ಜಾಗತಿಕ ಬಂಡವಾಳ ಹೂಡಿಕೆದಾರರ ಸಮ್ಮೇಳನದಲ್ಲಿ ದ.ಕ.ಕ್ಕೆ ಹೆಚ್ಚಿನ ಹೂಡಿಕೆ ಆಕರ್ಷಿಸಲು ಸಿಎಂ ಸಿದ್ದರಾಮಯ್ಯನವರಿಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ-ಕಹಳೆ ನ್ಯೂಸ್
ಮಂಗಳೂರು: ಬೆಂಗಳೂರಿನಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮ್ಮೇಳನ (ಜಿಐಎಮ್- investment karnataka 2025) ಆರಂಭಗೊಂಡಿದ್ದು, ಈ ಬಾರಿ ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಗೆ ಹೆಚ್ಚಿನ ಬಂಡವಾಳ ಹೂಡಿಕೆಯನ್ನು ಆಕರ್ಷಿಸುವುದಕ್ಕೆ ಸೂಕ್ತ ಕ್ರಮ ಕೈಗೊಳ್ಳುವಂತೆ ಕೋರಿ ಸಂಸದ ಕ್ಯಾ. ಬ್ರಿಜೇಶ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದಾರೆ. ಕರ್ನಾಟಕದ ಆರ್ಥಿಕ ಸುಸ್ಥಿರ ಬೆಳವಣಿಗೆಗೆ ಪೂರಕವಾದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶವನ್ನು ಯಶಸ್ವಿಯಾಗಿ ಆಯೋಜಿಸುತ್ತಿರುವುದಕ್ಕೆ ಮುಖ್ಯಮಂತ್ರಿಗಳನ್ನು ಅಭಿನಂದಿಸಿರುವ ಕ್ಯಾ. ಚೌಟ, ಹೆಚ್ಚಿನ...







