Saturday, March 7, 2026

ಬೈಂದೂರು

ಬೈಂದೂರುಸುದ್ದಿ

ಮಳೆಯಿಂದ ಆಗಬಹುದಾದ ಅನಾಹುತ ತಪ್ಪಿಸಲು ಈಗಿಂದಲೇ ಸಜ್ಜಾಗಿ : ಸಾರ್ವಜನಿಕರ ದೂರು ನಿರ್ಲಕ್ಷ್ಯ ಮಾಡದಂತೆ ಅಧಿಕಾರಿಗಳಿಗೆ ಶಾಸಕ ಗುರುರಾಜ ಗಂಟಿಹೊಳೆ ಸೂಚನೆ- ಕಹಳೆ ನ್ಯೂಸ್

ಬೈಂದೂರು: ಮಳೆಗಾಲದಲ್ಲಿ ಸಂಭವಿಸಬಹುದಾದ ಹಾನಿ ತಡೆಯುವ ನಿಟ್ಟಿನಲ್ಲಿ ಎಲ್ಲ ಇಲಾಖೆಯ ಅಧಿಕಾರಿ, ಸಿಬ್ಬಂದಿ ಸಮನ್ವಯದಿಂದ ಕೆಲಸ ಮಾಡಬೇಕು ಮತ್ತು ಸ್ಥಳೀಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯ ನಡೆಸಬೇಕು. ಸಾರ್ವಜನಿಕರಿಂದ ಯಾವುದೇ ದೂರು ಬಂದರು ನಿಲಕ್ಷ್ಯ ಮಾಡಬಾರದು ಎಂದು ಅಧಿಕಾರಿಗಳಿಗೆ ಬೈಂದೂರು ಶಾಸಕರಾದ ಗುರುರಾಜ ಗಂಟಿಹೊಳೆ ಸೂಚನೆ ನೀಡಿದರು. ಬೈಂದೂರು ತಾಲೂಕು ಪಂಚಾಯತಿ ಕಚೇರಿಯಲ್ಲಿ ಮಳೆಗಾಲ ಪೂರ್ವ ಸಿದ್ಧತೆ ಹಾಗೂ ಮಳೆಗಾಲದ ಪ್ರಾಕೃತಿಕ ವಿಕೋಪ ಮುಂಜಾಗೃತ ಕ್ರಮಗಳಿಗೆ ಸಂಬಂಧಿಸಿದಂತೆ ಸಭೆ ನಡೆಸಿ ಅಧಿಕಾರಿಗಳಿಗೆ...
ಬೈಂದೂರುಸುದ್ದಿ

ಟ್ರಾನ್ಸ್‌ಫಾರ್ಮರ್ ರಿಪೇರಿ ವೇಳೆ ವಿದ್ಯುತ್ ಶಾಕ್ ನಿಂದ ಲೈನ್‌ಮ್ಯಾನ್ ಸಾವು–ಕಹಳೆ ನ್ಯೂಸ್

ಬೈಂದೂರು : ಟ್ರಾನ್ಸ್‌ಫಾರ್ಮರ್ ರಿಪೇರಿ ಮಾಡುವ ಸಂದರ್ಭ ವಿದ್ಯುತ್ ಶಾಕ್ ತಗುಲಿ ಲೈನ್‌ಮ್ಯಾನ್ ಮೃತಪಟ್ಟ ಘಟನೆ ಬೈಂದೂರಿನಲ್ಲಿ ಸಂಭವಿಸಿದೆ.ಇಂದು ಮದ್ಯಾಹ್ನ ತಗ್ಗರ್ಸೆ ಗ್ರಾಮದ ಹೆಗ್ಗೇರಿಯಲ್ಲಿ ಟ್ರಾನ್ಸ್‌ಫಾರ್ಮರ್ ಬಳಿ ವಿದ್ಯುತ್ ಸಂಪರ್ಕ ರಿಪೇರಿ ಮಾಡುವ ವೇಳೆ ಈ ದುರ್ಘಟನೆ ನಡೆದಿದೆ.ಸಲೀಂ (38) ಮೃತಪಟ್ಟ ದುರ್ದೈವಿ. ಇವರು ಮೂಲತಃ ಉತ್ತರ ಕರ್ನಾಟಕದ ಮುಂಡಗೋಡು ನಿವಾಸಿಯಾಗಿದ್ದು ಬೈಂದೂರು ಮೆಸ್ಕಾಂನಲ್ಲಿ ಕಳೆದ ಎಂಟು ವರ್ಷದಿಂದ ಸೇವೆ ಸಲ್ಲಿಸುತ್ತಿದ್ದಾರೆ.ವಿವಾಹಿತರಾಗಿರುವ ಇವರು ಎರಡು ತಿಂಗಳ ಮಗು ಹೊಂದಿದ್ದಾರೆ.ಬೈಂದೂರು ಪರಿಸರದ...
ಬೈಂದೂರುಸುದ್ದಿ

ಬೈಂದೂರು ಶಾಸಕ ಗುರುರಾಜ ಗಂಟಿಹೊಳೆಯವರ ನೇತೃತ್ವದಲ್ಲಿ ದಾನಿಗಳ ನೆರವಿನಿಂದ ನಿರ್ಮಿಸಿದ ವಿದ್ಯಾಪೋಷಕ್ ಮನೆ ಹಸ್ತಾಂತರ – ಕಹಳೆ ನ್ಯೂಸ್

ಬೈಂದೂರು: ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್ ನ, ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿನಿ ಕುಂದಾಪುರ ತಾಲೂಕಿನ ಹೆಮ್ಮಾಡಿಯ ಕಟ್ಟುವಿನಲ್ಲಿ ಸಿಂಚನಾಳಿಗೆ ಬೈಂದೂರು ಶಾಸಕರಾದ ಗುರುರಾಜ ಗಂಟಿಹೊಳೆಯವರ ನೇತೃತ್ವದಲ್ಲಿ ದಾನಿಗಳ ನೆರವಿನಿಂದ ನಿರ್ಮಿಸಿದ ನೂತನ ಮನೆ ‘ಸರಸ್ವತೀ ನಿಲಯ’ ಮೇ 30 ರಂದು ಉದ್ಘಾಟನೆಗೊಂಡಿತು. ಕೃಷ್ಣಪ್ರಸಾದ್ ಅಡ್ಯಂತಾಯರ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಶಾಸಕ ಗುರುರಾಜ ಗಂಟಿಹೊಳೆಯವರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಯಕ್ಷಗಾನ ಕಲಾರಂಗ ಮಾಡುತ್ತಿರುವ ಸಮಾಜಪರ ಕೆಲಸಗಳು ಅಗಾಧವಾದುದು. ಅವರು ವಿದ್ಯಾಪೋಷಕ್ ಗೆ ಹಾಗೂ...
ದಕ್ಷಿಣ ಕನ್ನಡಬೈಂದೂರುರಾಜಕೀಯರಾಜ್ಯಸುದ್ದಿ

ಬೈಂದೂರು ಮಂಡಲ ಬಿಜೆಪಿ ಕಚೇರಿಯಲ್ಲಿ ವಿಧಾನಪರಿಷತ್ ಚುನಾವಣೆ ಅಭ್ಯರ್ಥಿಗಳ ಸಭೆ-ಕಹಳೆ ನ್ಯೂಸ್

ಬೈಂದೂರು: ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬAಧಿಸಿದAತೆ ಗುರುವಾರ ಬೈಂದೂರು ಮಂಡಲ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರ ಮತ್ತು ಪ್ರಮುಖರ ಸಭೆ ನಡೆಯಿತು. ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಮತ್ತು ಎನ್.ಡಿ.ಎ ಅಭ್ಯರ್ಥಿ ಎಲ್.ಎಸ್. ಭೋಜೇಗೌಡ ಅವರು ಭಾಗವಹಿಸಿ ಚುನಾವಣೆಯ ಮಾಹಿತಿ ನೀಡಿದರು. ಡಾ. ಧನಂಜಯ ಸರ್ಜಿಯವರು ಮಾತನಾಡಿ, ರಾಜ್ಯದಲ್ಲೇ ಅತಿ ಹೆಚ್ಚು ಪದವೀಧರರನ್ನು ನೀಡುತ್ತಿರುವ ಉಡುಪಿ ಜಿಲ್ಲೆ ಶೈಕ್ಷಣಿಕ ಹಬ್ ಆಗಿ ಬೆಳೆದಿದೆ....
ಬೈಂದೂರುಸುದ್ದಿ

ದೇಶ ರಕ್ಷಣೆಗಾಗಿ ಬಿಜೆಪಿ ಬೆಂಬಲಿಸಿ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರಿನಲ್ಲಿ ಕೋಟ ಬಿರುಸಿನ ಪ್ರಚಾರ : ಒಂದು ಲಕ್ಷ ಲೀಡ್ ನೀಡುವ ಸಂಕಲ್ಪ ಸಾಕಾರಕ್ಕೆ ಕೋಟ ಶ್ರೀನಿವಾಸ ಪೂಜಾರಿ ಕರೆ–ಕಹಳೆ ನ್ಯೂಸ್

ಬೈಂದೂರು: ಭಾರತದ ಸಮಗ್ರ ಭದ್ರತೆ, ಆರ್ಥಿಕ ಸಬಲೀಕರಣ, ಭಯೋತ್ಪಾದನೆ ನಿರ್ಮೂಲನೆಗಾಗಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಬಿಜೆಪಿ ಅಭ್ಯರ್ಥಿ ಬಿ. ವೈ. ರಾಘವೇಂದ್ರ ಅವರನ್ನು ಬಹುಮತದಿಂದ ಗೆಲ್ಲಿಸಿ, ರಾಷ್ಟ್ರ ಭಕ್ತ ನರೇಂದ್ರ ಮೋದಿಯವರನ್ನು ದೇಶದ ಪ್ರಧಾನಿಯನ್ನಾಗಿ ಮಾಡಿ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿಯವರು ಕರೆ ನೀಡಿದರು. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೆರ್ಗಾಲು, ಬಿಜೂರು, ಶಿರೂರು, ಏಳಜಿತ್ ಮುಂತಾದ...
ಉಡುಪಿಕುಂದಾಪುರಬೈಂದೂರುಸುದ್ದಿ

ತ್ರಾಸಿ, ಗಂಗೊಳ್ಳಿ, ಗುಜ್ಜಾಡಿ ಪರಿಸರದಲ್ಲಿ ಶಾಸಕರಾದ ಕಿರಣ್ ಕೊಡ್ಗಿ ಮತಬೇಟಿ : ಒಂದು ಲಕ್ಷ ಲೀಡ್ ಕೊಡಿಸಲು ಕಾರ್ಯಕರ್ತರಿಗೆ ಶಾಸಕರಿಂದ ಪ್ರೇರಣೆ–ಕಹಳೆ ನ್ಯೂಸ್

ತ್ರಾಸಿ: ಕುಂದಾಪುರದ ಶಾಸಕರಾದ ಕಿರಣ್ ಕೊಡ್ಗಿ ಅವರು ಬೈಂದೂರು ವಿಧಾನಸಭಾ ಕ್ಷೇತ್ರದ ತ್ರಾಸಿ, ಗಂಗೊಳ್ಳಿ ಪರಿಸರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರ ಪರ ಪ್ರಚಾರ ನಡೆಸಿದರು. ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಿಂದಲೇ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರಿಗೆ ಒಂದು ಲಕ್ಷಕ್ಕೂ ಅಧಿಕ ಲೀಡ್ ನೀಡುವ ಸಂಕಲ್ಪವನ್ನು ಈಗಾಗಲೇ ಶಾಸಕರಾದ ಗುರುರಾಜ ಗಂಟಿಹೊಳೆಯವರು ಮಾಡಿದ್ದಾರೆ. ಅದನ್ನು ಈಡೇರಿಸುವ ನಿಟ್ಟಿನಲ್ಲಿ ನಾವೆಲ್ಲರೂ ಒಟ್ಟಾಗಿ ಈ ಚುನಾವಣೆ ಯಜ್ಞದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು...
ಉಡುಪಿಬೈಂದೂರುಸುದ್ದಿ

ಮಂಗಳೂರು ಶಾಸಕ ವೇದವ್ಯಾಸ ಕಾಮತ್ ಅವರಿಂದ ಬಿರುಸಿನ ಪ್ರಚಾರ : ಕೊಂಕಣಿ ಸಮುದಾಯ ಬಾಂಧವರೊಂದಿಗೆ ಸಭೆ, ಬಿಜೆಪಿಗೆ ಮತ ಹಾಕಲು ಮನವಿ–ಕಹಳೆ ನ್ಯೂಸ್

ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಕೊಂಕಣಿ ಸಮುದಾಯದ ದೇವಸ್ಥಾನಗಳಿಗೆ ಸೋಮವಾರ ಮಂಗಳೂರಿನ ಶಾಸಕರಾದ ವೇದವ್ಯಾಸ ಕಾಮತ್ ಅವರು ಬೈಂದೂರಿನ ಶಾಸಕರಾದ ಗುರುರಾಜ್ ಗಂಟಿಹೊಳೆಯವರೊಂದಿಗೆ ಭೇಟಿ ನೀಡಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರ ಪರ ಪ್ರಚಾರ ನಡೆಸಿದರು. ಮೊದಲಿಗೆ ಶಿರೂರಿನಲ್ಲಿರುವ ಶ್ರೀ ಪೇಟೆ ವೆಂಕಟರಮಣ ದೇವಸ್ಥಾನದಲ್ಲಿ ಪ್ರಮುಖರ ಸಭೆ ನಡೆಸಿ, ನಮ್ಮ ಸಮುದಾಯವು ಸದಾ ರಾಷ್ಟ್ರವಾದಿ ಚಿಂತನೆಯನ್ನು ಬೆಂಬಲಿಸಿಕೊಂಡು ಬಂದಿದೆ. ಎಲ್ಲ ಸಂದರ್ಭದಲ್ಲಿ ಬಿಜೆಪಿ ಪರವಾಗಿಯೇ ನಿಂತಿದೆ. ಪ್ರಧಾನಿ ನರೇಂದ್ರ...
ಉಡುಪಿಬೈಂದೂರುಸುದ್ದಿ

60 ವರ್ಷ ಆಡಳಿತ ನಡೆಸಿ ಕಾಂಗ್ರೆಸ್ ನೀಡಿದ ಖಾಲಿ ಚೊಂಬನ್ನು 10 ವರ್ಷದಲ್ಲಿ ಅಕ್ಷಯ ಪಾತ್ರೆ ಮಾಡಿದ ಮೋದಿ : ಮೋದಿಯವರು ಪ್ರಧಾನಿಯಾದ ಅನಂತರ ಬಡವರ ಕಲ್ಯಾಣವಾಗಿದೆ: ಬಿ.ವೈ. ರಾಘವೇಂದ್ರ – ಕಹಳೆ ನ್ಯೂಸ್

ಬೈಂದೂರು: 60 ವರ್ಷ ಗರೀಬಿ ಹಠಾವೋ ಎಂದರವರು ತಮ್ಮ ಹೆಂಡತಿ ಮಕ್ಕಳ ಬಡತನ ದೂರ ಮಾಡಿದರೇ ಹೊರತು ಬಡವರ ಬಡತನ ದೂರ ಮಾಡಿಲ್ಲ. ಬಡವರ ಬಡತನ ದೂರ ಮಾಡಲು ಪ್ರಧಾನಿಯಾಗಿ ನರೇಂದ್ರ ಮೋದಿಯವರೇ ಬರಬೇಕಾಯಿತು. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ ಯ ಮೂಲಕ ಕೇಂದ್ರ ಸರ್ಕಾರ ಬಡವರಿಗೆ ಉಚಿತ ಅಕ್ಕಿ ನೀಡುತ್ತಿದೆ ಎಂದು ಬಿಜೆಪಿ ಅಭ್ಯರ್ಥಿಯೂ ಆದ ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ತಗ್ಗರ್ಸೆ ಗುಡ್ಡಿಯಂಗಡಿಯಲ್ಲಿ ನಡೆದ...
1 6 7 8 9 10
Page 8 of 10