Wednesday, July 29, 2026

ಮಂಗಳೂರು

ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಅಕ್ರಮ ಕೋಳಿ ಅಂಕದ ಅಡ್ಡೆಗೆ ದಾಳಿ – 6 ಮಂದಿ ಅರೆಸ್ಟ್ -ಕಹಳೆ ನ್ಯೂಸ್

ಮಂಗಳೂರು  : ಅಕ್ರಮ ಕೋಳಿ ಅಂಕದ ಅಡ್ಡೆಗೆ ಪೊಲೀಸರು ದಾಳಿ ನಡೆಸಿದ್ದು, ಆರು ಮಂದಿ ಆರೋಪಿಗಳನ್ನು ಬಂಧಿಸಿರುವ ಘಟನೆ ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ಮೂಡುಬಿದರೆಯಲ್ಲಿ ನಡೆದಿದೆ. ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ಮೂಡುಮೂರ್ನಾಡು ಗ್ರಾಮದ ಹೊಯಿಪಾಲಬೆಟ್ಟು ಪ್ರದೇಶದಲ್ಲಿ ಮಾರ್ಚ್ 18 ರಂದು, ಜಾತ್ರೆ ಮುಗಿದ ಬಳಿಕ ಕೆಲವು ವ್ಯಕ್ತಿಗಳು ಅಕ್ರಮವಾಗಿ ಸೇರಿಕೊಂಡು ಕೋಳಿ ಅಂಕ ನಡೆಸುತ್ತಿರುವ ಬಗ್ಗೆ ಮಾಹಿತಿ ದೊರಕಿತ್ತು. ಕೋಳಿಗಳಿಗೆ ಹರಿತವಾದ ಬಾಳುಗಳನ್ನು ಕಟ್ಟಿ, ಹಿಂಸಾತ್ಮಕವಾಗಿ ಕಾದಾಡಲು...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ 7 ಮರಿಗಳ ತಾಯಿಯಾದ ಭಾರತೀಯ ತೋಳ “ಗೀತಾ” : ಭಾರತೀಯ ತೋಳಗಳ ಸಂತಾನೋತ್ಪತ್ತಿಯಲ್ಲಿ ಹೊಸ ಮೈಲಿಗಲ್ಲು! -ಕಹಳೆ ನ್ಯೂಸ್

ಮಂಗಳೂರು : ನಗರದ ಹೊರವಲಯದ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಸಂತಸದ ವಾತಾವರಣ ಮನೆಮಾಡಿದೆ. ಇಲ್ಲಿನ 'ಗೀತಾ' ಎಂಬ ಹೆಸರಿನ ಭಾರತೀಯ ತೋಳ (Indian Wolf) ಒಂದೇ ಬಾರಿಗೆ ಏಳು ಮರಿಗಳಿಗೆ ಜನ್ಮ ನೀಡುವ ಮೂಲಕ ಗಮನ ಸೆಳೆದಿದೆ. ಜನಿಸಿದ ಏಳು ಮರಿಗಳಲ್ಲಿ ನಾಲ್ಕು ಗಂಡು ಮತ್ತು ಮೂರು ಹೆಣ್ಣು ಮರಿಗಳಿವೆ. ಕಳೆದ 3 ವರ್ಷಗಳಿಂದ ಪಿಲಿಕುಳದಲ್ಲಿ ಭಾರತೀಯ ತೋಳಗಳನ್ನು ಪೋಷಿಸಲಾಗುತ್ತಿದೆ. ಇದು ಇಲ್ಲಿ ನಡೆದ ತೋಳಗಳ ಮೊದಲ ಯಶಸ್ವಿ ಸಂತಾನೋತ್ಪತ್ತಿಯಾಗಿದೆ....
ಜಿಲ್ಲೆಮಂಗಳೂರುಸುದ್ದಿ

“ದೈವಾರಾಧನಾ ಪರಂಪರೆಗೆ ಘೋರ ಅಪಚಾರ – ನೇಮದಲ್ಲಿ ಕ್ರಿಶ್ಚಿಯನ್ ವ್ಯಕ್ತಿಯಿಂದ ದೈವ ನರ್ತನ ಸೇವೆ” – ಕಹಳೆ ನ್ಯೂಸ್

ಮಂಗಳೂರು : ತುಳುನಾಡಿನ ದೈವಾರಾಧನಾ ಪರಂಪರೆಯಲ್ಲಿ ಎಂದೂ ಕೇಳರಿಯದ ಘಟನೆಯೊಂದು ಸಂಭವಿಸಿದ್ದು, ಪವಿತ್ರ ನೇಮದ ಸಂದರ್ಭದಲ್ಲಿ ಅನ್ಯಕೋಮಿನ (ಕ್ರಿಶ್ಚಿಯನ್) ವ್ಯಕ್ತಿಯನ್ನು ದೈವ ನರ್ತನ ಸೇವೆಗೆ ಬಳಿಸಿಕೊಳ್ಳುವ ಮೂಲಕ ಸನಾತನ ಕಟ್ಟುಕಟ್ಟಳೆಗಳನ್ನು ಗಾಳಿಗೆ ತೂರಲಾಗಿದೆ ಎಂದು ತುಳು ವಿದ್ವಾಂಸರು ಹಾಗೂ ಪಂಬದ ಸಮುದಾಯದ ಸಂಶೋಧಕಿ ಡಾ. ರತಿ ಗಂಭೀರ ಆರೋಪ ಮಾಡಿದ್ದಾರೆ. ಮಂಗಳೂರಿನ ಪ್ರೆನ್‌ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಈ ಕುರಿತು ಸಮಗ್ರ ಮಾಹಿತಿ ನೀಡಿದರು. ದಿನಾಂಕ 01.02.2026ರಂದು ಮಂಗಳೂರಿನ ಬೋಳೂರು...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನಿಂದ ಮಂಗಳೂರು-ಶಾರ್ಜಾ ದೈನಂದಿನ ವಿಮಾನ ಸೇವೆ ಘೋಷಣೆ; ಪರಿಷ್ಕೃತ ವೇಳಾಪಟ್ಟಿ ಪ್ರಕಟ -ಕಹಳೆ ನ್ಯೂಸ್

ಮಂಗಳೂರು : ಮಧ್ಯಪ್ರಾಚ್ಯದ ಸಂಘರ್ಷದ ಹಿನ್ನೆಲೆ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಶಾರ್ಜಾ ಮತ್ತು ದೆಹಲಿಗೆ ಹೊಸ ವಿಮಾನ ವೇಳಾಪಟ್ಟಿಯನ್ನು ಘೋಷಿಸಿದೆ. ಈ ಪರಿಷ್ಕೃತ ವೇಳಾಪಟ್ಟಿಯು ಮಾರ್ಚ್ 16 ರಿಂದ ಮಾರ್ಚ್ 28 ರವರೆಗೆ ಅನ್ವಯವಾಗಲಿದೆ. ಹೊಸ ವೇಳಾಪಟ್ಟಿಯ ಪ್ರಕಾರ, ಈ ಅವಧಿಯಲ್ಲಿ ಮಂಗಳೂರು ಮತ್ತು ಶಾರ್ಜಾ ನಡುವೆ ಪ್ರತಿದಿನ ವಿಮಾನ ಸೇವೆ ಲಭ್ಯವಿರಲಿದೆ. ಮಂಗಳೂರು - ಶಾರ್ಜಾ ವೇಳಾಪಟ್ಟಿ: IX 6057 ವಿಮಾನವು ಮಂಗಳೂರಿನಿಂದ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಧರ್ಮಾಚರಣೆಯ ಮೂಲಕ ಆಧ್ಯಾತ್ಮಿಕ ಬಲ ಹೆಚ್ಚಿಸಿ ಹಿಂದೂ ರಾಷ್ಟ್ರ ಸ್ಥಾಪನೆಗೆ ಕಟಿಬದ್ಧರಾಗಿ: ಪೂಜ್ಯ ರಮಾನಂದ ಗೌಡ ಕರೆ -ಕಹಳೆ ನ್ಯೂಸ್

ಮಂಗಳೂರು  : "ಧರ್ಮವೇ ರಾಷ್ಟ್ರದ ಅಧಿಷ್ಠಾನವಾಗಿದೆ. ಪ್ರಸ್ತುತ ಕಲಿಯುಗದಲ್ಲಿ ಮನುಷ್ಯನು ಲೌಕಿಕ ಸುಖವನ್ನೇ ಸತ್ಯವೆಂದು ನಂಬಿ 'ನಾನು ಮತ್ತು ನನ್ನದು' ಎಂಬ ಭ್ರಮೆಯಲ್ಲಿದ್ದಾನೆ. ಈ ಭ್ರಮೆಯಿಂದ ಹೊರಬಂದು ಧರ್ಮದ ಜ್ಞಾನವನ್ನು ಪಡೆದು, ಸಾಧನೆಯ ಮೂಲಕ ಆಧ್ಯಾತ್ಮಿಕ ಬಲವನ್ನು ಹೆಚ್ಚಿಸಿಕೊಂಡರೆ ಮಾತ್ರ ಹಿಂದೂ ರಾಷ್ಟ್ರದ ಸ್ಥಾಪನೆ ಸಾಧ್ಯ" ಎಂದು ಸನಾತನ ಸಂಸ್ಥೆಯ ಧರ್ಮಪ್ರಚಾರಕರಾದ ಪೂಜ್ಯ ರಮಾನಂದ ಗೌಡ ಅವರು ಮಾರ್ಗದರ್ಶನ ಮಾಡಿದರು. ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಮಂಗಳೂರಿನ ಕುದ್ರೋಳಿ ಶ್ರೀ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ನಾಪತ್ತೆಯಾದ ಕೊಣಾಜೆ ನಿವಾಸಿ ಮೃತದೇಹ , ಸೋಮೇಶ್ವರ ಕೆರೆಯಲ್ಲಿ ಮೃತದೇಹ ಪತ್ತೆ -ಕಹಳೆ ನ್ಯೂಸ್

ಉಳ್ಳಾಲ: ಕೆಲಸಕ್ಕೆ ತೆರಳಿದ್ದ ಯುವಕನೊಬ್ಬ ಮನೆಗೆ ವಾಪಸ್ಸಾಗದೆ ಕಾಣೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ಮೃತದೇಹ ಸೋಮೇಶ್ವರ ಕೆರೆಯಲ್ಲಿ ಇಂದು ಬೆಳಿಗ್ಗೆ ಪತ್ತೆಯಾಗಿದೆ. ಕೊಣಾಜೆ ಗ್ರಾಮ ಮುಚ್ಚಿಲಕೋಡಿ ಮನೆ ನಿವಾಸಿ ದಿನೇಶ್ ಶೆಟ್ಟಿಗಾರ್ ಎಂಬವರ ಪುತ್ರ ವಿವೇಕ್ ಶೆಟ್ಟಿಗಾರ್ (32) ಮೃತದೇಹ ಪತ್ತೆಯಾಗಿದೆ. ಸೋಮೇಶ್ವರ ಕೆರೆಯಲ್ಲಿ ವಿವೇಕ್ ಶೆಟ್ಟಿಗಾರ್ ಅವರ ಮೃತದೇಹ ಪತ್ತೆಯಾಗಿದೆ. ಮಾಹಿತಿ ಪ್ರಕಾರ, ನಾಪತ್ತೆಯಾದ ದಿನವೇ ವಿವೇಕ್ ತಮ್ಮ ಸ್ಕೂಟರನ್ನು ಸೋಮೇಶ್ವರ ರಥದ ಕೊಠಡಿ ಸಮೀಪ ನಿಲ್ಲಿಸಿದ್ದು ಕಂಡುಬಂದಿದೆ....
ದಕ್ಷಿಣ ಕನ್ನಡಮಂಗಳೂರುಸುದ್ದಿ

ಒಳಮೀಸಲಾತಿ ವರ್ಗೀಕರಣದಲ್ಲಿ ಆದಿದ್ರಾವಿಡ ಸಮುದಾಯಕ್ಕೆ ಅನ್ಯಾಯ: ಕುಲಶಾಸ್ತ್ರೀಯ ಅಧ್ಯಯನಕ್ಕೆ ಒತ್ತಾಯ-ಕಹಳೆ ನ್ಯೂಸ್

ಮಂಗಳೂರು: ರಾಜ್ಯ ಸರ್ಕಾರ ಜಾರಿಗೊಳಿಸಿರುವ ಒಳಮೀಸಲಾತಿ ಪದ್ಧತಿಯಲ್ಲಿ ಆದಿದ್ರಾವಿಡ ಸಮುದಾಯಕ್ಕೆ ಅನ್ಯಾಯವಾಗುತ್ತಿದ್ದು, ಕೂಡಲೇ ಈ ಬಗ್ಗೆ ಕುಲಶಾಸ್ತ್ರೀಯ ಅಧ್ಯಯನ ನಡೆಸಿ ಸಮುದಾಯವನ್ನು ಪ್ರತ್ಯೇಕವಾಗಿ ಗುರುತಿಸಬೇಕು ಎಂದು ಮುಖಂಡರಾದ ಅನಿಲ್ ಕುಮಾರ್ ಕಂಕನಾಡಿ ಆಗ್ರಹಿಸಿದರು. ನಗರದ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರದ ಹೊಸ ವರ್ಗೀಕರಣದಿಂದ ಉಂಟಾಗಿರುವ ಗೊಂದ ಗಳು ಮತ್ತು ಸಮುದಾಯ ಎದುರಿಸುತ್ತಿರುವ ಸವಾಲುಗಳನ್ನು ಎಳೆಎಳೆಯಾಗಿ ಬಿಚ್ಚಿಟ್ಟರು. ರಾಜ್ಯದ 101 ಜಾತಿಗಳನ್ನು ಮೂರು ವಿಭಾಗಗಳಾಗಿ ವರ್ಗೀ ರಿಸಿ ಮೀಸಲಾತಿ ನೀಡುವ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಾರ್ಚ್ 6ರಂದು ಟಾಕೀಸ್ ಆ್ಯಪ್‌ನಲ್ಲಿ’ಧರ್ಮ ಚಾವಡಿ’ಬಿಡುಗಡೆ: ಕನ್ನಡಕ್ಕೂ ಡಬ್ ಆಗಲಿದೆ ಚಿತ್ರ -ಕಹಳೆ ನ್ಯೂಸ್

ಮಂಗಳೂರು  : ಕೃಷ್ಣವಾಣಿ ಪಿಕ್ಚರ್ಸ್ ಬ್ಯಾನರ್‌ನಲ್ಲಿ ಜಗದೀಶ್ ಅಮೀನ್ ನಿರ್ಮಾಣದ, ಕಳೆದ ವರ್ಷ ಕರಾವಳಿಯಾದ್ಯಂತ ಯಶಸ್ವಿಯಾಗಿ ಪ್ರದರ್ಶನಗೊಂಡ ತುಳು ಚಲನಚಿತ್ರ 'ಧರ್ಮ ಚಾವಡಿ' ಇದೀಗ ಮಾರ್ಚ್ 6ರಂದು ಟಾಕೀಸ್ ಆ್ಯಪ್ (Talkies App) OTT ಮೂಲಕ ಜಗತ್ತಿನಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ. ನಗರದ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಟ ರಕ್ಷನ್ ಮಾಡೂರು, ಚಿತ್ರಮಂದಿರಗಳಲ್ಲಿ ಭಾರಿ ಜನಮನ್ನಣೆ ಪಡೆದ ಈ ಚಿತ್ರ ಇದೀಗ ಡಿಜಿಟಲ್ ವೇದಿಕೆಯ ಮೂಲಕ ಅನಿವಾಸಿ...
1 7 8 9 10 11 114
Page 9 of 114