ಸುರತ್ಕಲ್: ಸುರತ್ಕಲ್ ನಗರದಲ್ಲಿ ಬಹುಕೋಟಿ ವೆಚ್ಚದ ಮಾರುಕಟ್ಟೆ ನಿರ್ಮಾಣ ಕಾಮಗಾರಿಯು ಕೊರೋನಾ ಬಳಿಕ ಮಾರುಕಟ್ಟೆಯಲ್ಲಿ ಸರಕುದರ ಏರಿಕೆ ಹಾಗೂ ಜಿಎಸ್‌ಟಿಯನ್ಬು ಟೆಂಡರ್ ನಲ್ಲಿ ತೋರಿಸದ ಹಿನ್ನಲೆಯಲ್ಲಿ ಕಾಮಗಾರಿ ಹಿನ್ನಡೆ ಕಂಡಿದ್ದು ಸತತ ಪ್ರಯತ್ನದ ಬಳಿಕ ಇದೀಗ 64 ಕೋಟಿ ವೆಚ್ಚದಲ್ಲಿ ಕಾಮಗಾರಿ ಆರಂಭವಾಗಲಿದೆ ಎಂದು ಡಾ. ಭರತ್ ಶೆಟ್ಟಿ ವೈ ತಿಳಿಸಿದ್ದಾರೆ. ಕಳೆದ ಬಾರಿ ಅಂದಾಜು 16 ಕೋಟಿಯ ಕಾಮಗಾರಿ ನಡೆದಿತ್ತು. ಬಳಿಕ ಗುತ್ತಿಗೆದಾರರು ಎಸ್ ಆರ್ ದರ ಹಾಗೂ...
ಮಂಗಳೂರು: ದಕ್ಷಿಣ ಕನ್ನಡದಲ್ಲಿ ರಂದು ರೆಡ್ ಅಲರ್ಟ್ ಘೋಷಣೆ ಮತ್ತು ನಿರಂತರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ನಾಳೆ (ಜು.16)ಎಲ್ಲಾ ಶಾಲೆಗಳು,ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ....
ಉಳ್ಳಾಲ : ಕುತ್ತಾರು ಕೊರಗಜ್ಜನ ಕಟ್ಟೆಯಲ್ಲಿ ಭಾನುವಾರ ನಡೆದ ಹರಕೆಯ ಕೋಲದಲ್ಲಿ ಬಾಲಿವುಡ್ ಖ್ಯಾತ ನಟಿ ಕತ್ರಿನಾ ಕೈಫ್, ಸೇರಿದಂತೆ ಖ್ಯಾತ ಕ್ರಿಕೆಟಿಗ ಕೆ.ಎಲ್ ರಾಹುಲ್ ಸೇರಿದಂತೆ ನಟ ಸುನಿಲ್ ಶೆಟ್ಟಿ ಕುಟುಂಬ ಭಾಗಿಯಾಗಿತ್ತು. ನಟಿ ಕತ್ರಿನಾ ಕೈಫ್, ನಟ ಸುನಿಲ್ ಶೆಟ್ಟಿ ಪುತ್ರ ಅಹಾನ್ ಶೆಟ್ಟಿ, ಪುತ್ರಿ ಆಧ್ಯಾ ಶೆಟ್ಟಿ, ಕ್ರಿಕೆಟಿಗ ಕೆ.ಎಲ್ .ರಾಹುಲ್, ಮ್ಯಾಟ್ರಿಕ್ಸ್ ಎಂಟರ್ ಟೈನ್ಮೆಂಟ್ ನ ರೇಷ್ಮಾ ಶೆಟ್ಟಿ, ಕತ್ರಿನಾ ಪತಿ ವಿಕಿ ಕೌಶಲ್ ಹಾಗೂ...
ಮಂಗಳೂರು: ದಕ್ಷಿಣ ಕನ್ನಡದಲ್ಲಿ ರಂದು ರೆಡ್ ಅಲರ್ಟ್ ಘೋಷಣೆ ಮತ್ತು ನಿರಂತರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಇಂದು (ಜು.15)ಎಲ್ಲಾ ಶಾಲೆಗಳು,ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ....
ದಕ್ಷಿಣ ಕನ್ನಡದ ರೈಲು ಪ್ರಯಾಣಿಕರ ಪರವಾಗಿ ಮತ್ತು ಸಾಮಾನ್ಯ ನಾಗರಿಕರ ಪರವಾಗಿ ಸಂಸದರು ಕೋರಿದ ಮನವಿ ಮೇರೆಗೆ, ಮಾನ್ಯ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ಶ್ರೀ ವಿ. ಸೋಮಣ್ಣ ಅವರು ಮಂಗಳೂರಿಗೆ ಆಗಮಿಸಿ ಸಭೆ ನಡೆಸಲು ಒಪ್ಪಿಗೆ ನೀಡಿದ್ದಾರೆ. ಬೆಳಿಗ್ಗೆ 09.00 ರಿಂದ 09.45 ರ ವರೆಗೆ ಮಂಗಳೂರು ಸೆಂಟ್ರಲ್ ರೇಲ್ವೆ ನಿಲ್ದಾಣದ ವೀಕ್ಷಣ, 10.00 ರಿಂದ 10.45 ರ ವರೆಗೆ ಮಂಗಳೂರು ಜಂಕ್ಷನ್ ರೇಲ್ವೆ ನಿಲ್ದಾಣದ ವೀಕ್ಷಣೆ...
ದಕ್ಷಿಣ ಕನ್ನಡದ ನಾಗರಿಕರ ಪರವಾಗಿ ಮತ್ತು ವಿಶೇಷವಾಗಿ ರೈಲು ಪ್ರಯಾಣಿಕರ ಪರವಾಗಿ, ನಮ್ಮ ಜಿಲ್ಲೆಯ ರೈಲ್ವೆ ಸಮಸ್ಯೆಗಳನ್ನು ಪರಿಹರಿಸಲು ಮಾನ್ಯ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ಶ್ರೀ ವಿ. ಸೋಮಣ್ಣರನ್ನು ಮಂಗಳೂರಿನಲ್ಲಿ ಸಭೆ ನಡೆಸುವಂತೆ ಪತ್ರ ಬರೆದು ವಿನಂತಿಸಲಾಗಿದೆ. ಈ ಸಭೆಯಲ್ಲಿ ಪ್ರಮುಖ ಎರಡು ವಿಷಯಗಳ ಕುರಿತು ಚರ್ಚೆ ನಡೆಸುವ ಉದ್ದೇಶವಿದೆ. ಕೊಂಕಣ ರೈಲ್ವೆ ಮತ್ತು ಭಾರತೀಯ ರೈಲ್ವೆಯ ವಿಲೀನ: ಇದು ಕೊಂಕಣ ಭಾಗದಲ್ಲಿ ಪ್ರಯಾಣಿಸುತ್ತಿರುವ ಪ್ರಯಾಣಿಕರ ಬಹುಕಾಲದ...
ರಾಹುಲ್ ಗಾಂಧಿ ವಿರುದ್ಧ ಹೇಳಿಕೆ ನೀಡಿದ ಆರೋಪದಡಿ ಶಾಸಕ ಡಾ.ಭರತ್ ಶೆಟ್ಟಿಯವರ ಮೇಲೆ ಕಾಂಗ್ರೆಸ್ ನಾಯಕರ ಆಣತಿಯಂತೆ ರಾಜಕೀಯ ಪ್ರೇರಿತ ಪ್ರಕರಣ ದಾಖಲಾಗಿದ್ದನ್ನು ಶಾಸಕ ವೇದವ್ಯಾಸ ಕಾಮತ್ ಅವರು ತೀವ್ರವಾಗಿ ಖಂಡಿಸಿದರು. ವಿದೇಶದಲ್ಲಿದ್ದಾಗ ಭಾರತದ ವಿರುದ್ದ, ಸ್ವದೇಶದಲ್ಲಿದ್ದಾಗ ಹಿಂದೂಗಳ ವಿರುದ್ಧ ಹೇಳಿಕೆ ನೀಡುವ ರಾಹುಲ್ ಗಾಂಧಿಗೆ ಪ್ರತಿಭಟನೆ ಮೂಲಕ ಬಿಸಿ ಮುಟ್ಟಿಸದೇ ಹಾರ ಹಾಕಿ ಗೌರವಿಸಬೇಕಿತ್ತಾ? ಅಥವಾ ಬಹುಮಾನ ಘೋಷಿಸಬೇಕಿತ್ತಾ? ಕಾಂಗ್ರೆಸ್ಸಿಗರಿಗೆ ಅಂತಹ ದುರ್ಗತಿ ಬಂದಿರಬಹುದು. ನಮ್ಮದು ಎಂದಿಗೂ ರಾಷ್ಟ್ರ...