ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ), ಪದವಿಪೂರ್ವ ಕಾಲೇಜು ಕನ್ನಡ ಉಪನ್ಯಾಸಕರ ಸಂಘ ಉಡುಪಿ ಜಿಲ್ಲೆ ಮತ್ತು ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಕುಂದಾಪುರ ಇವರ ಆಶ್ರಯದಲ್ಲಿ ಒಂದು ದಿನದ ಕನ್ನಡ ಕಾರ್ಯಾಗಾರ :
ಕುಂದಾಪುರ: ಮಕ್ಕಳ ಭವಿಷ್ಯ ಕಟ್ಟುವ ಮಹತ್ವದ ಜವಾಬ್ದಾರಿ ಹೊಂದಿರುವ ಉಪನ್ಯಾಸಕರು ಹೊಸತನಕ್ಕೆ ಸದಾ ತೆರೆದುಕೊಂಡಿದ್ದರೆ ಮಾತ್ರ ವಿದ್ಯಾರ್ಥಿಗಳನ್ನು ಅರಿಯಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಮಾರುತಿ ಅವರು ಹೇಳಿದರು. ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ), ಪದವಿಪೂರ್ವ ಕಾಲೇಜು ಕನ್ನಡ ಉಪನ್ಯಾಸಕರ ಸಂಘ ಉಡುಪಿ ಜಿಲ್ಲೆ ಮತ್ತು ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಕುಂದಾಪುರ ಇವರ ಆಶ್ರಯದಲ್ಲಿ ಒಂದು ದಿನದ ಕನ್ನಡ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ...







