Recent Posts

Sunday, April 26, 2026

ಮಂಗಳೂರು

ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಹೆಚ್ಚಿನ ಸುದ್ದಿ

ಮನೆಯೇ ಅಕ್ರಮ ಕಸಾಯಿ ಖಾನೆ! ಪೊಲೀಸ್ ದಾಳಿ, 3 ಮಂದಿ ಬಂಧನ : ಆರೋಪಿ ಮನೆ ಮುಟ್ಟು ಗೋಲು ಹಾಕಲು ಕ್ರಮ – ಕಹಳೆ ನ್ಯೂಸ್

ಸುರತ್ಕಲ್ : ಮಂಗಳೂರು ತಾಲೂಕು ಕಾಟಿಪಳ್ಳ ಗ್ರಾಮದ 8ನೇ ಬ್ಲಾಕ್ ಚೊಕ್ಕಬೆಟ್ಟುವಿನ ಅಂಚೆ ಕಛೇರಿ ರಸ್ತೆಯ ಅಬ್ದುಲ್ ಖಾದರ್ ರವರ ಮನೆಯಲ್ಲಿ ಅಕ್ರಮವಾಗಿ ದನ ವಧೆಯನ್ನು ಮಾಡುತ್ತಿದ್ದ ಬಗ್ಗೆ ಮಾಹಿತಿಯನ್ನು ಪಡೆದು ಸುರತ್ಕಲ್ ಪೊಲೀಸ್ ಠಾಣೆ ಪಿಎಸ್‌ಐ ರಘುನಾಯಕ್ ಹಾಗೂ ಸಿಬ್ಬಂದಿಯವರು ದಾಳಿ ಮಾಡಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಚೊಕ್ಕಬೆಟ್ಟುವಿನ ಅಜೀಜ್ ಅಹಮ್ಮದ್, (55) ಇಮ್ಮಿಯಾಜ್ (41), ಎ ಕೆ ಆಶೀಕ್ (22) ಬಂಧಿತ ಆರೋಪಿಗಳು. ಇನ್ನೊರ್ವ ಆರೋಪಿ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಹೆಚ್ಚಿನ ಸುದ್ದಿ

12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಕೊನೆಗೂ ಬಂಧನ – ಕಹಳೆ ನ್ಯೂಸ್

ಮಂಗಳೂರು : ಬರೋಬ್ಬರಿ 12 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕಸಬ ಬೆಂಗ್ರೆ ನಿವಾಸಿ ಅಲ್ತಾಫ್ (47) ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಮಂಗಳೂರು ನಗರ ಪೊಲೀಸ್ ಆಯುಕ್ತರ ವ್ಯಾಪ್ತಿಯ ಉತ್ತರ ಪೊಲೀಸ್ ಠಾಣೆಯಲ್ಲಿ ಸಾಮೂಹಿಕ ದಂಗೆ, ಶಸ್ತ್ರ ಪ್ರಯೋಗ, ಹಾನಿ ಮತ್ತು ಬೆದರಿಕೆ ಸೇರಿ ಹಲವು ಪ್ರಕರಣ ದಾಖಲಾಗಿತ್ತು. ಈತನ ಬಗ್ಗೆ ಮಂಗಳೂರು 2ನೇ ಸಿ.ಜೆ.ಎಂ ನ್ಯಾಯಾಲಯಕ್ಕೆ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಹೆಚ್ಚಿನ ಸುದ್ದಿ

ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದಾಗಿ ರೋಗಿಗಳಿಗಿಲ್ಲ ಇಎಸ್ಐ ಸೌಲಭ್ಯ : ಶಾಸಕ ಕಾಮತ್ – ಕಹಳೆ ನ್ಯೂಸ್

ಮಂಗಳೂರು : ಕಾರ್ಮಿಕರ ಆರೋಗ್ಯ ವಿಮೆ (ಇಎಸ್ಐ) ಅಡಿಯಲ್ಲಿ ಚಿಕಿತ್ಸೆ ಪಡೆಯುವ ವಿಮೆದಾರರು ಹಾಗೂ ಅವರ ಕುಟುಂಬ ಸದಸ್ಯರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯದಿಂದಾಗಿ ವೈದ್ಯಕೀಯ ಸೌಲಭ್ಯ ಪಡೆಯುವಲ್ಲಿ ತೀವ್ರ ತೊಂದರೆಯಾಗುತ್ತಿದ್ದು ಇನ್ನೂ ಸಹ ಸರ್ಕಾರ ಎಚ್ಚೆತ್ತುಕೊಳ್ಳದಿರುವುದು ಖಂಡನೀಯವೆಂದು ಶಾಸಕ ವೇದವ್ಯಾಸ ಕಾಮತ್ ರವರು ಆಕ್ರೋಶ ವ್ಯಕ್ತಪಡಿಸಿದರು. ಇಎಸ್ಐ ಆಸ್ಪತ್ರೆಗಳು ಖಾಸಗಿ ಆಸ್ಪತ್ರೆಗಳೊಂದಿಗೆ ಮಾಡಿಕೊಂಡಿರುವ ಹೊಂದಾಣಿಕೆ ಅವಧಿಯು ಕಳೆದ ಸಪ್ಟೆಂಬರ್ 30ನೇ ತಾರೀಕಿನಂದು ಅಂತ್ಯಗೊಂಡಿದೆ. ಹೀಗಾಗಿ ಅಕ್ಟೋಬರ್ 1 ರಿಂದ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಹೆಚ್ಚಿನ ಸುದ್ದಿ

ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರ(HWC) ಸ್ಥಾಪನೆಗೆ 24.70 ಕೋಟಿ ರೂ. ಮಂಜೂರು: ಸಂಸದ ಕ್ಯಾ. ಚೌಟ – ಕಹಳೆ ನ್ಯೂಸ್

ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರದ ಆಯುಷ್ಮಾನ್ ಭಾರತ್ ಆರೋಗ್ಯ ಮೂಲಸೌಕರ್ಯ ಮಿಷನ್‌ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರ(HWC) ಸ್ಥಾಪನೆಗೆ ಒಟ್ಟು 24.70 ಕೋಟಿ ರೂ. ಅನುದಾನ ಮಂಜೂರಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಗ್ರಾಮೀಣ ಭಾಗದಲ್ಲಿ ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿಪಡಿಸುವ ಉದ್ದೇಶದಿಂದ ಪ್ರಧಾನಿ ಮೋದಿ ಅವರ PM-ABHIM ಯೋಜನೆಯಡಿ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಭೂಗತ ಪಾತಕಿ ಕಲಿ ಯೋಗೀಶ್ ಸಹಚರ ಶ್ರೀನಿವಾಸ್ ಶೆಟ್ಟಿ‌ ಪೊಲೀಸ್ ವಶಕ್ಕೆ

ಮಂಗಳೂರು : ಭೂಗತ ಪಾತಕಿ ಕಲಿ ಯೋಗೀಶ್ ಸಹಚರ, ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಮುಲ್ಕಿ ಚಿತ್ರಾಪು ನಿವಾಸಿ ಶ್ರೀನಿವಾಸ್ ಶೆಟ್ಟಿ ಯಾನೆ ಶೀನು (45) ಎಂಬಾತನನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ. ಕೊಕಾ ಪ್ರಕರಣದ ಅರೋಪಿಯಾಗಿರುವ ಈತ 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿ ಕೊಂಡಿದ್ದ. ಈತನ ವಿರುದ್ಧ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಾರೆಂಟ್ ಹೊರಡಿಸಿತ್ತು. ಅದರಂತೆ ಮಂಗಳೂರು ಉತ್ತರ ವಿಭಾಗದ ಎಸಿಪಿ ಶ್ರೀಕಾಂತ್‌ರ ಮಾರ್ಗದರ್ಶನದಲ್ಲಿ ಮುಲ್ಕಿ ಠಾಣೆಯ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸಂತಾಪಸುದ್ದಿ

ಮಂಗಳೂರು ವಿವಿ ಕ್ರೀಡಾ ವಿಭಾಗದ ನಿರ್ದೇಶಕ ಕಿಶೋರ್ ಕುಮಾರ್ ನಿಧನ – ಕಹಳೆ ನ್ಯೂಸ್

ಮಂಗಳೂರು: ಕ್ರೀಡಾಪಟು, ಮಂಗಳೂರು ವಿಶ್ವವಿದ್ಯಾಲಯದ ಕ್ರೀಡಾ ವಿಭಾಗದ ಅಧ್ಯಕ್ಷ ಮತ್ತು ನಿರ್ದೇಶಕ ಕಿಶೋರ್ ಕುಮಾರ್ ಸಿ.ಕೆ (56) ಭಾನುವಾರ ಮುಂಜಾನೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ ಪತ್ನಿ, ವಕೀಲೆ ಅರುಣಾ ಬಿ.ಪಿ ಮತ್ತು ಇಬ್ಬರು ಪುತ್ರರು ಇದ್ದಾರೆ. ಮಂಗಳೂರಿನ ಶಿವಭಾಗ್‌ನಲ್ಲಿರುವ ಅರ್ಬೇನಿಯ ಹೋಮ್ಸ್‌ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿದ್ದ ಅವರು ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈಚೆಗೆ ಬ್ರೇನ್ ಹ್ಯಾಮರೇಜ್‌ಗೆ ಒಳಗಾಗಿದ್ದರು ಎಂದು ಆಪ್ತರು ತಿಳಿಸಿದ್ದಾರೆ. ಭಾನುವಾರ ಮಧ್ಯಾಹ್ನ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಹೆಚ್ಚಿನ ಸುದ್ದಿ

ಕೃಷಿ ಇಲಾಖೆ-ಗುರುಪುರ ವ್ಯ.ಸೇ.ಸ.ಸಂಘ ಜಂಟಿ `ಕಿಸಾನ್ ಗೋಷ್ಠಿ’ :ವೈಜ್ಞಾನಿಕ ಕೃಷಿ ಲಾಭದಾಯಕ : ಶಾಸಕ ಡಾ. ವೈ ಭರತ್ ಶೆಟ್ಟಿ – ಕಹಳೆ ನ್ಯೂಸ್

ಗುರುಪುರ : ಬದಲಾದ ಸಮಯಕ್ಕೆ ಅನುಗುಣವಾಗಿ ಕೃಷಿಯಲ್ಲಿ ಬದಲಾವಣೆಯಾಗಿದೆ. ವೈಜ್ಞಾನಿಕ ರೀತಿಯ ಕೃಷಿ ಹೆಚ್ಚು ಲಾಭದಾಯಕ. ಸರ್ಕಾರದಿಂದ ಕೃಷಿಕರಿಗೆ ಸಹಾಯ ದೊರೆಯುತ್ತಿದ್ದು, ಅವುಗಳ ಲಾಭ ಪಡೆಯಬೇಕು. ಜಿಲ್ಲೆಯಲ್ಲಿ ಭತ್ತದ ಕೃಷಿ ಕಡಿಮೆಯಾಗಿದೆ. ಇದಕ್ಕೆ ರಿಯಲ್ ಎಸ್ಟೇಟ್, ಗದ್ದೆಗಳ ಒಳ ಸಮಸ್ಯೆಗಳು ಮತ್ತು ಮಾರುಕಟ್ಟೆಯಲ್ಲಿ ಬೆಂಬಲ ಬೆಲೆ ಇಲ್ಲದಿರುವಿಕೆ ಪ್ರಮುಖ ಕಾರಣವಾಗಿವೆ ಎಂದು ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಹೇಳಿದರು. ಕೃಷಿ ಇಲಾಖೆ ಮಂಗಳೂರು ಮತ್ತು ಗುರುಪುರ ವ್ಯವಸಾಯ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಹೆಚ್ಚಿನ ಸುದ್ದಿ

ಮುಳಿಹಿತ್ಲು ಫ್ರೆಂಡ್ಸ್ ಸರ್ಕಲ್ (ಎಂ.ಎಫ್.ಸಿ) ತಂಡದ ಮುಡಿಗೇರಿದ ಕುಡ್ಲದ ಪಿಲಿಪರ್ಬ- 2025 ರ ಕಿರೀಟ -ಕಹಳೆ ನ್ಯೂಸ್

ಮಂಗಳೂರು : ನಳಿನ್ ಕುಮಾರ್ ಕಟೀಲ್ ಮಾರ್ಗದರ್ಶನ ಹಾಗೂ ಶಾಸಕ ಡಿ.ವೇದವ್ಯಾಸ ಕಾಮತ್ ರವರ ನೇತೃತ್ವದ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿ ಕೇಂದ್ರ ಮೈದಾನದಲ್ಲಿ ಅದ್ದೂರಿಯಾಗಿ ನಡೆದ ಕುಡ್ಲದ ಪಿಲಿಪರ್ಬ-2025 ಸೀಸನ್-4 ಮುಕ್ತಾಯಗೊಂಡಿದ್ದು,10 ತಂಡಗಳ ನಡುವಿನ ಜಿದ್ದಾಜಿದ್ದಿನ ಸ್ಪರ್ಧಾಕೂಟದಲ್ಲಿ ಅಂತಿಮವಾಗಿ ಮುಳಿಹಿತ್ಲು ಫ್ರೆಂಡ್ಸ್ ಸರ್ಕಲ್ (ಎಂ.ಎಫ್.ಸಿ) ತಂಡವು ಪ್ರತಿಷ್ಠಿತ ಪಿಲಿಪರ್ಬ- 2025 ರ ಕಿರೀಟ ಮುಡಿಗೇರಿಸಿಕೊಂಡಿತು. ದ್ವಿತೀಯ ಸ್ಥಾನದ ಪ್ರಶಸ್ತಿಯನ್ನು ನಂದಿಗುಡ್ಡ ಫ್ರೆಂಡ್ಸ್ ಬಾಬುಗುಡ್ಡ ತಂಡವು ಪಡೆದುಕೊಂಡರೆ, ತೃತೀಯ ಸ್ಥಾನವನ್ನು ಕಾರ್ಕಳ...
1 15 16 17 18 19 108
Page 17 of 108