ಮಂಗಳೂರಿನ ಪೊಲೀಸ್ ಕಮಿಷನರ್ ಹಾಗು ಎಸ್ಪಿ ವರ್ಗಾವಣೆ… ನೂತನ ಕಮಿಷನರ್ ಆಗಿ ಸುಧೀರ್ ಕುಮಾರ್ ರೆಡ್ಡಿ ಹಾಗು ಎಸ್ಪಿ ಯಾಗಿ ಅರುಣ್ ಕುಮಾರ್ ನೇಮಕ -ಕಹಳೆ ನ್ಯೂಸ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಿಂಗಳ ಒಳಗೆ ಎರಡು ಹತ್ಯೆಗಳು ನಡೆದು ಕೋಮು ಸೂಕ್ಷ್ಮ ವಾತಾವಾರಣ ನಿರ್ಮಾಣವಾಗಿರುವ ಬೆನ್ನಲ್ಲೇ ರಾಜ್ಯ ಸರಕಾರ ಕೆಲವು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದೆ. ಉಡುಪಿ ಪೊಲೀಸ್ ವರಿಷ್ಠಾಧಿಕಾರಿಯಾಗಿರುವ ಡಾ. ಅರುಣ್ ಕೆ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಎಸ್ ಪಿಯಾಗಿ ವರ್ಗಾವಣೆ ಮಾಡಲಾಗಿದೆ. ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್‌ವಾಲ್ ಹಾಗೂ ದಕ್ಷಿಣ ಕನ್ನಡ ಎಸ್ ಪಿ ಯತೀಶ್ ಅವರನ್ನು ವರ್ಗಾವಣೆ ಮಾಡಲಾಗಿದೆ....







