Monday, March 16, 2026

ಮಂಗಳೂರು

ದಕ್ಷಿಣ ಕನ್ನಡಮಂಗಳೂರುಶಿಕ್ಷಣಸುದ್ದಿ

ಸರಕಾರಿ ಪದವಿ ಪೂರ್ವ ಕಾಲೇಜು ನಾಲ್ಯಪದವು ಇಲ್ಲಿ ನೂತನವಾಗಿ ನಿರ್ಮಾಣಗೊಂಡ ವಿವೇಕ ತರಗತಿ ಕೊಠಡಿ ಉದ್ಘಾಟಿಸಿದ ಶಾಸಕ ವೇದವ್ಯಾಸ ಕಾಮತ್-ಕಹಳೆ ನ್ಯೂಸ್

ಸರಕಾರಿ ಪದವಿ ಪೂರ್ವ ಕಾಲೇಜು, ನಾಲ್ಯಪದವು, ಶಕ್ತಿನಗರ ಇಲ್ಲಿ ನೂತನವಾಗಿ ನಿರ್ಮಾಣಗೊಂಡ ಎಂಟು ವಿವೇಕ ತರಗತಿ ಕೊಠಡಿಗಳನ್ನು ಶಾಸಕ ವೇದವ್ಯಾಸ ಕಾಮತ್ ರವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ಈ ಎಂಟು ಕೊಠಡಿಗಳು ಮಾತ್ರವಲ್ಲದೇ ಇಲ್ಲಿನ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಕೊಠಡಿಗಳಿಗೆ ಒಟ್ಟಾರೆಯಾಗಿ 2.60 ಕೋಟಿ ರೂಪಾಯಿ ಅನುದಾನ ಮಂಜೂರುಗೊಳಿಸಿ ಭೂಮಿಪೂಜೆ ನೆರವೇರಿಸಲಾಗಿತ್ತು. ಇದೀಗ ನಿರ್ಮಾಣ ಕಾರ್ಯ ಪೂರ್ಣಗೊಂಡು ಲೋಕಾರ್ಪಣೆಗೊಂಡಿರುವ ಕಾಲೇಜಿನ ವಿವೇಕ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ದಕ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಪೂರಕ ಕೆಲಸ: ಕಸಾಪ ಮಂಗಳೂರು ಹೋಬಳಿ ನಿರ್ಣಯ-ಕಹಳೆ ನ್ಯೂಸ್

ಮಂಗಳೂರು: ದಕ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು ಫೆ. 21, 22 ಕೊಣಾಜೆ ಮಂಗಳೂರು ವಿಶ್ವವಿದ್ಯಾನಿಲಯದ ಆವರಣದಲ್ಲಿ ನಡೆಯಲಿದ್ದು ಅದಕ್ಕೆ ಪೂರಕವಾಗಿ ಸಾಹಿತಿ,ಸಾಹಿತ್ಯಾಸ್ತರು ಮತ್ತು ವಿಧ್ಯಾರ್ಥಿಗಳಿಗೆ ಜಾಗೃತಿ ಭೇಟಿ ಕಾರ್ಯಕ್ರಮ ಹಮ್ಮಿಕೊಳ್ಳಲು ಮಂಗಳೂರು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಸಭೆಯಲ್ಲಿ ನಿರ್ಣಯಿಸಲಾಯಿತು. ಬಿಷಪ್ ಹಾವ್ಜ್ ಚರ್ಚ್ ಬಿಲ್ಡಿಂಗ್ ಕೊಡಿಯಾಲ್‌ಬೈಲ್ ಇಲ್ಲಿ ಹೋಬಳಿ ಅಧ್ಯಕ್ಷ ರೇಮಂಡ್ ಡಿಕೂನಾ ತಾಕೊಡೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ದಕ ಜಿಲ್ಲಾ ಕಸಾಪ ಸಂಘಟನಾ ಕಾರ್ಯದರ್ಶಿ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಪಿಎಂ ಜನ್ ಮನ್ ಯೋಜನೆಯಡಿ ಕಡಬ ತಾಲೂಕಿಗೆ 2.75 ಕೋಟಿ ಮಂಜೂರು ಕೊರಗ ಕಾಲೊನಿ ರಸ್ತೆ ಅಭಿವೃದ್ಧಿಗೆ ಅಲಂಕಾರಿನಲ್ಲಿ ಶಂಕುಸ್ಥಾಪನೆ ನೆರವೇರಿಸಿದ ಸಂಸದ ಕ್ಯಾ. ಚೌಟ-ಕಹಳೆ ನ್ಯೂಸ್

ಮಂಗಳೂರು: ಕೇಂದ್ರ ಸರ್ಕಾರದ ಪಿಎಂ ಜನ್ ಮನ್ ಯೋಜನೆಯಡಿ ಕಡಬ ತಾಲೂಕಿನ ರಾಮಕುಂಜ, ಪೆರಾಬೆ, ಅಲಂಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪರಕ್ಕಾಲು ಕೊರಗ ಕಾಲೊನಿಯ ರಸ್ತೆ ಅಭಿವೃದ್ಧಿಗೆ 2.75 ಕೋಟಿ ರೂ. ಅನುದಾನ ಮಂಜೂರು ಆಗಿದ್ದು, ದಕ್ಷಿಣ ಕನ್ನಡ ಸಂಸದ ಕ್ಯಾ.  ಅವರು ಇಂದು ಅಲಂಕಾರಿನಲ್ಲಿ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಈ ವೇಳೆ ಮಾತನಾಡಿದ ಸಂಸದ ಕ್ಯಾ. ಚೌಟ ಅವರು, ದೇಶದಲ್ಲಿ ಬಡವರ್ಗದ ಶೋಷಿತ ಕುಟುಂಬಸ್ಥರಿಗೆ ಮೂಲಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಪ್ರಧಾನ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ಪ್ಲಾಸ್ಟಿಕ್ ಪಾರ್ಕ್ ಯೋಜನೆ ಅನುಷ್ಠಾನ ವಿಳಂಬ ವಿವಾದಿತ ಭೂಮಿ ಕೈಬಿಟ್ಟು ಪರಿಷ್ಕೃತ ಯೋಜನೆ ರೂಪಿಸಲು ಕೆಐಎಡಿಬಿಗೆ ಸೂಚಿಸಿದ ಸಂಸದ ಕ್ಯಾ.ಚೌಟ-ಕಹಳೆ ನ್ಯೂಸ್

ಮಂಗಳೂರು: ಮಂಗಳೂರು ಹೊರವಲಯದ ಗಂಜಿಮಠ ಪ್ಲಾಸ್ಟಿಕ್‌ ಪಾರ್ಕ್‌ ಸ್ಥಾಪನೆ ಯೋಜನೆಗೆ ಭೂಸ್ವಾಧೀನ ತಕರಾರಿನಿಂದಾಗಿ ಹಿನ್ನಡೆಯಾಗಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ(ಕೆಐಎಡಿಬಿ) ಮುಖ್ಯ ಎಂಜಿನಿಯರ್‌ಗೆ ಪತ್ರ ಬರೆದಿದ್ದು, ಭೂವಿವಾದಿತ 9.33 ಎಕರೆ ಜಾಗ ಕೈಬಿಟ್ಟು ಪರಿಷ್ಕೃತ ಯೋಜನೆ ಸಿದ್ಧಪಡಿಸಿ ಶೀಘ್ರ ಅದರ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳುವಂತೆ ಸಲಹೆ ನೀಡಿದ್ದಾರೆ. ಗಂಜಿಮಠದಲ್ಲಿ104 ಎಕರೆಯಲ್ಲಿ ಕರಾವಳಿಯ ಮಹಾತ್ವಾಕಾಂಕ್ಷೆಯ ಪ್ಲಾಸ್ಟಿಕ್ ಪಾರ್ಕ್ ನಿರ್ಮಾಣ ಯೋಜನೆಗೆ...
ಆರೋಗ್ಯದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರಿನಲ್ಲಿ ಓರ್ವ ವ್ಯಕ್ತಿಗೆ ಮಂಕಿಪಾಕ್ಸ್ ಸೋಂಕು ದೃಢ- ಕಹಳೆ ನ್ಯೂಸ್

ಮಂಗಳೂರು: ರಾಜ್ಯದಲ್ಲಿ ಮಂಕಿಪಾಕ್ಸ್ ಪ್ರಕರಣಗಳು ಹೆಚ್ಚುತ್ತಿವೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಓರ್ವ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ಲಕ್ಷಣಗಳು ಕಂಡುಬಂದಿದ್ದು, ವಿಕ್ಟೋರಿಯಾ ಅಸ್ಪತ್ರೆಗೆ ದಾಖಲಾಗಿದ್ದಾರೆ. ವರದಿ ಬಂದ ಬಳಿಕವಷ್ಟೇ ದೃಢವಾಗಬೇಕಿದೆ. ಈ ನಡುವೆ ಮಂಗಳೂರಿನಲ್ಲಿ ವ್ಯಕ್ತಿಯೋರ್ವರಲ್ಲಿ ಮಂಕಿಪಾಕ್ಸ್ ದೃಢವಾಗಿದೆ. 40 ವರ್ಷದ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ಸೋಂಕು ದೃಢಪಟ್ಟಿದೆ. ದುಬೈನಿಂದ ಮಂಗಳೂರಿಗೆ ಆಗಮಿಸಿದ್ದ ವ್ಯಕ್ತಿಗೆ ತೀವ್ರ ಜ್ವರ ಹಾಗೂ ಮೈಮೇಲೆ ಗುಳ್ಳೆಗಳು ಕಾಣಿಸಿಕೊಂಡಿದ್ದವು. ಪುಣೆಯ ಎನ್ ಐವಿ ಲ್ಯಾಬ್ ನಲ್ಲಿ ಸೋಂಕು ದೃಢಪಟ್ಟಿದೆ. 14...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಸಾಜ್ ಸೆಂಟರ್ ನಲ್ಲಿ ಅನೈತಿಕ ಚಟುವಟಿಕೆ ಆರೋಪ : ದಾಳಿ ನಡೆಸಿದ ಪ್ರಸಾದ್ ಅತ್ತಾವರ ನೇತೃತ್ವದ ರಾಮಸೇನಾ ಕಾರ್ಯಕರ್ತರ ಬಂಧನ – ಕಹಳೆ ನ್ಯೂಸ್

ಮಂಗಳೂರು: ಮಂಗಳೂರಿನಲ್ಲಿ ಅನೈತಿಕ ಚಟುವಟಿಕೆ ಆರೋಪ ಹಿನ್ನೆಲೆಯಲ್ಲಿ ಮಸಾಜ್ ಸೆಂಟರ್ ಮೇಲೆ ದಾಳಿ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿ ನಡೆಸಿದ ರಾಮ ಸೇನಾ ಸಂಘಟನೆಯ 9 ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಸಾದ್ ಅತ್ತಾವರ ನೇತೃತ್ವದ ರಾಮ ಸೇನೆ ಕಾರ್ಯಕರ್ತರು ನಗರದ ಬಿಜೈ ಕೆಎಸ್ಆರ್ ಟಿಸಿ ಬಳಿಯ ಮಸಾಜ್ ಸೆಂಟರ್ ಗೆ ದಾಳಿ ಮಾಡಿ ಪರಾರಿಯಾಗಿದ್ದರು. ದಾಳಿ ಬಳಿಕ ರಾಮ ಸೇನೆ ಸಂಸ್ಥಾಪಕ ಪ್ರಸಾದ್ ಅತ್ತಾವರ್ ಅವರನ್ನು ಪೊಲೀಸರು...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ದಕ್ಷಿಣ ಕನ್ನಡ ಜಿಲ್ಲಾಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪುಸ್ತಕ ಪ್ರದರ್ಶನ ,ಮಾರಾಟ ಮತ್ತು ಇತರ ಮಳಿಗೆಗಳಿಗೆ ಅವಕಾಶ -ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ 27ನೇ ಕನ್ನಡ ಸಾಹಿತ್ಯ ಸಮ್ಮೇಳನ ಇದೇ ಬರುವ ಫೆಬ್ರವರಿ 21 ಮತ್ತು 22ರಂದು ಮಂಗಳೂರು ವಿಶ್ವವಿದ್ಯಾನಿಲಯದ, ಮಂಗಳ ಸಭಾಂಗಣದಲ್ಲಿ ಡಾ.ಪ್ರಭಾಕರ ಶಿಶಿಲ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ .ಸಮ್ಮೇಳನದಲ್ಲಿ ಪುಸ್ತಕ ಪ್ರದರ್ಶನ ಮಾರಾಟ ಮತ್ತು ಇತರ ಮಳಿಗೆಗಳಿಗೆ ಅವಕಾಶವಿದೆ. ಮಳಿಗೆಗಳ ವ್ಯವಸ್ಥೆಗೆ ಜನವರಿ 31ರೊಳಗೆ ಪುಸ್ತಕ ಮಳಿಗೆ ಮತ್ತು ಇತರೆ ಮಾರಾಟ ಮಳಿಗೆ ಸಮಿತಿ ಅಧ್ಯಕ್ಷ ಪ್ರಸಾದ್ ರೈ ಕಲ್ಲಿಮಾರ್ , ಸಂಚಾಲಕರಾದ ತ್ಯಾಗಂ ಹರೇಕಳ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು: ಡಾಲಿ ಚಾಯ್‌ವಾಲಾ ಮಂಗಳೂರಿನವರಾಗಿದ್ದರೆ ಅವರ ಅಂಗಡಿ ಧ್ವಂಸ- ‘ಸ್ಟ್ರೀಟ್‌ಫುಡ್ ಫೆಸ್ಟ್‌’ಗೆ ರಾಜ್ ಬಿ.ಶೆಟ್ಟಿ ಟೀಕೆ-ಕಹಳೆ ನ್ಯೂಸ್

ಮಂಗಳೂರು: ಕುಡ್ಲ ಪ್ರತಿಷ್ಠಾನದ ವತಿಯಿಂದ ಮಂಗಳೂರಿನ ಲಾಲ್‌ಬಾಗ್-ಲೇಡಿಹಿಲ್‌ನಲ್ಲಿ ನಡೆಯುತ್ತಿರುವ ಸ್ಟ್ರೀಟ್‌‌ಫುಡ್ ಫೆಸ್ಟ್ ಬಗ್ಗೆ ಖ್ಯಾತ ನಟ, ನಿರ್ದೇಶಕ ರಾಜ್ ಬಿ. ಶೆಟ್ಟಿ ಕಟುವಾಗಿ ಟೀಕಿಸಿದ್ದಾರೆ. 'ಲಾಲ್‌ಬಾಗ್ ಸ್ಟ್ರೀಟ್ ಫುಡ್ ಫೆಸ್ಟ್‌ಗೆ ಬೀದಿಬದಿ ಚಹಾ ಮಾರಾಟಗಾರ ಡಾಲಿ ಚಾಯ್‌ವಾಲಾರನ್ನು ಅತಿಥಿಯಾಗಿ ಆಹ್ವಾನಿಸಲಾಗಿದೆ. ಆದರೆ, ಡಾಲಿಯವರು ಮಂಗಳೂರಿನವರಲ್ಲ ಎಂಬುವುದು ಖುಷಿಯ ವಿಚಾರ. ಒಂದು ವೇಳೆ ಡಾಲಿಯವರು ಮಂಗಳೂರಿನವರಾಗಿದ್ದರೆ ಅವರ ಅಂಗಡಿಗಳನ್ನು ಧ್ವಂಸ ಮಾಡಲಾಗುತ್ತಿತ್ತು' ಎಂದು ಹೇಳಿದರು. ಬಿಜೆಪಿ ಆಡಳಿತವುಳ್ಳ ಮಂಗಳೂರು ಮನಪಾವು ಇತ್ತೀಚೆಗೆ...
1 52 53 54 55 56 106
Page 54 of 106