ಕಡಬ ಬಲ್ಯದ ಗಾಣದಕೊಟ್ಟಿಗೆ ಎಂಬಲ್ಲಿ ಮಾಂಸಾಹಾರ ಸೇವಿಸಿ ಓರ್ವ ಸಾವು: ಐವರ ಆರೋಗ್ಯದಲ್ಲಿ ಏರುಪೇರು-ಕಹಳೆ ನ್ಯೂಸ್
ಕಡಬ: ಮಾಂಸಾಹಾರ ಸೇವಿಸಿ ಓರ್ವ ಮೃತಪಟ್ಟಿದ್ದು, ಹಲವರ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಕಡಬ ತಾಲೂಕಿನ ಬಲ್ಯದ ಗಾಣದಕೊಟ್ಟಿಗೆ ಎಂಬಲ್ಲಿ ನಡೆದಿದೆ. ಗಾಣದ ಕೊಟ್ಟಿಗೆ ನಿವಾಸಿ ದೇವಪ್ಪ ಗೌಡ ಮೃತ ವ್ಯಕ್ತಿ ಎನ್ನಲಾಗಿದೆ. ಅಲ್ಲಿ ಮಧ್ಯಾಹ್ನ ಊಟಕ್ಕೆ ಮಾಡಲಾಗಿದ್ದ ಕೋಳಿ ಪದಾರ್ಥ ಸೇವಿಸಿದ್ದಾರೆ. ಕೂಲಿ ಕೆಲಸ ಮಾಡಿ ಸಂಜೆ ಮನೆಗೆ ಬಂದ ಬಳಿಕ ದೇವಪ್ಪ ಗೌಡರಿಗೆ ವಾಂತಿ ಹಾಗೂ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ನೆಲ್ಯಾಡಿ ಆಸ್ಪತ್ರೆಗೆ...







