Tuesday, March 10, 2026

ಮಂಗಳೂರು

ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಹೆಚ್ಚಿನ ಸುದ್ದಿ

ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರ(HWC) ಸ್ಥಾಪನೆಗೆ 24.70 ಕೋಟಿ ರೂ. ಮಂಜೂರು: ಸಂಸದ ಕ್ಯಾ. ಚೌಟ – ಕಹಳೆ ನ್ಯೂಸ್

ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರದ ಆಯುಷ್ಮಾನ್ ಭಾರತ್ ಆರೋಗ್ಯ ಮೂಲಸೌಕರ್ಯ ಮಿಷನ್‌ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರ(HWC) ಸ್ಥಾಪನೆಗೆ ಒಟ್ಟು 24.70 ಕೋಟಿ ರೂ. ಅನುದಾನ ಮಂಜೂರಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಗ್ರಾಮೀಣ ಭಾಗದಲ್ಲಿ ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿಪಡಿಸುವ ಉದ್ದೇಶದಿಂದ ಪ್ರಧಾನಿ ಮೋದಿ ಅವರ PM-ABHIM ಯೋಜನೆಯಡಿ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಭೂಗತ ಪಾತಕಿ ಕಲಿ ಯೋಗೀಶ್ ಸಹಚರ ಶ್ರೀನಿವಾಸ್ ಶೆಟ್ಟಿ‌ ಪೊಲೀಸ್ ವಶಕ್ಕೆ

ಮಂಗಳೂರು : ಭೂಗತ ಪಾತಕಿ ಕಲಿ ಯೋಗೀಶ್ ಸಹಚರ, ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಮುಲ್ಕಿ ಚಿತ್ರಾಪು ನಿವಾಸಿ ಶ್ರೀನಿವಾಸ್ ಶೆಟ್ಟಿ ಯಾನೆ ಶೀನು (45) ಎಂಬಾತನನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ. ಕೊಕಾ ಪ್ರಕರಣದ ಅರೋಪಿಯಾಗಿರುವ ಈತ 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿ ಕೊಂಡಿದ್ದ. ಈತನ ವಿರುದ್ಧ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಾರೆಂಟ್ ಹೊರಡಿಸಿತ್ತು. ಅದರಂತೆ ಮಂಗಳೂರು ಉತ್ತರ ವಿಭಾಗದ ಎಸಿಪಿ ಶ್ರೀಕಾಂತ್‌ರ ಮಾರ್ಗದರ್ಶನದಲ್ಲಿ ಮುಲ್ಕಿ ಠಾಣೆಯ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸಂತಾಪಸುದ್ದಿ

ಮಂಗಳೂರು ವಿವಿ ಕ್ರೀಡಾ ವಿಭಾಗದ ನಿರ್ದೇಶಕ ಕಿಶೋರ್ ಕುಮಾರ್ ನಿಧನ – ಕಹಳೆ ನ್ಯೂಸ್

ಮಂಗಳೂರು: ಕ್ರೀಡಾಪಟು, ಮಂಗಳೂರು ವಿಶ್ವವಿದ್ಯಾಲಯದ ಕ್ರೀಡಾ ವಿಭಾಗದ ಅಧ್ಯಕ್ಷ ಮತ್ತು ನಿರ್ದೇಶಕ ಕಿಶೋರ್ ಕುಮಾರ್ ಸಿ.ಕೆ (56) ಭಾನುವಾರ ಮುಂಜಾನೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ ಪತ್ನಿ, ವಕೀಲೆ ಅರುಣಾ ಬಿ.ಪಿ ಮತ್ತು ಇಬ್ಬರು ಪುತ್ರರು ಇದ್ದಾರೆ. ಮಂಗಳೂರಿನ ಶಿವಭಾಗ್‌ನಲ್ಲಿರುವ ಅರ್ಬೇನಿಯ ಹೋಮ್ಸ್‌ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿದ್ದ ಅವರು ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈಚೆಗೆ ಬ್ರೇನ್ ಹ್ಯಾಮರೇಜ್‌ಗೆ ಒಳಗಾಗಿದ್ದರು ಎಂದು ಆಪ್ತರು ತಿಳಿಸಿದ್ದಾರೆ. ಭಾನುವಾರ ಮಧ್ಯಾಹ್ನ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಹೆಚ್ಚಿನ ಸುದ್ದಿ

ಕೃಷಿ ಇಲಾಖೆ-ಗುರುಪುರ ವ್ಯ.ಸೇ.ಸ.ಸಂಘ ಜಂಟಿ `ಕಿಸಾನ್ ಗೋಷ್ಠಿ’ :ವೈಜ್ಞಾನಿಕ ಕೃಷಿ ಲಾಭದಾಯಕ : ಶಾಸಕ ಡಾ. ವೈ ಭರತ್ ಶೆಟ್ಟಿ – ಕಹಳೆ ನ್ಯೂಸ್

ಗುರುಪುರ : ಬದಲಾದ ಸಮಯಕ್ಕೆ ಅನುಗುಣವಾಗಿ ಕೃಷಿಯಲ್ಲಿ ಬದಲಾವಣೆಯಾಗಿದೆ. ವೈಜ್ಞಾನಿಕ ರೀತಿಯ ಕೃಷಿ ಹೆಚ್ಚು ಲಾಭದಾಯಕ. ಸರ್ಕಾರದಿಂದ ಕೃಷಿಕರಿಗೆ ಸಹಾಯ ದೊರೆಯುತ್ತಿದ್ದು, ಅವುಗಳ ಲಾಭ ಪಡೆಯಬೇಕು. ಜಿಲ್ಲೆಯಲ್ಲಿ ಭತ್ತದ ಕೃಷಿ ಕಡಿಮೆಯಾಗಿದೆ. ಇದಕ್ಕೆ ರಿಯಲ್ ಎಸ್ಟೇಟ್, ಗದ್ದೆಗಳ ಒಳ ಸಮಸ್ಯೆಗಳು ಮತ್ತು ಮಾರುಕಟ್ಟೆಯಲ್ಲಿ ಬೆಂಬಲ ಬೆಲೆ ಇಲ್ಲದಿರುವಿಕೆ ಪ್ರಮುಖ ಕಾರಣವಾಗಿವೆ ಎಂದು ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಹೇಳಿದರು. ಕೃಷಿ ಇಲಾಖೆ ಮಂಗಳೂರು ಮತ್ತು ಗುರುಪುರ ವ್ಯವಸಾಯ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಹೆಚ್ಚಿನ ಸುದ್ದಿ

ಮುಳಿಹಿತ್ಲು ಫ್ರೆಂಡ್ಸ್ ಸರ್ಕಲ್ (ಎಂ.ಎಫ್.ಸಿ) ತಂಡದ ಮುಡಿಗೇರಿದ ಕುಡ್ಲದ ಪಿಲಿಪರ್ಬ- 2025 ರ ಕಿರೀಟ -ಕಹಳೆ ನ್ಯೂಸ್

ಮಂಗಳೂರು : ನಳಿನ್ ಕುಮಾರ್ ಕಟೀಲ್ ಮಾರ್ಗದರ್ಶನ ಹಾಗೂ ಶಾಸಕ ಡಿ.ವೇದವ್ಯಾಸ ಕಾಮತ್ ರವರ ನೇತೃತ್ವದ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿ ಕೇಂದ್ರ ಮೈದಾನದಲ್ಲಿ ಅದ್ದೂರಿಯಾಗಿ ನಡೆದ ಕುಡ್ಲದ ಪಿಲಿಪರ್ಬ-2025 ಸೀಸನ್-4 ಮುಕ್ತಾಯಗೊಂಡಿದ್ದು,10 ತಂಡಗಳ ನಡುವಿನ ಜಿದ್ದಾಜಿದ್ದಿನ ಸ್ಪರ್ಧಾಕೂಟದಲ್ಲಿ ಅಂತಿಮವಾಗಿ ಮುಳಿಹಿತ್ಲು ಫ್ರೆಂಡ್ಸ್ ಸರ್ಕಲ್ (ಎಂ.ಎಫ್.ಸಿ) ತಂಡವು ಪ್ರತಿಷ್ಠಿತ ಪಿಲಿಪರ್ಬ- 2025 ರ ಕಿರೀಟ ಮುಡಿಗೇರಿಸಿಕೊಂಡಿತು. ದ್ವಿತೀಯ ಸ್ಥಾನದ ಪ್ರಶಸ್ತಿಯನ್ನು ನಂದಿಗುಡ್ಡ ಫ್ರೆಂಡ್ಸ್ ಬಾಬುಗುಡ್ಡ ತಂಡವು ಪಡೆದುಕೊಂಡರೆ, ತೃತೀಯ ಸ್ಥಾನವನ್ನು ಕಾರ್ಕಳ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಸೆಪ್ಟೆಂಬರ್ 30 ರಂದು ಕುಡ್ಲದ ಪಿಲಿಪರ್ಬ- 4 ನೇ ಆವೃತ್ತಿ – ಕಹಳೆ ನ್ಯೂಸ್

ಮಂಗಳೂರು : ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಮಾಜಿ ಸಂಸದ ಶ್ರೀ ನಳಿನ್ ಕುಮಾ‌ರ್ ಕಟೀಲ್ ಮಾರ್ಗದರ್ಶನದಲ್ಲಿ ಕುಡ್ಲದ ಪಿಲಿಪರ್ಬದ ನಾಲ್ಕನೇ ಆವೃತ್ತಿಯ ಸ್ಪರ್ಧಾಕೂಟವು ಇದೇ ಸಪ್ಟೆಂಬರ್ 30 ರಂದು ಮಂಗಳೂರಿನ ಕೇಂದ್ರ ಮೈದಾನದಲ್ಲಿ ಬೆಳಗ್ಗೆ 9.30 ಕ್ಕೆ ಉದ್ಘಾಟನೆಗೊಳ್ಳಲಿದೆ ಎಂದು ಶಾಸಕ ಶ್ರೀ ಡಿ. ವೇದವ್ಯಾಸ್ ಕಾಮತ್ ರವರು ಹೇಳಿದರು. ನಂತರ ಮಾತನಾಡಿದ ಅವರು, ಬೆಳಿಗ್ಗೆ 10 ಗಂಟೆಗೆ ಸರಿಯಾಗಿ ಭವ್ಯ ವಿಶಾಲ ವೇದಿಕೆಯಲ್ಲಿ ಆರಂಭಗೊಳ್ಳಲಿರುವ ಸ್ಪರ್ಧಾಕೂಟದಲ್ಲಿ ಕರಾವಳಿ...
ಕ್ರೀಡೆಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಮಂಗಳೂರುಸುದ್ದಿ

ಮಂಗಳೂರಿನ ಉಪ್ಪಿನಂಗಡಿ ಮೂಲದ ವಿದ್ಯಾರ್ಥಿನಿ ದುಬೈ U.A.E ಅಂತಾರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಆಯ್ಕೆ – ಕಹಳೆ ನ್ಯೂಸ್

ದುಬೈ : ಮಂಗಳೂರು ಜಿಲ್ಲೆಯ ಉಪ್ಪಿನಂಗಡಿಯ ಸಮೀಪದ ವಳಾಲ್, ಬಜತೂರು ಗ್ರಾಮದ ಪಟ್ಟೆ ಮನೆ ಅಮಿಷ ಆನಂದ್ ಇದೇ ಬರುವ ಸೆಪ್ಟೆಂಬರ್ 27 ರಿಂದ ಅಕ್ಟೋಬರ್ 4 ರ ವರೆಗೆ ಶ್ರೀಲಂಕಾದ ಕೊಲಂಬೋ ದಲ್ಲಿ ನಡೆಯಲಿರುವ ಅಂಡರ್ 22 ವಯೋ ವಿಭಾಗದ ಹುಡಿಗಿಯರ ಇಂಡೋರ್ ವಿಶ್ವಕಪ್ ಕ್ರಿಕೆಟ್ ಕೂಟಕ್ಕೆ ಯುನೈಟೆಡ್ ಅರಬ್ ಎಮಿರೇಟ್ಸ್ ದೇಶದ ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾಳೆ . ಈ ಕ್ರಿಕೆಟ್ ಪಂದ್ಯ ಕೂಟದಲ್ಲಿ...
ಜಿಲ್ಲೆಮಂಗಳೂರುಸುದ್ದಿ

ಮಂಗಳೂರು ನಗರದ ಕದ್ರಿ ಲೋಬೊ ಲೇನ್‌ನಲ್ಲಿ ನಕಲಿ ಮದ್ಯ ತಯಾರಿಕಾ ಅಡ್ಡೆಗೆ ಅಬಕಾರಿ ಅಧಿಕಾರಿಗಳು ದಾಳಿ – ಕಹಳೆ ನ್ಯೂಸ್

ಮಂಗಳೂರು : ನಗರದ ಕದ್ರಿ ಲೋಬೊ ಲೇನ್‌ನಲ್ಲಿ ನಕಲಿ ಮದ್ಯ ತಯಾರಿಕಾ ಅಡ್ಡೆಗೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ ಸುಮಾರು 5,57,690 ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಮೈಕಲ್ ಬೈಸ್ ಮಿನೇಜಸ್ ಎಂಬಾತನ ಮನೆಯಲ್ಲಿ ನಕಲಿ ಮದ್ಯ ತಯಾರಿಸಲಾಗುತ್ತದೆ ಎಂಬ ಖಚಿತ ವರ್ತಮಾನ ಮೇರೆಗೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿದರು. ಮೈಕಲ್ ಬೈಸ್ ಮಿನೇಜಸ್‌ನ ಮನೆಯಲ್ಲಿ ತಯಾರಿಸಿಟ್ಟಿದ್ದ ನಕಲಿ ವೈನ್ - 238.500 ಲೀಟರ್, ವೈನ್ ತಯಾರಿಸುವ ಕೊಳೆ -1,500...
1 13 14 15 16 17 105
Page 15 of 105