ಖಾಸಗಿ ವಸತಿ ಶಾಲೆಯಲ್ಲಿ ಅಗ್ನಿ ಅವಘಡ – ವಿದ್ಯಾರ್ಥಿ ಸಜೀವ ದಹನ – ಕಹಳೆ ನ್ಯೂಸ್
ಮಡಿಕೇರಿ: ಇಲ್ಲಿನ ಖಾಸಗಿ ವಸತಿ ಶಾಲೆಯಲ್ಲಿ ಅಗ್ನಿ ಅವಘಡ ಸಂಭವಿಸಿ, ಓರ್ವ ವಿದ್ಯಾರ್ಥಿ ಸಜೀವ ದಹನವಾಗಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಚೆಟ್ಟಿಮಾನಿ ಗ್ರಾಮದ ನಿವಾಸಿ ಪುಷ್ಪಕ್(7) ಮೃತ ವಿದ್ಯಾರ್ಥಿ. ಪುಷ್ಪಕ್ ಮಡಿಕೇರಿ ತಾಲೂಕಿನ ಕಾಟಗೇರಿ ಖಾಸಗಿ ವಸತಿ ಶಾಲೆಯಲ್ಲಿ ಎರಡನೇ ವ್ಯಾಸಂಗ ಮಾಡುತ್ತಿದ್ದ. ಇಂದು ಬೆಳಗ್ಗೆ ಶಾಲೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮೃತಪಟ್ಟಿದ್ದಾನೆ. ಶಾಲೆಯ ಕೊಠಡಿಯಲ್ಲಿ ವಿದ್ಯಾರ್ಥಿಗಳು ಮಲಗಿರುವ ವೇಳೆ ಬೆಂಕಿ ಕಾಣಿಸಿಕೊಂಡಿದೆ. ಕೊಠಡಿಯಲ್ಲಿ ಸುಮಾರು 35 ಕ್ಕೂ...







