುಗಳಿಗೆ ವಿಶೇಷ ಪೂಜೆ ಸಲ್ಲಿಸಿದರು. ಮಲ್ಪೆ ಅಯ್ಯಪ್ಪ ಸ್ವಾಮಿ ಮಂದಿರ, ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಹಿರಿಯ ಮುಖಂಡ ಸೋಮಶೇಖರ ಭಟ್‌ ಮನೆಗೆ ತೆರಳಿ ಆಶೀರ್ವಾದ ಪಡೆದು ಬಿಜೆಪಿ...
ಉಡುಪಿರಾಜಕೀಯರಾಜ್ಯಸುದ್ದಿ

ಉಡುಪಿಯಲ್ಲಿ ಇಂದು ಬಿಜೆಪಿ ಮಹಿಳಾ ಕಾರ್ಯ ಪ್ರಮುಖರ ಸಭೆ ; ಮಹಿಳಾ ಕಾರ್ಯದ ರಾಜ್ಯ ಸಹ ಸಂಚಾಲಕಿ ಶ್ಯಾಮಲಾ ಕುಂದರ್‌ ಪತ್ರಿಕಾಗೋಷ್ಠಿ – ಕಹಳೆ ನ್ಯೂಸ್

ಉಡುಪಿ: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಂಗಳೂರು ಹಾಗೂ ಶಿವಮೊಗ್ಗ ವಿಭಾಗದ ಬಿಜೆಪಿ ಮಹಿಳಾ ಕಾರ್ಯ ಪ್ರಮುಖರ ಸಭೆ ಎ. 21ರಂದು ಬೆಳಗ್ಗೆ 10ಕ್ಕೆ ಜಿಲ್ಲಾ ಬಿಜೆಪಿ ಕಚೇರಿ ಯಲ್ಲಿ ನಡೆಯಲಿದೆ ಎಂದು ಮಹಿಳಾ ಕಾರ್ಯದ ರಾಜ್ಯ ಸಹ ಸಂಚಾಲಕಿ ಶ್ಯಾಮಲಾ ಕುಂದರ್‌ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಈ ಸಭೆಯಲ್ಲಿ 90ರಿಂದ 95 ಮಂದಿ ಸೇರುವ ನಿರೀಕ್ಷೆಯಿದ್ದು ಮಹಿಳಾ ಕಾರ್ಯದ ರಾಷ್ಟ್ರೀಯ ಉಪಾಧ್ಯಕ್ಷೆ ಜ್ಯೋತಿ ಶೇಥಿ, ಮಹಿಳಾ ಮೋರ್ಚಾದ ರಾಜ್ಯ ಸಹಾ ಪ್ರಭಾರಿ...
ಉಡುಪಿರಾಜಕೀಯಸುದ್ದಿ

ಹೆಬ್ರಿಯಲ್ಲಿ ಗೋಪಾಲ ಭಂಡಾರಿ ಪ್ರತಿಮೆ ನಿಮಾ೯ಣಕ್ಕೆ ನನ್ನ ಮೊದಲ ಆದ್ಯತೆ ; ಕಾಂಗ್ರೆಸ್ ಕಾಯ೯ಕತ೯ರ ಸಭೆಯಲ್ಲಿ ಕಾಕ೯ಳ ವಿಧಾನ ಸಭಾ ಕೇತ್ರದ ಕಾಂಗ್ರೆಸ್ ಅಭ್ಯರ್ಥಿ ಮುನಿಯಾಲು ಉದಯಕುಮಾರ್ ಶೆಟ್ಟಿ – ಕಹಳೆ ನ್ಯೂಸ್

ಹೆಬ್ರಿ: ಸಜ್ಜನ ಪ್ರಾಮಾಣಿಕ ರಾಜಕಾರಣಿಯಾದ ಕಾಂಗ್ರೆಸ್ ಪಕ್ಷವನ್ನು ಮುನ್ನೆಡಿಸಿ ಕಾಕ೯ಳ ಜನರ ಮನಸ್ಸಿನಲ್ಲಿ ಉಳಿದ ಧೀಮಂತ ನಾಯಕ ದಿ.ಗೋಪಾಲ ಭಂಡಾರಿಯವರ ಪ್ರತಿಮೆ ನಿಮಾ೯ಣಕ್ಕೆ ನನ್ನ ಮೊದಲ ಆದ್ಯತೆ ಎಂದು ಕಾಕ೯ಳ ವಿಧಾನ ಸಭಾ ಕೇತ್ರದ ಕಾಂಗ್ರೆಸ್ ಅಭ್ಯರ್ಥಿ ಮುನಿಯಾಲು ಉದಯಕುಮಾರ್ ಶೆಟ್ಟಿ ಹೇಳಿದರು. ಅವರು ಎ.18 ರಂದು ಹೆಬ್ರಿ ಮೇಲ್ಪೇಟೆ ದಿ.ಪ್ರಸನ್ನ ಬಲ್ಲಾಳ ಅವರ ನಿವಾಸದಲ್ಲಿ ನೂತನವಾಗಿ ಆರಂಭಗೊಂಡ ಚುನಾವಣಾ ಪ್ರಚಾರ ಕಚೇರಿಯಲ್ಲಿ ಕಾಂಗ್ರೆಸ್ ಕಾಯ೯ಕತ೯ರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಯಾವುದೇ...
1 61 62 63 64 65 232
Page 63 of 232