Friday, March 13, 2026

ಮಂಗಳೂರು

ದಕ್ಷಿಣ ಕನ್ನಡಮಂಗಳೂರು

ಕೆನರಾ ನಂದಗೋಕುಲ್ ಕೊಡಿಯಾಲ್ ಬೈಲ್, ಪದವಿನಂಗಡಿ ಹಾಗೂ ಕೆನರಾ ಇಂಟರ್ನ್ಯಾಷನಲ್ ಶಾಲೆ ಆಶ್ರಯದಲ್ಲಿ ಅಷ್ಟಮಿ ಕಾರ್ಯಕ್ರಮ – ಕಹಳೆ ನ್ಯೂಸ್

ಮಂಗಳೂರು: ಇಂದು ಕೆನರಾ ನಂದಗೋಕುಲ್ ಕೊಡಿಯಾಲ್ ಬೈಲ್ ಮತ್ತು ಪದವಿನಂಗಡಿ ಶಾಖೆ ಹಾಗೂ ಕೆನರಾ ಇಂಟರ್ನ್ಯಾಷನಲ್ ಶಾಲೆಯ ಆಶ್ರಯದಲ್ಲಿ ಶ್ರೀ ಸುಧೀಂದ್ರ ಸಭಾಂಗಣದಲ್ಲಿ ಅಷ್ಟಮಿ ಉತ್ಸವದ ಶುಭಕಾಮನೆಯೊಂದಿಗೆ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯು ಮನಮುಟ್ಟಿದ ಭಜನೆಯೊಂದಿಗೆ ಪ್ರಾರಂಭಗೊಂಡು, ಮಕ್ಕಳು ಮುದ್ದು ಕೃಷ್ಣ ಮತ್ತು ರಾಧೆಯ ವೇಷದಲ್ಲಿ ಕಣ್ಮನಸಿಗೆ ಹತ್ತಿದ ನೃತ್ಯ ಪ್ರದರ್ಶಿಸಿದರು. ಇದಕ್ಕೆ ಹೆಚ್ಚಾಗಿ ಮಕ್ಕಳಿಂದ ಕೃಷ್ಣನ ಹಾಡುಗಳ ಮೇಲೆ ನೃತ್ಯ ಪ್ರದರ್ಶನ ನಡೆಯಿತು. ನಂತರ, ಕೃಷ್ಣ ಕಥೆಯ...
ಕಾರ್ಕಳಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಕಾರ್ಕಳ ಅತ್ಯಾಚಾರ ಪ್ರಕರಣ ರಾಜ್ಯ ಸರ್ಕಾರದ ವೈಫಲ್ಯಕ್ಕೆ ಹಿಡಿದ ಕೈಗನ್ನಡಿ : ಡ್ರಗ್ಸ್ ಮಾಫಿಯಾ ಮಟ್ಟ ಹಾಕಲು ಸಂಸದ ಕ್ಯಾ. ಚೌಟ ಒತ್ತಾಯ– ಕಹಳೆ ನ್ಯೂಸ್

ಮಂಗಳೂರು: ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವುದು ಅತ್ಯಂತ ಹೇಯ ಕೃತ್ಯವಾಗಿದ್ದು, ಕರ್ನಾಟಕದ ಕಾನೂನು ಸುವ್ಯವಸ್ಥೆ ದಿನದಿಂದ ದಿನಕ್ಕೆ ಹದಗೆಡುತ್ತಿದೆ ಎಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.  ಕಾರ್ಕಳದಲ್ಲಿ ಹಿಂದೂ ಯುವತಿಯನ್ನು ಅಲ್ತಾಫ್,  ಸವೇರಾ ರಿಚರ್ಡ್ ಕಾರ್ಡೋಜಾ ಹಾಗೂ ಅವರ ಸಹಚರ ಆರೋಪಿಗಳು ಅಪಹರಿಸಿ ಮಾದಕ ದ್ರವ್ಯ ನೀಡಿ ಗ್ಯಾಂಗ್ ರೇಪ್ ನಡೆಸಿ ಅಟ್ಟಹಾಸ ಮೆರೆದಿದ್ದು, ಇಂತಹ ವಿಕೃತ ಕೃತ್ಯ ಖಂಡನೀಯ. ಈ ದುರುಳರ ಕೃತ್ಯದಿಂದ ರಾಜ್ಯವೇ ತಲೆತಗ್ಗಿಸುವಂತಾಗಿದ್ದು, ಕರಾವಳಿಯಲ್ಲಿ ಡ್ರಗ್ಸ್ ದಂಧೆ ಮಿತಿ ಮೀರಿದೆ ಎನ್ನುವುದಕ್ಕೆ  ಈ ಪ್ರಕರಣವೇ ಜ್ವಲಂತ ಸಾಕ್ಷಿಯಾಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.   ಕರಾವಳಿ ಭಾಗದಲ್ಲಿ ಡ್ರಗ್ಸ್ ದಂಧೆ ಮಿತಿ ಮೀರಿದ್ದು, ಇದು ಕಾನೂನುಬಾಹಿರ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುತ್ತಿದೆ ಹಾಗೂ ಅದರಿಂದ ರಾಷ್ಟ್ರೀಯ ಭದ್ರತೆಗೆ ಆತಂಕ ಸೃಷ್ಟಿಸಿ ಕಾನೂನು ವ್ಯವಸ್ಥೆಯನ್ನು ಬುಡುಮೇಲು ಮಾಡುತ್ತಿರುವ ಬಗ್ಗೆ ಇತ್ತೀಚೆಗೆ ಸಂಸತ್ತಿನಲ್ಲಿಯೂ ಧ್ವನಿಯೆತ್ತಿದ್ದು, ಇದನ್ನು ಮಟ್ಟ ಹಾಕಿ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸದನದಲ್ಲಿ ಮನವಿ ಮಾಡಿದ್ದೆ ಎಂದು ಕ್ಯಾ. ಚೌಟ ಹೇಳಿದ್ದಾರೆ.   ರಾಜ್ಯದಲ್ಲಿ ಇಂತಹ ಹೇಯ ಕೃತ್ಯಗಳು ಪದೇ ಪದೇ ಮರುಕಳಿಸುತ್ತಿರುವುದು ಕಾಂಗ್ರೆಸ್ ನೇತೃತ್ವದ ಸಿದ್ದರಾಮಯ್ಯ ಸರ್ಕಾರದ ವೈಫಲ್ಯವನ್ನು ಎತ್ತಿ ತೋರಿಸುತ್ತದೆ. ಹಿಂದೂ ಸಮಾಜದ ಹೆಣ್ಣುಮಕ್ಕಳಿಗೆ ರಕ್ಷಣೆ ಇಲ್ಲದಂದಾಗಿದೆ. ಗೃಹ ಇಲಾಖೆ ಈ ಕೂಡಲೇ ಎಚ್ಚೆತ್ತುಕೊಂಡು ಕಾರ್ಕಳದ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಆರೋಪಿಗಳಿಗೆ ಕಠಿಣ ಶಿಕ್ಷೆ ಗುರಿಪಡಿಸುವುದಕ್ಕೆ ಅಗತ್ಯ ಕಾನೂನು ಕ್ರಮ ಜರುಗಿಸಬೇಕು ಎಂದು ಇದೇ ಸಂದರ್ಭದಲ್ಲಿ ಒತ್ತಾಯಿಸಿದ್ದಾರೆ....
ದಕ್ಷಿಣ ಕನ್ನಡಮಂಗಳೂರುಸುದ್ದಿ

ಫಿಜ್ಜಾ ಬೈ ನೆಕ್ಸಸ್ ಮಾಲ್ ನಲ್ಲಿ ಭಾರತದ ಮೊಟ್ಟಮೊದಲ ಬಾಹ್ಯಾಕಾಶ ದಿನದ ಆಚರಣೆ- ಕಹಳೆ ನ್ಯೂಸ್ 

ಮಂಗಳೂರಿನ ಪ್ರತಿಷ್ಠಿತ ಫಿಜ್ಜಾ ಬೈ ನೆಕ್ಸಸ್ ಮಾಲ್ ನಲ್ಲಿ ತಾರೀಕು 23 ಆಗಸ್ಟ್ 2024 ರಂದು ಭಾರತದ ಮೊಟ್ಟ ಮೊದಲ "ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ" (Maiden National Space Day) ಆಚರಿಸಲಾಯಿತು. ಈ ಹಿನ್ನೆಲೆಯಲ್ಲಿ ಆಸ್ಟ್ರೋ ಕಿಡ್ಸ್ ಎಂಬ ವಿಶಿಷ್ಟ ಕಾರ್ಯಕ್ರಮವನ್ನು ಅಗಸ್ಟ್ 25ರವರೆಗೆ ನಡೆಸಲಾಗುವುದು. "ಆಸ್ಟ್ರೋ ಕಿಡ್ಸ್ ಎಂಬುದು ವಿಶೇಷವಾದ ಪ್ರದರ್ಶನ. ನಮ್ಮ ರಾಷ್ಟ್ರದ ಇಸ್ರೋ ತಯಾರಿಸಿದ , ಗಗನಕ್ಕೆ ಕಳಿಸಿಕೊಟ್ಟ ಬಾಹ್ಯಾಕಾಶ ರಾಕೆಟ್ ಗಳನ್ನು ಮತ್ತು ಸೆಟಲೈಟ್...
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು – ಕಾಂಗ್ರೆಸ್ ನಾಯಕ ಐವನ್ ಡಿಸೋಜ ಮನೆ ಮೇಲೆ ಕಲ್ಲು ತೂರಾಟ – ಕಹಳೆ ನ್ಯೂಸ್

ಮಂಗಳೂರು,ಆ.22  : ರಾಜ್ಯಪಾಲರ ವಿರುದ್ದ ಕಾಂಗ್ರೆಸ್ ನಾಯಕ, ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಅವರ ವಿವಾದಾತ್ಮಕ ಹೇಳಿಕೆ ಸಂಘರ್ಷದ ವಾತಾವರಣ ನಿರ್ಮಾಣ ಮಾಡಿದ್ದು ಮಂಗಳೂರಿನಲ್ಲಿರುವ ಐವನ್ ಡಿಸೋಜ ಅವರ ಮನೆಗೆ ಕಲ್ಲು ತೂರಾಟ ನಡೆಸಲಾಗಿದೆ. ರಾಜ್ಯಪಾಲರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ವಿಚಾರದಲ್ಲಿ ವಿರೋಧ ಪಕ್ಷಗಳು ಸಾಕಷ್ಟು ಪ್ರತಿಭಟನೆಗಳನ್ನು ನಡೆಸುವ ಆಕ್ರೋಶಗಳನ್ನು ವ್ಯಕ್ತಪಡಿಸುತ್ತಿದೆ. ಈ ಮಧ್ಯೆ ಬುಧವಾರ ರಾತ್ರಿ ಸುಮಾರು 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು ಈ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಕೂಳೂರು ಹಳೆ ಸೇತುವೆಯಲ್ಲಿ ಬಿರುಕು – ಸಂಚಾರ ಬಂದ್!!-ಕಹಳೆ ನ್ಯೂಸ್

ಮಂಗಳೂರು: ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿಯ ಪ್ರಮುಖ ಹಾಗೂ ಹಳೆಯ ಸೇತುವೆ ಕೂಳೂರು ಹಳೆ ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಈ ನಿಟ್ಟಿನಲ್ಲಿ ದುರಸ್ತಿ ಕಾಮಗಾರಿ ಪ್ರಾರಂಭವಾಗಿದೆ. ಕೆಲ ದಿನಗಳವರೆಗೆ ನಿಗದಿತ ಸಮಯದಲ್ಲಿ ಮಾತ್ರ ಸಂಚರಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ನಿರ್ಬಂಧ ಹೇರಿದೆ. ಸದ್ಯ ಕಾಮಗಾರಿ ಪ್ರಾರಂಭವಾಗಿದ್ದು, ಸಂಚಾರ ಬಂದ್ ಮಾಡಲಾಗಿದೆ. ಇಂದು ರಸ್ತೆಯುದ್ದಕ್ಕೂ ಟ್ರಾಫಿಕ್ ಜಾಮ್ ಆಗಿರುವ ದೃಶ್ಯ ಕಂಡುಬಂದಿದೆ. ವಾಹನ ಸಂಚಾರಕ್ಕೆ ಒಂದು ಕಡೆಯ ಸೇತುವೆ ಮೇಲೆ ಅವಕಾಶ ನೀಡಿದ್ದು,...
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಮಂಗಳೂರುರಾಜಕೀಯಸುದ್ದಿ

ಪಿಎಂ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ; ರಕ್ಷಿತ್‌ ಶಿವರಾಂ ವಿರುದ್ಧ ಕೇಸ್ ದಾಖಲು – ಕಹಳೆ ನ್ಯೂಸ್

ಬೆಳ್ತಂಗಡಿ, ಆ.21 : ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್‌ ಶಿವರಾಂ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಜರುಗಿಸುವಂತೆ ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಿಸಲಾಯಿತು.   ಆ.19ರಂದು ಬೆಳ್ತಂಗಡಿ ಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರತಿಭಟನೆ ನಡೆದಿತ್ತು. ಈ ಪ್ರತಿಭಟನೆಯಲ್ಲಿ ರಕ್ಷಿತ್‌ ಶಿವರಾಂ ಅವರು, ಪ್ರಧಾನಿ ಯವರೇ ಒಂದು ವಿಚಾರ ವನ್ನು ತಿಳಿದುಕೊಳ್ಳಿ, ಬಾಂಗ್ಲಾ ದೇಶದಲ್ಲಿ ಹಾಸಿಗೆ...
ಮಂಗಳೂರುಸುದ್ದಿ

ಮಂಗಳೂರು: ಮೀನುಗಾರರಿಂದ ಸಮುದ್ರ ಪೂಜೆ : ಸಮೃದ್ಧ ಮೀನುಗಾರಿಕೆಗೆ ಹಾರೈಸಿದ ಸಂಸದ ಕ್ಯಾ| ಬ್ರಿಜೇಶ್ ಚೌಟ-ಕಹಳೆ ನ್ಯೂಸ್

ಮಂಗಳೂರು: ಮೀನುಗಾರರ ಶ್ರೇಯೋಭಿವೃದ್ದಿಗಾಗಿ ತಣ್ಣೀರುಬಾವಿ ಮೊಗವೀರ ಮಹಾಸಭಾ (ರಿ) ಇದರ ವತಿಯಿಂದ ಚಿತ್ರಾಪುರ ಕಡಲ ಕಿನಾರೆಯಲ್ಲಿ ಆ. 19ರಂದು ಸಮುದ್ರ ಪೂಜೆ ನಡೆಯಿತು. ಸಮುದ್ರರಾಜನಿಗೆ ಹಾಲು, ಫಲ ಅರ್ಪಿಸಿ, ಸಮುದ್ರ ಪೂಜೆಯಲ್ಲಿ ಭಾಗಿಯಾಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟ ದ.ಕ. ಸಂಸದ ಕ್ಯಾ| ಬ್ರಿಜೇಶ್ ಚೌಟ " ಕರಾವಳಿಯಲ್ಲಿ ನೂಲ ಹುಣ್ಣಿಮೆಯಂದು ಸಮುದ್ರರಾಜನಿಗೆ ಪೂಜೆ ಸಲ್ಲಿಸುವುದು ಸಾಮಾನ್ಯ ಪ್ರತೀತಿ. ಹೊಸಋತುವಿನ ಮೀನುಗಾರಿಕೆಗೆ ತೆರಳುವ ಪ್ರತಿ ಮೀನುಗಾರರನ್ನು ಯಾವುದೇ ಪ್ರಾಣಾಪಾಯ ಇಲ್ಲದಂತೆ...
ದಕ್ಷಿಣ ಕನ್ನಡಮಂಗಳೂರುಯಕ್ಷಗಾನ / ಕಲೆಸುದ್ದಿ

ಹಿರಿಯ ಯಕ್ಷಗಾನ ಕಲಾವಿದ ಪಾತಾಳ ವೆಂಕಟರಮಣ ಭಟ್‌ ಅವರಿಗೆ “ಶೇಣಿ ಪ್ರಶಸ್ತಿ-2024′ ಪ್ರದಾನ – ಕಹಳೆ ನ್ಯೂಸ್

ಮಂಗಳೂರು: ಶೇಣಿ ಪ್ರಶಸ್ತಿ ನನ್ನ ಪಾಲಿಗೆ ದೇವರ ವರವಾಗಿದೆ. ಪ್ರಶಸ್ತಿಯ ನಿರೀಕ್ಷೆಯೇ ಇರಲಿಲ್ಲ. ಶೇಣಿ ಗೋಪಾಲಕೃಷ್ಣ ಭಟ್‌ ಅವರ ಜತೆ ಒಡನಾಟ ಹೊಂದಿ ಕಲಾಮಾತೆಯ ಸೇವೆ ಮಾಡಿದ್ದರಿಂದ ಈ ಪ್ರಶಸ್ತಿ ನನಗೆ ಒಲಿದಿರಬಹುದು ಎಂದು ಹಿರಿಯ ಯಕ್ಷಗಾನ ಕಲಾವಿದ ಪಾತಾಳ ವೆಂಕಟರಮಣ ಭಟ್‌ ಹೇಳಿದರು. ಶೇಣಿ ಗೋಪಾಲಕೃಷ್ಣ ಭಟ್‌ ಚಾರಿಟೆಬಲ್‌ ಟ್ರಸ್ಟ್‌, ಉರ್ವಸ್ಟೋರ್‌ ಶ್ರೀ ಮಹಾಗಣಪತಿ ದೇವಸ್ಥಾನದ ಸಹಯೋಗದೊಂದಿಗೆ ದೇವಸ್ಥಾನದ ವಠಾರದಲ್ಲಿ ಗುರುವಾರ ಆಯೋಜಿಸಿದ ಶೇಣಿ ಸಂಸ್ಮರಣೆ, ಪ್ರಶಸ್ತಿ ಪ್ರದಾನ...
1 78 79 80 81 82 105
Page 80 of 105