Tuesday, June 9, 2026

ಮಂಗಳೂರು

ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು : ಧರೆ ಕುಸಿದು ಮಣ್ಣಿನಡಿ ಸಿಲುಕಿದ ವ್ಯಕ್ತಿ ನಿಧನ -ಕಹಳೆ ನ್ಯೂಸ್

ಮಂಗಳೂರು : ಕುಂಟಿಕಾನ ಬಳಿಯ ಲೋಹಿತ್ ನಗರದಲ್ಲಿ ಧರೆ ಕುಸಿದು ಮಣ್ಣಿನಡಿ ಸಿಲುಕಿ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಗುರುವಾರ (ಮೇ 21) ನಡೆದಿದೆ. ಉರ್ವ ಅಶೋಕನಗರ ನಿವಾಸಿ ಆಂಟನಿ ಮಸ್ಕರೇನ್ಹಸ್ (65) ಮೃತರು. ಸ್ಥಳಕ್ಕೆ ಧಾವಿಸಿದ ಕದ್ರಿ ಅಗ್ನಿಶಾಮಕ ಠಾಣೆ ಸಿಬಂದಿ ಕಾರ್ಯಾಚರಣೆ ನಡೆಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರಾದರೂ ಅವರನ್ನು ಉಳಿಸಲಾಗಲಿಲ್ಲ. ಗುರುವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಮನೆಯೊಂದರ ಹಿಂಭಾಗದಲ್ಲಿ ಅವರಣ ಗೋಡೆ ನಿರ್ಮಾಣಕ್ಕೆ ಅಳತೆ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಈಜಲು ಹೋಗಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನದಿಯಲ್ಲಿ ಮುಳುಗಿ ಸಾವು -ಕಹಳೆ ನ್ಯೂಸ್

ಮಂಗಳೂರು: ನದಿಯಲ್ಲಿ ಈಜಲು ಹೋಗಿ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿಯ ಪಜಿರಡ್ಕದ ಬಳಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಬೆಳಗಾವಿ ಜಿಲ್ಲೆಯ ಗೋಕಾಕ್ ನಿವಾಸಿ ಶ್ರೀಪೂರ್ಣ (21) ಎಂದು ಗುರುತಿಸಲಾಗಿದೆ. ಉಜಿರೆಯ ಖಾಸಗಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇವರು ಅಂತಿಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿ ವ್ಯಾಸಂಗ ಮಾಡುತ್ತಿದ್ದರು. ಏಳು ಜನ ಸ್ನೇಹಿತರ ತಂಡ ನೇತ್ರಾವತಿ ನದಿಗೆ ಮಂಗಳವಾರ ಸಂಜೆ 4 ಗಂಟೆ ಸುಮಾರಿಗೆ ಈಜಾಡಲು ತೆರಳಿತ್ತು. ಈ ವೇಳೆ ಯುವಕ ನೀರಿನಲ್ಲಿ ಮುಳುಗಿ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ – ಕಹಳೆ ನ್ಯೂಸ್

ಮಂಗಳೂರು : ಕರಾವಳಿಯಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆಯಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿ ಕರ್ನಾಟಕದ ಹೆಚ್ಚಿನ ಸ್ಥಳಗಳಲ್ಲಿ ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಪ್ರಮುಖವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿಯಲ್ಲಿ 7 ಸೆಂಟಿ ಮೀಟರ್ ಮಳೆಯಾಗಿದೆ. ಉಳಿದಂತೆ ಹಾವೇರಿಯಲ್ಲಿ 5, ಮೂಡಬಿದ್ರೆ, ಶಿವಮೊಗ್ಗ, ಹುಂಚದಕಟ್ಟೆ, ಕೊಟ್ಟಿಗೆಹಾರದಲ್ಲಿ ತಲಾ 4, ಉಪ್ಪಿನಂಗಡಿ, ಪುತ್ತೂರು, ಸುಳ್ಯ,...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಕುಸಿದ ಲಿಫ್ಟ್‌ : ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವು -ಕಹಳೆ ನ್ಯೂಸ್

ಮಂಗಳೂರು: ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಲಿಫ್ಟ್‌ ಕುಸಿದು ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವನ್ನಪ್ಪಿರುವ ಘಟನೆ ಮಂಗಳೂರಿನ  ಕುಂಟಿಕಾನ ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ಬೆಳಲು ನಿವಾಸಿ ನೌಫಾಲ್ (28) ಸಾವನ್ನಪ್ಪಿದ್ದಾರೆ. ಇನ್‌ಸ್ಟಾ ಮಾರ್ಟ್‌ ಸಪ್ಲೈ ಪಾಯಿಂಟ್‌ನಲ್ಲಿ ದಿನಸಿ ವಸ್ತುಗಳನ್ನು ಲಿಫ್ಟ್‌ನಲ್ಲಿ ಸಾಗಿಸುತ್ತಿದ್ದರು. ಈ ವೇಳೆ ದುರ್ಘಟನೆಯಾಗಿದೆ. ವಸ್ತುಗಳನ್ನು ಸಾಗಿಸುತ್ತಿದ್ದ ವೇಳೆ ಏಕಾಏಕಿ ಲಿಫ್ಟ್ ಕುಸಿದಿದೆ. ಲಿಫ್ಟ್‌ನಲ್ಲಿ ಸಿಲುಕಿ ನೌಫಾಲ್ ಸಾವಿಗೀಡಾಗಿದ್ದಾರೆ. ದುರಂತದ ದೃಶ್ಯ ಸಿಸಿ ಕ್ಯಾಮರಾದಲ್ಲಿ‌ ಸೆರೆಯಾಗಿದೆ. ಕದ್ರಿ ಪೊಲೀಸರು ಸ್ಥಳಕ್ಕೆ ತೆರಳಿ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಕಾರಿನಲ್ಲಿ ಜಾನುವಾರುಗಳ ಹಿಂಸಾತ್ಮಕ ಸಾಗಾಟ; ಸಿನಿಮಾ ಶೈಲಿಯಲ್ಲಿ ಬೆನ್ನಟ್ಟಿ ಇಬ್ಬರ ಬಂಧನ -ಕಹಳೆ ನ್ಯೂಸ್

ಮಂಗಳೂರು : ಐಷಾರಾಮಿ ಕಾರಿನಲ್ಲಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮೂಡಬಿದ್ರೆ ಪೊಲೀಸರು ಸಿನಿಮಾ ಶೈಲಿಯಲ್ಲಿ ಬೆನ್ನಟ್ಟಿ ಬಂಧಿಸಿದ್ದಾರೆ. ಪಡುಮಾರ್ನಾಡು ಗ್ರಾಮದ ಗುಂಡುಕಲ್ಲು ಕ್ರಾಸ್ ಬಳಿ ಈ ಕಾರ್ಯಾಚರಣೆ ನಡೆದಿದೆ. ಮೂಡಬಿದ್ರೆ ಹಂಡೇಲು ನಿವಾಸಿ ಮಹಮ್ಮದ್ ಆರಿಫ್ ಮತ್ತು ಗಂಟಾಲಕಟ್ಟೆಯ ಇಮ್ರಾನ್ ಅಲಿಯಾಸ್ ಇಬ್ರಾಹಿಂ ಬಂಧಿತ ಆರೋಪಿಗಳು. ಇವರಿಂದ ಮಾರುತಿ ಬ್ರೀಜಾ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಪೊಲೀಸರು ರೌಂಡ್ಸ್‌ನಲ್ಲಿದ್ದಾಗ ಖಚಿತ ಮಾಹಿತಿ ಮೇರೆಗೆ ವಾಹನ ತಪಾಸಣೆ ನಡೆಸುತ್ತಿದ್ದರು. ಈ ವೇಳೆ...
ಜಿಲ್ಲೆದಕ್ಷಿಣ ಕನ್ನಡಮಂಗಳೂರು

ಕಾಂಗ್ರೆಸ್ ನಿಂದ ಶೈಕ್ಷಣಿಕ ಕ್ಷೇತ್ರದಲ್ಲೂ ಒಡೆದು ಆಳುವ ನೀತಿ : ಶಾಸಕ ಕಾಮತ್ -ಕಹಳೆ ನ್ಯೂಸ್

ಮಂಗಳೂರು : ಶೈಕ್ಷಣಿಕ ಕೇಂದ್ರಗಳಲ್ಲಿ ಸಮಾನತೆ ಹಾಗೂ ಮಕ್ಕಳಲ್ಲಿ ಏಕತೆ ತರುವ ಉದ್ದೇಶದಿಂದ ಹಿಂದಿನ ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ಶಿಸ್ತುಬದ್ಧ ಸಮವಸ್ತ್ರ ನಿಯಮವನ್ನು ರಾಜ್ಯ ಕಾಂಗ್ರೆಸ್ ಸರ್ಕಾರವು ಹಿಂಪಡೆಯುವ ಮೂಲಕ ಶಾಲಾ-ಕಾಲೇಜುಗಳ ಶೈಕ್ಷಣಿಕ ವಾತಾವರಣವನ್ನು ಹಾಳುಗೆಡವಲು ಮುಂದಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ಆಕ್ರೋಶ ವ್ಯಕ್ತಪಡಿಸಿದರು. ಸಮವಸ್ತ್ರದ ಮೂಲ ಉದ್ದೇಶವೇ ವಿದ್ಯಾರ್ಥಿಗಳಲ್ಲಿ ಜಾತಿ-ಮತ-ಭೇದ ಮರೆಸಿ ಸಮಾನತೆಯ ಭಾವ ಮೂಡಿಸುವುದು. ಆದರೆ ಓಲೈಕೆ ರಾಜಕಾರಣಕ್ಕಾಗಿ ರಾಜ್ಯ ಸರ್ಕಾರವೇ, ಧರ್ಮದ ಆಧಾರದ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ್ಕೆ ಆಕ್ಷೇಪ; ಭದ್ರತಾ ಸಿಬ್ಬಂದಿಯನ್ನ ತಳ್ಳಿ ಸ್ಪೀಕರ್ ಖಾದರ್ ಗೆ ಫೇರಾವ್, ಹನ್ನೊಂದು ಮಂದಿ ವಿರುದ್ಧ ಪ್ರಕರಣ ದಾಖಲು -ಕಹಳೆ ನ್ಯೂಸ್

ಮಂಗಳೂರು : ಕುತ್ತಾರು ಜಂಕ್ಷನ್ ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣದ ವಿಚಾರದಲ್ಲಿ ಭದ್ರತಾ ಸಿಬ್ಬಂದಿಯನ್ನ ತಳ್ಳಿ ಸ್ಪೀಕರ್ ಯು.ಟಿ.ಖಾದ‌ರ್ ಅವರಿಗೆ ಫೇರಾವ್‌ ಹಾಕಿ ತರಾಟೆಗೈದ ಮದನಿ ನಗರದ ಜುನೈದ್ ಮತ್ತು ಆತನ ಹತ್ತು ಜನ ಸಹಚರರ ವಿರುದ್ಧ ಉಳ್ಳಾಲ ಠಾಣೆಯಲ್ಲಿ ಎಫ್‌ ಐಆ‌ರ್ ದಾಖಲಾಗಿದೆ. ಸ್ಪೀಕರ್ ಯು.ಟಿ.ಖಾದರ್ ಅವರ ಅಂಗ ರಕ್ಷಕ ಸಿಎಸ್ ಆರ್ ಘಟಕದ ಸಿಬ್ಬಂದಿ ಮೊಹಮ್ಮದ್ ಯಾಸೀನ್ ಇನಾಮದಾರ ನೀಡಿರುವ ದೂರಿನ ಆಧಾರದಡಿ ಉಳ್ಳಾಲ ಠಾಣೆಯಲ್ಲಿ ಹನ್ನೊಂದು...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಲೋಕಸಭಾ ಸದಸ್ಯರ ಭೇಟಿ. -ಕಹಳೆ ನ್ಯೂಸ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಲೋಕಸಭಾ ಸದಸ್ಯರಾಗಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರನ್ನು ಸೇವಾಭಾರತಿ ತಂಡ ಮೇ 12 ರಂದು ಭೇಟಿ ನೀಡಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡದ ಕುರಿತು ಪ್ರಸ್ತಾಪಿಸಿ ಸಹಕರಿಸುವಂತೆ ಮನವಿ ಮಾಡಲಾಯಿತು. ಈ ಸಂದರ್ಭದಲ್ಲಿ ಸೇವಾಭಾರತಿ ಅಧ್ಯಕ್ಷ ಹಾಗೂ ಸೇವಾಧಾಮದ ಸಂಸ್ಥಾಪಕರಾದ ಶ್ರೀ ಕೆ ವಿನಾಯಕ ರಾವ್, ಸೇವಾಭಾರತಿಯ ಖಜಾಂಚಿ ಶ್ರೀ ಜೈ ರಾಜ್ ಸಾಲ್ಯಾನ್ ಕಾನರ್ಪ,...
1 2 3 4 111
Page 2 of 111