ಶೃಂಗೇರಿ ಬಳಿ ಇಬ್ಬರನ್ನು ಕೊಂದಿದ್ದ ಆನೆ ಸೆರೆ-ಕಹಳೆ ನ್ಯೂಸ್
ಚಿಕ್ಕಮಗಳೂರು: ಶೃಂಗೇರಿ ತಾಲೂಕಿನ ಕೆರೆಕಟ್ಟೆ ಗ್ರಾಮ ಸಮೀಪ ಕೆರೆಗದ್ದೆ ಗ್ರಾಮದ ಉಮೇಶ್ಗೌಡ ಹಾಗೂ ಹರೀಶಶೆಟ್ಟಿ ಅವರನ್ನು ಬಲಿ ಪಡೆದ ಒಂಟಿ ಸಲಗವನ್ನು ಕಾರ್ಕಳ ವನ್ಯಜೀವಿ ವಿಭಾಗದ ಭಗವತಿ ಬಳಿ ಅರಣ್ಯ ಇಲಾಖೆ ಸೆರೆ ಹಿಡಿದಿದೆ. ಕಾಡಿನಲ್ಲಿ ಸೊಪ್ಪು ತರಲು ಹೋಗಿದ್ದ ಇಬ್ಬರ ಮೇಲೆ ಶುಕ್ರವಾರ ಬೆಳಿಗ್ಗೆ ಆನೆ ದಾಳಿ ನಡೆಸಿತ್ತು. ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದರು. ಕಾಡಾನೆಗಳನ್ನು ಹಿಡಿದು ಸ್ಥಳಾಂತರ ಮಾಡುವಂತೆ ಆಗ್ರಹಿಸಿ ಸ್ಥಳೀಯರು ದಿನವಿಡೀ ರಸ್ತೆ ಸಂಚಾರ ತಡೆದು ಪ್ರತಿಭಟನೆ...




