ಕಾರ್ಕಳದಲ್ಲಿ ಮಾದಕ ದ್ರವ್ಯ ನೀಡಿ ಗ್ಯಾಂಗ್ ರೇಪ್ ನಡೆಸಿದ ಕಾಮಾಂಧರ ಅಟ್ಟಹಾಸ ಖಂಡನೀಯ : ಬಿಜೆಪಿ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ– ಕಹಳೆ ನ್ಯೂಸ್
ಕಾರ್ಕಳದ ಕುಕ್ಕುಂದೂರಿನಲ್ಲಿ ಮಾದಕ ದ್ರವ್ಯ ನೀಡಿ ಗ್ಯಾಂಗ್ ರೇಪ್ ನಡೆಸಿದ ಬೀಬತ್ಸ್ಯ ಘಟನೆ ನಾಗರಿಕ ಸಮಾಜ ಬೆಚ್ಚಿ ಬೀಳುವಂತೆ ಮಾಡಿದೆ. ಸಮಾಜ ವಿದ್ರೋಹಿ ಕಾಮಾಂಧರ ಅಟ್ಟಹಾಸ ಅತ್ಯಂತ ಖಂಡನೀಯ ಎಂದು ಬಿಜೆಪಿ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಬಂಧಿತರಾಗಿರುವ ಆರೋಪಿಗಳ ಹಿನ್ನೆಲೆ ಹಾಗೂ ಅವರಿಗಿರುವ ಮಾದಕ ವಸ್ತು ಜಾಲದ ನಂಟಿನ ಬಗ್ಗೆಯೂ ಪೊಲೀಸ್ ಇಲಾಖೆ ಕೂಲಂಕುಷ ತನಿಖೆ ನಡೆಸಬೇಕಾಗಿದೆ. ಕಾಂಗ್ರೆಸ್...







