ಶ್ರೀರಾಮ ಪದವಿ ಮಹಾವಿದ್ಯಾಲಯದ ಪ್ರದೀಪ್ತ ಸಾಂಸ್ಕøತಿಕ ಸಂಘದ ಉದ್ಘಾಟನೆ-ಕಹಳೆ ನ್ಯೂಸ್
ಬಂಟ್ವಾಳ : ಜನವರಿ 26 ಶ್ರೀರಾಮ ಪದವಿ ಮಹಾವಿದ್ಯಾಲಯದ ಪ್ರದೀಪ್ತ ಸಾಂಸ್ಕೃತಿಕ ಸಂಘವನ್ನು ಖ್ಯಾತ ಯಕ್ಷಗಾನ ಹಾಸ್ಯಕಲಾವಿದ ದಿನೇಶ್ ಕೊಡಪದವು ಇವರು ಉದ್ಘಾಟಿಸಿದರು. ನಿಜವಾದ ಸಂಸ್ಕೃತಿ, ಸಾಂಸ್ಕೃತಿಕ ವೈಭವವನ್ನು ನೋಡಲು ಶ್ರೀರಾಮ ವಿದ್ಯಾಕೇಂದ್ರಕ್ಕೆ ಬರಬೇಕು ಎಂದವರು ವಿದ್ಯಾರ್ಥಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಸದಸ್ಯರಾದ ನಾಗೇಶ್ ಇರಾ, ಶ್ರೀಮತಿ ಲಕ್ಷ್ಮಿ ರಘುರಾಜ್ ಹಾಗೂ ಪ್ರಾಚಾರ್ಯರಾದ ಕೃಷ್ಣ ಪ್ರಸಾದ್ ಕಾಯರ್ ಕಟ್ಟೆ ಇವರು ಉಪಸ್ಥಿತರಿದ್ದರು. ಇದಾದ ಬಳಿಕ...







