Sunday, October 25, 2026

ಮಡಿಕೇರಿ

ಜಿಲ್ಲೆಮಡಿಕೇರಿಸುದ್ದಿ

ಮಡಿಕೇರಿಯಲ್ಲಿ ಮಳೆಯಬ್ಬರ – ಪೊನ್ನೋಲ ಸಾಸ್ಥಾವು ದೇವಾಲಯದ ಮುಂಭಾಗ ಭೂಕುಸಿತ -ಕಹಳೆ ನ್ಯೂಸ್

ಮಡಿಕೇರಿ: ತಾಲೂಕಿನ ಚೇಲಾವರದಲ್ಲಿ ಭಾರೀ ಮಳೆಯಿಂದಾಗಿ ಪೊನ್ನೋಲ ಸಾಸ್ಥಾವು ದೇವಾಲಯದ ಮುಂಭಾಗ ಭೂಕುಸಿತ  ಸಂಭವಿಸಿದೆ. ಭೂಕುಸಿತದಿಂದ ದೇವಾಲಯಕ್ಕೆ ಸಂಪರ್ಕಿಸುವ ರಸ್ತೆ ಸಂಪೂರ್ಣ ಹಾನಿಯಾಗಿದೆ. ಮೆಟ್ಟಿಲುಗಳು ಕುಸಿದು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ದೇವಾಲಯಕ್ಕೆ ಬರುವ ಭಕ್ತರು ಎಚ್ಚರಿಕೆಯಿಂದ ಬರುವಂತೆ ಅಧಿಕಾರಿಗಳು ತಿಳಿಸಿದ್ದಾರೆ. ರಸ್ತೆ ಮತ್ತು ಮೆಟ್ಟಿಲು ಹಾನಿಯಿಂದ ಅಪಾರ ನಷ್ಟವಾಗಿದೆ. ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ....
ಜಿಲ್ಲೆಮಡಿಕೇರಿಸುದ್ದಿ

ಕೊಡಗಿನಲ್ಲಿ ಮಳೆಯ ಅಬ್ಬರ – ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಏರಿಕೆ – ಕಹಳೆ ನ್ಯೂಸ್

ಮಡಿಕೇರಿ: ಕೊಡಗು  ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಮಳೆ ಬಿರುಸು ಪಡೆಯುತ್ತಿದೆ. ಕಳೆದ ಎರಡು ದಿನದಿಂದ ಜಿಲ್ಲೆಯಲ್ಲಿ ಗಾಳಿ ಮಳೆ ಚುರುಕು ಪಡೆದಿದ್ದು, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ತಲಕಾವೇರಿ ಭಾಗಮಂಡಲ ವ್ಯಾಪ್ತಿಯಲ್ಲೂ ಉತ್ತಮ ಮಳೆಯಾಗುತ್ತಿದೆ. ಇದರಿಂದಾಗಿ ಕಾವೇರಿ ನದಿ ನೀರಿನ ಮಟ್ಟ ಏರಿಕೆಯಾಗಿದ್ದು, ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟದಲ್ಲಿ ಏರಿಕೆ ಕಂಡಿದೆ. ಹಾರಂಗಿ ಜಲಾನಯನ ಪ್ರದೇಶದಲ್ಲೂ ಉತ್ತಮ ಮಳೆಯಾಗುತ್ತಿದೆ. ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದಿನ...
ಜಿಲ್ಲೆಮಡಿಕೇರಿಸುದ್ದಿ

ಹಿಂದೂ ದೇವಾಲಯ ಆವರಣಕ್ಕೆ ಅಕ್ರಮವಾಗಿ ನುಗ್ಗಿ ಮುಸ್ಲಿಂ ಸಂಪ್ರದಾಯದ ʻಸಮಾಧಿ ಪೂಜೆʼ ಆಚರಣೆ : ಹಿಂದೂಪರ ಸಂಘಟನೆಗಳಿಂದ ತೀವ್ರ ಆಕ್ರೋಶ -ಕಹಳೆ ನ್ಯೂಸ್

ಮಡಿಕೇರಿ: ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಗದ್ದಿ ಬೆಟ್ಟದ ಶ್ರೀ ಸಿದ್ದೇಶ್ವರ ದೇವಾಲಯದ ಆವರಣದಲ್ಲಿ ನಡೆದಿರುವ ಘಟನೆಯೊಂದು ಭಾರೀ ವಿವಾದಕ್ಕೆ ಕಾರಣವಾಗಿದೆ. ದೇವಾಲಯದ ಆವರಣಕ್ಕೆ ಪ್ರವೇಶಿಸಿ ಕೆಲವರು ಮುಸ್ಲಿಂ ಸಂಪ್ರದಾಯದಂತೆ `ಚಾದರ್ ಚಢಾನಾ’   ಆಚರಣೆ ನಡೆಸಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧದ ವಿಡಿಯೋ ಹಾಗೂ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಘಟನೆಯನ್ನ ಖಂಡಿಸಿ ಸ್ಥಳೀಯರು ಹಾಗೂ ಹಿಂದೂ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿದ್ದು, ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ...
ಮಡಿಕೇರಿಸುದ್ದಿ

ಹಾರಂಗಿ ಡ್ಯಾಮ್‌ನಿಂದ 5,000 ಕ್ಯೂಸೆಕ್ ನೀರು ಬಿಡುಗಡೆ ಸಾಧ್ಯತೆ : ಕಾವೇರಿ ನದಿಗೆ ಇಳಿಯದಂತೆ ಎಚ್ಚರಿಕೆ – ಕಹಳೆ ನ್ಯೂಸ್

ಮಡಿಕೇರಿ: ಕಳೆದ ಒಂದು ವಾರದಿಂದ ಕೊಡಗು ಜಿಲ್ಲೆಯಲ್ಲಿ ಉತ್ತಮ  ಮಳೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಕುಶಾಲನಗರ ತಾಲೂಕಿನ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಳವಾಗುತ್ತಿದ್ದು, ಯಾವುದೇ ಕ್ಷಣದಲ್ಲಾದರೂ ಭಾರೀ ಪ್ರಮಾಣದ ನೀರು ಬಿಡುಗಡೆ ಮಾಡುವ ಸಾಧ್ಯತೆ ಇದೆ. ಭಾರೀ ಮಳೆಯಿಂದ ಜಲಾಶಯ ಶೀಘ್ರದಲ್ಲೇ ಗರಿಷ್ಠ ಮಟ್ಟ ತಲುಪುವ ಸಾಧ್ಯತೆ ಇದೆ. ಇದರಿಂದ ಇಂದು (ಜು.25) ಮಧ್ಯಾಹ್ನದ ವೇಳೆ ಕಾವೇರಿ ನದಿಗೆ ನೀರು ಹರಿಸುವ ಸಾಧ್ಯತೆ ಇದೆ. ಮಧ್ಯಾಹ್ನ 3 ಗಂಟೆ ಸುಮಾರಿಗೆ...
ಜಿಲ್ಲೆಮಡಿಕೇರಿಸುದ್ದಿ

ಸ್ಟಾಕ್‌ ಮಾರ್ಕೆಟ್‌ನಲ್ಲಿ ಲಾಸ್‌ : ಗುಂಡು ಹಾರಿಸಿಕೊಂಡು ಕೊಡಗಿನ ಯುವಕ ಆತ್ಮಹತ್ಯೆ -ಕಹಳೆ ನ್ಯೂಸ್

ಮಡಿಕೇರಿ: ಗುಂಡು ಹಾರಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ  ಮಾಡಿಕೊಂಡಿರುವ ಘಟನೆ ನಾಪೋಕ್ಲು ಸಮೀಪದ ಕುಂಬಳದಾಳು ಬಳಿ ನಡೆದಿದೆ. ಕವನ್ (24) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ನಾಪೋಕ್ಲು ಪೊಲೀಸ್ ಠಾಣಾ  ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನೆ ಬಳಿಕ ಕವನ್ ಮೃತದೇಹವನ್ನ ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮೇಲ್ನೋಟಕ್ಕೆ ಕವನ್‌ ಸ್ಟಾಕ್ ಮಾರ್ಕೇಟ್ ನಲ್ಲಿ ಹಣ ಕಳೆದುಕೊಂಡಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ....
ಕೊಡಗುಜಿಲ್ಲೆಮಡಿಕೇರಿಸುದ್ದಿ

ಎಲ್‌ಇಡಿ ಬಲ್ಬ್‌ ನುಂಗಿದ ಎಂಟು ತಿಂಗಳ ಕಂದಮ್ಮ – ಕಹಳೆ ನ್ಯೂಸ್

ಮಡಿಕೇರಿ: ಎಂಟು ತಿಂಗಳ ಕಂದಮ್ಮ ಎಲ್‌ಇಡಿ ಬಲ್ಬ್  ನುಂಗಿದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ  ನಗರದಲ್ಲಿ ನಡೆದಿದೆ. ಮನೆಯಲ್ಲಿದ್ದ ವೇಳೆ ಮಗು ಏಕಾಏಕಿ ವಿಪರೀತವಾಗಿ ಅಳಲು ಶುರುಮಾಡಿದ್ದು, ಗಾಬರಿಗೊಂಡ ಪೋಷಕರು ಕಾರಣ ತಿಳಿಯದೇ ಕೂಡಲೇ ಮಡಿಕೇರಿ ನಗರದ ಆಸ್ಪತ್ರೆಗೆ ಕರೆತಂದಿದ್ದಾರೆ.  ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿದ್ದಾರೆ. ಬಳಿಕ ಎಕ್ಸ್‌ರೇ (X-ray) ತೆಗೆಸಿ ನೋಡಿದಾಗ ಮಗುವಿನ ಗಂಟಲು ಭಾಗದಲ್ಲಿ ಸಣ್ಣ ಲೋಹದ ವಸ್ತು ಇರುವುದನ್ನು ವೈದ್ಯರು ಪತ್ತೆ ಹಚ್ಚಿದ್ದಾರೆ. ಆರಂಭದಲ್ಲಿ ಪಿನ್...
ಕೊಡಗುಜಿಲ್ಲೆಮಡಿಕೇರಿಸುದ್ದಿ

ಕೊಡಗಿನ ತಾಯಿ-ಮಗು ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ : ಮತಾಂತರ & ಲವ್ ಜಿಹಾದ್‌ಗೆ ದೊಡ್ಡ ಸಂಚು -ಕಹಳೆ ನ್ಯೂಸ್

ಮಡಿಕೇರಿ: ಒಂದೂವರೆ ತಿಂಗಳ ಹಿಂದೆ ಕೊಡಗಿನ  ಕುಶಾಲನಗರದಿಂದ ನಾಪತ್ತೆಯಾಗಿದ್ದ ಸಚಿತಾ ಹಾಗೂ ಆಕೆಯ 9 ವರ್ಷದ ಮಗು ಕೇರಳ ರಾಜ್ಯದ ಮಲಪ್ಪುರಂ ಜಿಲ್ಲೆಯ ಮದರಸವೊಂದರಲ್ಲಿ ಪತ್ತೆಯಾಗಿದ್ದಾರೆ. ಈ ಪ್ರಕರಣದ ಹಿಂದೆ ಮತಾಂತರ ಹಾಗೂ ಲವ್ ಜಿಹಾದ್‌ನ  ದೊಡ್ಡ ಸಂಚು ಇದೆ ಎಂದು ಕುಶಾಲನಗರದ ಹಿಂದೂಪರ ಸಂಘಟನೆಗಳು ಆರೋಪಿಸಿವೆ. ಮಲಪ್ಪುರಂ ಜಿಲ್ಲೆಯ ಪೊನ್ನಾಣಿ ಹಾಗೂ ಮಂಜೇರಿ ಭಾಗಗಳಲ್ಲಿ ಮತಾಂತರ ಜಾಲ ಕಾರ್ಯನಿರ್ವಹಿಸುತ್ತಿದೆ ಎಂಬ ಆರೋಪವನ್ನೂ ಮಾಡಿವೆ. ಕುಶಾಲನಗರ ಬಳಿಯ ಎನ್‌ಟಿಸಿ ಕಾಂಪ್ಲೆಕ್ಸ್‌ನ...
ಮಡಿಕೇರಿಸುದ್ದಿ

ಸಿನಿಮೀಯ ಶೈಲಿಯಲ್ಲಿ 40 ಅಡಿ ಕಂದಕಕ್ಕೆ ಉರುಳಿದ ಕಾರು : ಚಾಲಕ ಪಾರು -ಕಹಳೆ ನ್ಯೂಸ್

ಮಡಿಕೇರಿ: ಸಿನಿಮೀಯ ಶೈಲಿಯಲ್ಲಿ 40 ಅಡಿ ಆಳದ ಕಂದಕಕ್ಕೆ ಕಾರು (Car) ಉರುಳಿ ಬಿದ್ದ ಘಟನೆ ಮಡಿಕೇರಿ-ಮೂರ್ನಾಡು ರಸ್ತೆಯಲ್ಲಿ ನಡೆದಿದೆ. ಆಲ್ವೇಸ್ ಸರ್ವಿಸ್ ಸ್ಟೇಷನ್ ಸಮೀಪ ಘಟನೆ ನಡೆದಿದ್ದು, ಮೂರ್ನಾಡು ಕಡೆಯಿಂದ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಕಂದಕಕ್ಕೆ ಉರುಳಿ ಬಿದ್ದಿದೆ. ಅಪಘಾತದಿಂದ ವಾಹನಕ್ಕೆ ಭಾರೀ ಹಾನಿಯಾಗಿದೆ. ಕಾರಿನ ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಮಡಿಕೇರಿ ನಗರದ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ...
1 2 3 … 11
Page 1 of 11