72ನೇ ಅಖಿಲ ಭಾರತ ಸಹಕಾರ ಸಪ್ತಾಹ ಅಂಗವಾಗಿ ನ.16ರಂದು ರಾಜ್ಯಮಟ್ಟದ ಸಹಕಾರ ಸಪ್ತಾಹ ಕಾರ್ಯಕ್ರಮ-ಕಹಳೆ ನ್ಯೂಸ್
ಮಂಗಳೂರು: 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಅಂಗವಾಗಿ ನ.16ರಂದು ಬೆಳಗ್ಗೆ 10ಗಂಟೆಗೆ ರಾಜ್ಯಮಟ್ಟದ ಸಹಕಾರ ಸಪ್ತಾಹ ಕರಾವಳಿ ಉತ್ಸವ ಮೈದಾನದಲ್ಲಿ ಉದ್ಘಾಟನೆಯಾಗಲಿದೆ ಎಂದು ಸಹಕಾರಿ ರತ್ನ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ತಿಳಿಸಿದ್ದಾರೆ. ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಸಹಕಾರ ಸಂಸ್ಥೆಗಳ ಮೂಲಕ ಗ್ರಾಮೀಣ ಅಭಿವೃದ್ಧಿಯ ಬಲವರ್ಧನೆ ಎಂಬ ವಿಷಯದೊಂದಿಗೆ ಈ ಸಪ್ತಾಹ ನಡೆಯಲಿದ್ದು, ರಾಜ್ಯದಲ್ಲೇ ಈ ಕಾರ್ಯಕ್ರಮವನ್ನು...







