ಮನೆಯಲ್ಲೇ ವಿದ್ಯುತ್ ಉತ್ಪಾದಿಸಿ ಸ್ವಾಭಿಮಾನದಿಂದ ಬಳಸಿ: ಪ್ರಲ್ಹಾದ ಜೋಶಿ-ಕಹಳೆ ನ್ಯೂಸ್
ಮಂಗಳೂರು: 'ಸರ್ಕಾರಕ್ಕೆ ಕೈಯೊಡ್ಡುವ ಬದಲು ಮನೆಯಲ್ಲೇ ವಿದ್ಯುತ್ ಉತ್ಪಾದಿಸಿ ಸ್ವಾಭಿಮಾನದಿಂದ ಬಳಸಿ' ಎಂದು ಕೇಂದ್ರದ ಹೊಸ ಮತ್ತು ನವೀಕರಿಸಬಲ್ಲ ಇಂಧನ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾಡಳಿತ, ದ.ಕ. ಜಿಲ್ಲಾ ಪಂಚಾಯಿತಿ ಹಾಗೂ ಮಂಗಳೂರು ವಿದ್ಯುತ್ ಪೂರೈಕೆ ಕಂಪನಿ (ಮೆಸ್ಕಾಂ) ಆಶ್ರಯದಲ್ಲಿ ಇಲ್ಲಿ ಗುರುವಾರ ಏರ್ಪಡಿಸಿದ್ದ 'ಪ್ರಧಾನಿ ಮಂತ್ರಿ ಸೂರ್ಯ ಘರ್ ಉಚಿತ ವಿದ್ಯುತ್' ಯೋಜನೆ ಕುರಿತ ಮಾಹಿತಿ ಕಾರ್ಯಾಗಾರ ಮತ್ತು ಸಂವಾದವನ್ನು ಉದ್ಘಾಟಿಸಿ ಅವರು ಮಾತನಾಡಿದರು....






