ʼಕೇಂದ್ರ ಸರ್ಕಾರದ ಪಿಎಂಇಜಿಪಿ, ಮುದ್ರಾ ಯೋಜನೆ ಫಲಾನುಭವಿಗಳ ಸಂಖ್ಯೆ ಹೆಚ್ಚಳಕ್ಕೆ ಪ್ರಯತ್ನಿಸಿ’ ದ.ಕ. ಲೀಡ್ ಬ್ಯಾಂಕ್ ಸಭೆಯಲ್ಲಿ ಬ್ಯಾಂಕ್ ಅಧಿಕಾರಿಗಳಿಗೆ ಸಂಸದ ಕ್ಯಾ. ಚೌಟ ಸೂಚನೆ-ಕಹಳೆ ನ್ಯೂಸ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ಪಿಎಂಇಜಿಪಿ ಹಾಗೂ ಮುದ್ರಾ ಯೋಜನೆಯಡಿ ಗ್ರಾಮೀಣ ಭಾಗದವರಿಗೆ ವಿಶೇಷವಾಗಿ ಮಹಿಳೆಯರು ಹಾಗೂ ಪರಿಶಿಷ್ಟ ಜಾತಿ/ಪಂಗಡ ಮತ್ತು ಹಿಂದುಳಿದ ವರ್ಗದ ಹೆಚ್ಚಿನ ಫಲಾನುಭವಿಗಳನ್ನು ತಲುಪಲು ಬ್ಯಾಂಕ್ ಗಳು ಉತ್ತೇಜನ ನೀಡಬೇಕೆಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಕರೆ ನೀಡಿದ್ದಾರೆ. ಮಂಗಳೂರು ನಗರದಲ್ಲಿರುವ ದ.ಕ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ನಡೆದ ದ.ಕ ಜಿಲ್ಲಾ ಬ್ಯಾಂಕುಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ...





