ದೇಸಿತನ ಛಿದ್ರಗೊಳಿಸಲು ದೊಡ್ಡಮಟ್ಟದ ಸಂಚು : ಎಬಿವಿಪಿಯ ಕರ್ನಾಟಕ ದಕ್ಷಿಣ ಪ್ರಾಂತ ಕಾರ್ಯಕಾರಿಣಿ ಸಭೆಯಲ್ಲಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಾಲಕೃಷ್ಣ ಆರೋಪ – ಕಹಳೆ ನ್ಯೂಸ್
ಮಂಗಳೂರು: 'ವೈಯಕ್ತಿಕ ಸ್ವಾತಂತ್ರ್ಯ, ಭಾಷೆ, ದಲಿತ, ಬುಡಕಟ್ಟು ಸಮುದಾಯಗಳ ಹೆಸರಿನಲ್ಲಿ ಸಣ್ಣ ಪುಟ್ಟ ಚರ್ಚೆಗಳನ್ನು ಏರ್ಪಡಿಸಿ, ದೇಶ, ಸಂಸ್ಕೃತಿ, ಜೀವನ ಪದ್ದತಿಗಳ ಕುರಿತು ದೊಡ್ಡ ಮಟ್ಟದ ನಕಾರಾತ್ಮಕ ಪ್ರಚಾರ ನಡೆಸಿ ದೇಸಿತನ ಛಿದ್ರಗೊಳಿಸಲು ಸಂಚು ರೂಪಿಸಲಾಗಿದೆ' ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ನ (ಎಬಿವಿಪಿ) ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಾಲಕೃಷ್ಣ ಆರೋಪಿಸಿದರು. ಎಬಿವಿಪಿಯ ಕರ್ನಾಟಕ ದಕ್ಷಿಣ ಪ್ರಾಂತ ಕಾರ್ಯಕಾರಿಣಿ ಸಭೆಯನ್ನು ಇಲ್ಲಿ ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು. 'ಕಮ್ಯುನಿಸ್ಟ್...







