ಸ್ನೇಹಿತರಿಂದ ಬೆದರಿಕೆ, ಯುವಕ ಲಾಡ್ಜ್ನಲ್ಲಿ ಆತ್ಮಹತ್ಯೆ – ಕಹಳೆ ನ್ಯೂಸ್
ಕಾರ್ಕಳ : ಮಂಗಳೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದಲ್ಲಿರುವ ಯುವಕನೊಬ್ಬ ಲಾಡ್ಜ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ಬೆಳ್ಮಣ್ಣುವಿನಲ್ಲಿರುವ ಖಾಸಗಿ ಲಾಡ್ಜ್ನಲ್ಲಿ ನಡೆದಿದೆ. ಮೃತನನ್ನು ನಿಟ್ಟೆ ಗ್ರಾಮದ ಪರಪ್ಪಾಡಿ ನಿವಾಸಿ ಅಭಿಷೇಕ್ ಆಚಾರ್ಯ (23) ಎಂದು ಗುರುತಿಸಲಾಗಿದೆ. ಅಭಿಷೇಕ್ ಮಂಗಳೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದು ಸ್ಥಳೀಯ ಯುವತಿಯನ್ನು ಪ್ರೀತಿಸುತ್ತಿದ್ದರು ಎಂದು ಹೇಳಲಾಗಿದೆ. ಅವರ ಸಂಬಂಧವು ದೈಹಿಕ ಅನ್ಯೋನ್ಯತೆಗೆ ಮುಂದುವರೆದಿದ್ದು, ಇಬ್ಬರೂ ಒಟ್ಟಿಗೆ ಖಾಸಗಿ ವೀಡಿಯೊವನ್ನು ರೆಕಾರ್ಡ್ ಮಾಡಿದ್ದಾರೆ ಎಂದು...







