ಬಂಟ್ವಾಳ: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಡಿಸೆಂಬರ್ 23 ರಿಂದ 29 ರವರೆಗೆ ದತ್ತ ಜಯಂತಿ ಮಹೋತ್ಸವವು ನಡೆಯುತ್ತದೆ. ನಿನ್ನೆ ನಡೆದ ದತ್ತ ಜಯಂತಿ ಮಹೋತ್ಸವದಲ್ಲಿ ಶ್ರೀ ದತ್ತ ಮಹಾಯಾಗ ಸಪ್ತಾಹವು ವಿವಿಧ ಧಾರ್ಮಿಕ ಕಾರ್ಯಕ್ರಮ ಮತ್ತು ಶ್ರೀಗಳ ಷಷ್ಠ್ಯಬ್ದ ಸಂಭ್ರಮಕ್ಕೆ ಒಡಿಯೂರು ಶ್ರೀ ಗುರುದೇವದತ್ತ ಸ್ವಾಮೀಜಿ ಚಾಲನೆ ನೀಡಿದರು. ಶ್ರೀ ಗುರುದೇವಾನಂದ ಸ್ವಾಮೀಜಿಯವರ ಷಷ್ಠ್ಯಬ್ದ ಕೇಂದ್ರ ಸಮಿತಿ ಕಾರ್ಯಧ್ಯಕ್ಷ ಪದ್ಮನಾಭ ಕೊಟ್ಟಾರಿ ಅವರು ಒಡಿಯೂರು ಸಂಸ್ಥಾನದಿಂದ ಸಮಾಜದಲ್ಲಿರುವ ಕಟ್ಟಕಡೆಯ...
ಬಂಟ್ವಾಳ: ಬಂಟ್ವಾಳ ತಾಲೂಕಿನ 57 ಗ್ರಾಮ ಪಂಚಾಯತಿಗಳ 822 ಸ್ಥಾನಗಳಿಗೆ ನಿನ್ನೆ ನಡೆದ ಚುನಾವಣೆಯಲ್ಲಿ ಶೇ.77.7 ಮತದಾನವಾಗಿದೆ.ನಿನ್ನೆ ಸಂಜೆ ಚುನಾವಣಾ ಶಾಖೆಯ ಕಂಟ್ರೋಲ್ ರೂಮ್ ನೀಡಿದ ಮಾಹಿತಿ ಪ್ರಕಾರ, ಒಟ್ಟು 2,77,133 ಮತದಾರರ ಪೈಕಿ 2,15,535 ಮಂದಿ ಮತ ಚಲಾಯಿಸಿದ್ದಾರೆ. ಇವರಲ್ಲಿ 1,04,156 ಪುರುಷರು, 1,11,376 ಮಹಿಳೆಯರು ಮತ್ತು 3 ಇತರರು. ಮತದಾನ ಪೂರ್ಣಗೊಂಡ ಕೂಡಲೇ ಮತಪೆಟ್ಟಿಗೆಗಳನ್ನು ಭದ್ರಪಡಿಸಿ, ಮೊಡಂಕಾಪು ಇನ್ಫೆಂಟ್ ಜೀಸಸ್ ಶಾಲೆಯಲ್ಲಿರುವ ಮೂರು ಸ್ಟ್ರಾಂಗ್ ರೂಮ್ ಗಳಿಗೆ...
ಬಂಟ್ವಾಳ: ಮಂಗಳೂರು ತಾಲೂಕಿನ ತೆಂಕ ಎಡಪದವು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಇಂದು ಗ್ರಾಮ ಪಂಚಾಯತ್ ಚುನಾವಣೆ ನಡೆಯಿತು. ಈ ಚುನಾವಣೆಯಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಪಂಚಾಯತ್ ಚುನಾವಣೆಯಲ್ಲಿ ಅಭ್ಯರ್ಥಿಯಾಗಿ ಮತ ಚಲಾಯಿಸಿದರು....
ಬಂಟ್ವಾಳ: ಬಂಟ್ವಾಳ ತಾಲೂಕಿನ 57 ಗ್ರಾಮ ಪಂಚಾಯತ್ ಗಳಲ್ಲಿ ಇಂದು ನಡೆಯುವ ಮತದಾನಕ್ಕೆ ತಾಲೂಕಾಡಳಿತ ಸಿದ್ದಗೊಂಡಿದೆ. ಈಗಾಗಲೇ 396 ಮತಗಟ್ಟೆಗಳಿಗೆ ಮತಪೆಟ್ಟಿಗೆಗಳು ಮತ್ತು ಬ್ಯಾಲೆಟ್ ಪೇಪರ್ ಗಳೂ ಸಿದ್ದವಾಗಿದ್ದು, ಮತದಾರರು ಬಂದು ತಮ್ಮ ಹಕ್ಕು ಚಲಾಯಿಸುವುದಕ್ಕೆ ಕ್ಷಣಗಣನೆ ಆರಂಭವಾಗಿದೆ . ಹಾಗೆಯೇ ಬೆಳಿಗ್ಗೆ 7ಗಂಟೆಯಿಂದ 5 ಗಂಟೆಯವರೆಗೆ ಚುನಾವಣೆ ನಡೆಯಲಿದೆ. ಮತಗಟ್ಟೆ ಅಧಿಕಾರಿಗಳಿಗೆ ಬೇಕಾಗುವ ಚುನಾವಣಾ ಸಾಮಾಗ್ರಿಗಳನ್ನು ಹಂಚಿಕೆ ಮಾಡಲಾಗಿದೆ. ಹಾಗೆಯೇ ಗ್ರಾಮ ಪಂಚಾಯತಿ ಚುನಾವಣೆಗೆ ತಮ್ಮ ಅಮೂಲ್ಯವಾದ ಮತವನ್ನು...
ಬಂಟ್ವಾಳ: ಬಂಟ್ವಾಳ ತಾಲೂಕಿನ ಮೆಲ್ಕಾರ್ ಜಂಕ್ಷನ್‌ನಲ್ಲಿ ಮೆಲ್ಕಾರ್ ರಿಕ್ಷಾ ಚಾಲಕರು ,ಮಾಲಕರು ಸಂಘದ ಸಹಕಾರದೊಂದಿಗೆ ಎಸ್ಸೆಸ್ಸಫ್ ಬಂಟ್ವಾಳ ಡಿವಿಷನ್ ಸಮಿತಿ ಕೊಡುಗೆ ಮಾಡಿದಂತಹ ಶುದ್ಧ ಕುಡಿಯುವ ನೀರಿನ ವಾಟರ್ ಕೂಲರ್ ಇಂದಿನಿಂದ ಸಾರ್ವಜನಿಕರ ಉಪಯೋಗಕ್ಕೆ ಲಭ್ಯವಾಗಲಿದೆ. ಇಂದು ಬೆಳಗ್ಗೆ 11 ಗಂಟೆಗೆ ಮೆಲ್ಕಾರ್ ಜಂಕ್ಷನ್’ನಲ್ಲಿ ಸರಳ ರೀತಿಯ ಉದ್ಘಾಟನಾ ಕಾರ್ಯಾಕ್ರಮ ನಡೆದಿದ್ದು, ಈ ಕಾರ್ಯಕ್ರಮದಲ್ಲಿ ಎಸ್.ಎಸ್.ಎಫ್ ಬಂಟ್ವಾಳ ಡಿವಿಷನ್ ನಾಯಕರು, ರಿಕ್ಷಾ ಚಾಲಕ ಮಾಲಕ ಸಂಘದ ಸದಸ್ಯರುಗಳು, ಸ್ಥಳೀಯ ಕೌನ್ಸಿಲರ್’ಗಳು...
ಬಂಟ್ವಾಳ: 2020 ಕ್ಕೆ ಸಂಬಂಧಿಸಿದಂತೆ ಗ್ರಾಮ ಪಂಚಾಯತ್‍ಗಳ ಸಾರ್ವತ್ರಿಕ ಚುನಾವಣೆ ಜಿಲ್ಲೆಯ ಮಂಗಳೂರು, ಮೂಡುಬಿದ್ರೆ ಹಾಗೂ ಬಂಟ್ವಾಳ ತಾಲೂಕುಗಳಲ್ಲಿ ಡಿಸೆಂಬರ್ 20 ರಂದು ಸಂಜೆ 5 ಗಂಟೆಯಿಂದ ಡಿಸೆಂಬರ್ 22 ರಂದು ಮಧ್ಯರಾತ್ರಿ 12 ಗಂಟೆಯವರಗೆ , ಮತ್ತು ಡಿಸೆಂಬರ್ 25 ರಂದು ಸಂಜೆ 5 ಗಂಟೆಯಿಂದ, 27 ರಂದು ಮಧ್ಯರಾತ್ರಿ 12 ಗಂಟೆವರೆಗೆ ಬೆಳ್ತಂಗಡಿ, ಪುತ್ತೂರು, ಸುಳ್ಯ ಹಾಗೂ ಕಡಬ ತಾಲೂಕುಗಳಲ್ಲಿ ಚುನಾವಣೆ ನಡೆಯಲಿರುವ ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿ...
ಬಂಟ್ವಾಳ: ರಾಜ್ಯದ ಹಲವೆಡೆ ಗ್ರಾಮ ಪಂಚಾಯತ್ ಚುನಾವಣೆಗಳನ್ನು ಬಹಿಷ್ಕಾರ ಮಾಡುತ್ತಿರುವ ಸುದ್ಧಿ ಕೇಳಿಬರುತ್ತಿರುವ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಗ್ರಾಮವೊಂದರಲ್ಲಿ ಕೂಡ ಚುನಾವಣಾ ಬಹಿಷ್ಕಾರ ಬ್ಯಾನರ್ ಕಂಡು ಬಂದಿದೆ. ಈ ಚುನಾವಣೆ ಬಹಿಷ್ಕಾರ ಮಾಡುವ ನಿರ್ಧಾರವನ್ನು ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮಪಂಚಾಯಿತಿ ವ್ಯಾಪ್ತಿಗೆ ಒಳಪಟ್ಟ ವಗ್ಗದ ಗ್ರಾಮಸ್ಥರು ಕೈಗೊಂಡಿದ್ದಾರೆ. ತಲೆ ತಲಾಂತರಗಳಿಂದ ಸುಮಾರು 12 ರಷ್ಟು ಮನೆಗಳಿಗೆ ಸಂಪರ್ಕಿಸುತ್ತಿದ್ದ ದಾರಿಗೆ ಅಡ್ಡಲಾಗಿ ಮಾಜಿ ಪಂಚಾಯತ್ ಉಪಾಧ್ಯಕ್ಷರು ತಡೆಗೋಡೆ...