ಮಂಗಳೂರು: ಕಂಪೌಂಡ್ ಕುಸಿದು ನಾಲ್ವರು ಮೃತಪಟ್ಟ ಪ್ರಕರಣ: ಅಧಿಕಾರಿಗಳೊಂದಿಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸ್ಪೀಕರ್ ಯು.ಟಿ. ಖಾದರ್ ಹಾಗೂ ದ.ಕ. ಜಿಲ್ಲಾಧಿಕಾರಿ ಮುಲೈ ಮುಗಿಲನ್ – ಕಹಳೆ ನ್ಯೂಸ್
ಮಂಗಳೂರು: ನಗರದ ಹೊರ ವಲಯದ ಮುನ್ನೂರು ಗ್ರಾಮದ ಕುತ್ತಾರು ಮದನಿ ನಗರದಲ್ಲಿ ಇಂದು ಮುಂಜಾನೆ ಒಂದೇ ಕುಟುಂಬದ ನಾಲ್ವರು ಗೋಡೆ ಕುಸಿದು ಸಾವನ್ನಪ್ಪಿದ್ದು, ಸ್ಥಳಕ್ಕೆ ಸ್ಪೀಕರ್ ಯು.ಟಿ. ಖಾದರ್ ಹಾಗೂ ದ.ಕ. ಜಿಲ್ಲಾಧಿಕಾರಿ ಮುಲೈ ಮುಗಿಲನ್ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಘಟನೆ ಬಗ್ಗೆ ಬೇಸರ ವ್ಯಕ್ತಪಡಿಸಿದ ಯುಟಿ ಖಾದರ್ ಅವರು ಸರ್ಕಾರದಿಂದ ಹೆಚ್ಚಿನ ಪರಿಹಾರಕ್ಕೆ ಪ್ರಯತ್ನ ನಡೆಸಲಾಗುವುದು ಎಂದು ಹೇಳಿದ್ದಾರೆ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಆದಷ್ಟು ಬೇಗ...







