ದಕ್ಷಿಣ ಕನ್ನಡದ ಪಿಎಂ ಆವಾಸ್ ಯೋಜನೆ ಫಲಾನುಭವಿಗಳ ಮನೆಗಳಲ್ಲಿ “ಹರ್ ಘರ್ ತಿರಂಗಾ” : ಸಂಸದ ಕ್ಯಾ. ಬ್ರಿಜೇಶ್ ಚೌಟರಿಂದ ಜಪ್ಪಿನಮೊಗರಿನಲ್ಲಿ ವಿಭಿನ್ನ ಪರಿಕಲ್ಪನೆಯ ಅಭಿಯಾನಕ್ಕೆ ಇಂದು ಚಾಲನೆ-ಕಹಳೆನ್ಯೂಸ್
ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆಯಲ್ಲಿ ಹರ್ ಘರ್ ತಿರಂಗಾ ಅಭಿಯಾನವನ್ನು ದೇಶದೆಲ್ಲೆಡೆ ಸಾರ್ಥಕಗೊಳಿಸುವಂತೆ ಪ್ರಧಾನಿ ಮೋದಿ ಅವರು ಈಗಾಗಲೇ ಕರೆ ನೀಡಿದ್ದಾರೆ. ಅದರಂತೆ ದಕ್ಷಿಣ ಕನ್ನಡ ಲೋಕಸಭಾ ವ್ಯಾಪ್ತಿಯ ಎಲ್ಲ ಪಿಎಂ ಆವಾಸ್ ಫಲಾನುಭವಿಗಳ ಯೋಜನೆ ಮನೆಗಳ ಮೇಲೂ ತ್ರಿವರ್ಣ ಧ್ವಜ ಹಾರಾಡಿಸುವ ವಿನೂತನ ಪ್ರಯತ್ನಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಮುಂದಾಗಿದ್ದಾರೆ. ಮಂಗಳೂರಿನ ಜಪ್ಪಿನಮೊಗರಿನಲ್ಲಿರುವ ಶ್ರೀಮತಿ ವಿನಯಾ ಶ್ರೀನಿವಾಸ್ ಅವರ ಮನೆ ಮೇಲೆ ಮಂಗಳವಾರ ಬೆಳಗ್ಗೆ ಹರ್ ಘರ್ ಅಭಿಯಾನದಡಿ...







