ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ ನಿಲ್ಲಿಸಿದ್ದ ಬೈಕ್, 181 ಗ್ರಾಂ ಚೆನ್ನ, ಹತ್ತೂವರೆ ಲಕ್ಷ ನಗದು ಕಳವು – ಕಹಳೆ ನ್ಯೂಸ್
ಉಳ್ಳಾಲ : ಅರಣ್ಯಾಧಿಕಾರಿಯೋರ್ವರು ನೆಲೆಸಿದ್ದ ಬಾಡಿಗೆ ಮನೆಗೆ ಕನ್ನ ಹಾಕಿದ ಕಳ್ಳರು ಅಂಗಳದಲ್ಲಿ ನಿಲ್ಲಿಸಿದ್ದ ಬೈಕ್ ಸೇರಿದಂತೆ ಹತ್ತೂವರೆ ಲಕ್ಷ ರೂಪಾಯಿ ನಗದು, 181 ಗ್ರಾಂ ಚಿನ್ನ ಮತ್ತು ಬೆಳ್ಳಿಯನ್ನು ದೋಚಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಅಂಬಿಕಾರೋಡ್, ಕಾಪಿಕಾಡು ಎಂಬಲ್ಲಿ ನಡೆದಿದೆ. ಕೋಟೆಕಾರು ಉಪ ವಲಯ ಅರಣ್ಯಾಧಿಕಾರಿ ಮೆಹಬೂಬ್ ಸಾಬ್ ಗುಡಿಹೊಲ ಅವರು ವಾಸವಿದ್ದ ಅಂಬಿಕಾರೋಡ್ ಕಾಪಿಕಾಡಿನ ಬಾಡಿಗೆ ಮನೆಯಲ್ಲಿ ಕಳ್ಳತನ ನಡೆದಿದ್ದು ಘಟನೆ ಇಂದು ಬೆಳಗ್ಗೆ ಬೆಳಕಿಗೆ...







