ಮಂಗಳೂರು ನಗರ ದಕ್ಷಿಣ ಬಿಜೆಪಿ ನೇತೃತ್ವದಲ್ಲಿ ಹಂಪನಕಟ್ಟೆಯಿಂದ ಕ್ಲಾಕ್ ಟವರ್ ವರೆಗೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ – ಕಹಳೆ ನ್ಯೂಸ್
ಮಂಗಳೂರು : "ಕಾಂಗ್ರೆಸ್ ಡೇಂಜರ್", "ಪಿಕ್ ಪಾಕೆಟ್ ಕಾಂಗ್ರೆಸ್", "ಕೊಟ್ಟಿದ್ದಕ್ಕಿಂತ ದೋಚಿದ್ದೇ ಜಾಸ್ತಿ" ಇತ್ಯಾದಿ ಬರಹಗಳಿರುವ ಭಿತ್ತಿ ಪತ್ರಗಳನ್ನು ಹಿಡಿದುಕೊಂಡು ಮಂಗಳೂರು ನಗರ ದಕ್ಷಿಣ ಬಿಜೆಪಿ ನೇತೃತ್ವದಲ್ಲಿ ನಗರದ ಹಂಪನಕಟ್ಟೆಯಿಂದ ಕ್ಲಾಕ್ ಟವರ್ ವರೆಗೆ ಮಾನವ ಸರಪಳಿಯನ್ನು ರಚಿಸಿ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳ ವಿರುದ್ಧ ಭಿತ್ತಿ ಪತ್ರಗಳನ್ನು ಹಿಡಿದುಕೊಂಡು ಘೋಷಣೆ ಕೂಗುತ್ತಾ ವಿನೂತನ ರೀತಿಯಲ್ಲಿ ಪ್ರತಿಭಟನೆಯನ್ನು ನಡೆಸಲಾಯಿತು. ಪ್ರತಿಭಟನೆಯಲ್ಲಿ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್ ಅವರು, ಬಹಿರಂಗ ಪ್ರಚಾರಕ್ಕೆ ಇಂದು...







