ಗೋಕರ್ಣದ ಕಾಡಿನ ಗುಹೆಯಲ್ಲಿ ವಾಸವಿದ್ದ ರಷ್ಯಾ ಮಹಿಳೆ, ಇಬ್ಬರು ಮಕ್ಕಳ ರಕ್ಷಣೆ -ಕಹಳೆ ನ್ಯೂಸ್
ಗೋಕರ್ಣ: ರಾಮತೀರ್ಥ ಗುಡ್ಡದ ಮೇಲೆ ಕಾಡಿನ ಪ್ರದೇಶದೊಳಗೆ ಇರುವ ಗುಹೆಯೊಂದರಲ್ಲಿ ವಾಸವಿದ್ದ ರಷ್ಯಾ ದೇಶದ ಮಹಿಳೆ ಮತ್ತು ಆಕೆಯ ಇಬ್ಬರು ಚಿಕ್ಕ ಮಕ್ಕಳನ್ನು ಪೊಲೀಸರು ರಕ್ಷಿಸಿದ್ದಾರೆ. ಈ ಘಟನೆ ಶನಿವಾರ ಬೆಳಕಿಗೆ ಬಂದಿದ್ದು, ಮಹಿಳೆಯ ವೀಸಾ ಅವಧಿ 2017ರಲ್ಲೇ ಮುಗಿದಿರುವುದು ಪತ್ತೆಯಾಗಿದೆ. ಪ್ರವಾಸಿಗರ ರಕ್ಷಣೆಗಾಗಿ ಗಸ್ತು ತಿರುಗುತ್ತಿದ್ದ ಪೊಲೀಸರಿಗೆ, ಗುಡ್ಡದ ತುದಿಯಲ್ಲಿ ಯಾರೋ ಅಪರಿಚಿತರು ವಾಸವಿರುವ ಬಗ್ಗೆ ಅನುಮಾನ ಬಂದಿದೆ. ಗುಡ್ಡದ ತುದಿಯನ್ನು ತಲುಪಿದಾಗ, ಅಲ್ಲಿ ಗುಹೆಯ ಸ್ವರೂಪದ ಕುಟೀರದಲ್ಲಿ...







