ಎಪ್ರಿಲ್‌ನಿಂದಲೇ ಕಲ್ಲಡ್ಕ ಫ್ಲೈಓವರ್ ಸಂಚಾರಕ್ಕೆ ಮುಕ್ತ -ಕಹಳೆ ನ್ಯೂಸ್
ಮಂಗಳೂರು: ಅಡ್ಡಹೊಳೆ- ಬಿ.ಸಿ.ರೋಡ್ ನಡುವಿನ ಚತುಷ್ಪಥ ಹೆದ್ದಾರಿ ಕಾಮಗಾರಿಯ ಪ್ರಮುಖ ಭಾಗಗಳಾದ ಕಲ್ಲಡ್ಕ ಫ್ಲೈಓವರ್, ಮಾಣಿ ಓವರ್‌ಪಾಸ್, ಮೆಲ್ಕಾರ್ ಓವರ್‌ಪಾಸ್, ಪುತ್ತೂರು ಕ್ರಾಸ್ ಓವರ್ ಇತ್ಯಾದಿ ಬಹುತೇಕ ಪೂರ್ಣವಾಗುತ್ತಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಶನಿವಾರ ಸಂಸದ ಕ್ಯಾ| ಬ್ರಿಜೇಶ್ ಚೌಟರ ಅಧ್ಯಕ್ಷತೆ ಯಲ್ಲಿ ಜರಗಿದ ದ.ಕ. ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ(ದಿಶಾ) ಸಭೆಯಲ್ಲಿ ಎನ್‌ಎಚ್‌ಎಐ ಯೋಜನಾ ನಿರ್ದೇಶಕ...







