ಮಂಗಳೂರು ಜೈಲಲ್ಲಿ 2 ಗುಂಪುಗಳ ನಡುವೆ ಹಲ್ಲೆ | ಮುಹಮ್ಮದ್ ಸಮೀರ್ ಅಲಿಯಾಸ್ ಕಡಪರ ಸಮೀರ್, ಮುಹಮ್ಮದ್ ಮನ್ಸೂರ್ ಇಬ್ಬರಿಗೆ ಗಾಯ ; ರೌಡಿ ಶೀಟರ್ ಮುಹಮ್ಮದ್ ರಿಜ್ವಾನ್ ಮತ್ತು ತಂಡದಿಂದ ಕೃತ್ಯ – ಕಹಳೆನ್ಯೂಸ್
ಮಂಗಳೂರು: ಮಂಗಳೂರು ಜೈಲಿನಲ್ಲಿ ಎರಡು ಗುಂಪುಗಳ ಮಧ್ಯೆಮಾರಾಮಾರಿ ನಡೆದಿದ್ದು, ಇಬ್ಬರು ವಿಚಾರಣಾಧೀನ ಕೈದಿಗಳಿಗೆ ಗಾಯಗಳಾಗಿವೆ. ಹರಿತವಾದ ವಸ್ತುಗಳಿಂದ ಹಲ್ಲೆ ಮಾಡಿದ್ದರಿಂದ ಗಂಭೀರವಾಗಿ ಗಾಯಗೊಂಡ ಇಬ್ಬರು ಆರೋಪಿಗಳನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳ್ಳಾಲ ನಿವಾಸಿ ಮುಹಮ್ಮದ್ ಸಮೀರ್ ಅಲಿಯಾಸ್ ಕಡಪರ ಸಮೀರ್(33) ಹಾಗೂ ಬೋಳಿಯಾರ್ ನಿವಾಸಿ ಮುಹಮ್ಮದ್ ಮನ್ಸೂರ್ (30) ಗಾಯಾಳುಗಳು. ಮುಫದ್ ರಿಫಾತ್ (28), ಮುಹಮ್ಮದ್ ರಿಜ್ವಾನ್ (34), ಇಬ್ರಾಹಿಂ ಕಲ್ಲೆಲ್ (30), ಉಮರ್ ಫಾರೂಕ್ ಇರ್ಫಾನ್, ಅಲ್ತಾಫ್, ನೌಫಲ್,...







